Homeಕರ್ನಾಟಕ‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’: ಬಿಜೆಪಿ ವಿರುದ್ಧ ಕಾಂಗ್ರೆಸ್‌‌ನಿಂದ ಹಾಡು ಬಿಡುಗಡೆ

‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’: ಬಿಜೆಪಿ ವಿರುದ್ಧ ಕಾಂಗ್ರೆಸ್‌‌ನಿಂದ ಹಾಡು ಬಿಡುಗಡೆ

ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿ ಮತ್ತು ವೆಬ್ ಸೈಟ್‌‌ ಅನ್ನು ಕೂಡಾ ಕಾಂಗ್ರೆಸ್ ಪ್ರಾರಂಭಿಸಿದೆ

- Advertisement -
- Advertisement -

ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ‘40% ಸರ್ಕಾರ- ಬಿಜೆಪಿ ಅಂದ್ರೆ ಭ್ರಷ್ಟಾಚಾರ’ ಅಭಿಯಾನವನ್ನು ಕಾಂಗ್ರೆಸ್‌ ಮಂಗಳವಾರ ಉದ್ಘಾಟನೆ ಮಾಡಿದೆ. ಬಿಜೆಪಿ ಸರ್ಕಾರದ 40% ಕಮಿಷನ್ ಸೇರಿದಂತೆ ಲಂಚದ ರೇಟ್ ಕಾರ್ಡ್‌ ಅನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್‌, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿಕೆ ಹರೀಶ್‌ ಕುಮಾರ್‌‌ ಸೇರಿದಂತೆ ಇತರ ಕಾಂಗ್ರೆಸ್ ನಾಯಕರು ಜಂಟಿ ಮಾಧ್ಯಮ ಗೋಷ್ಠಿಯಲ್ಲಿ ಬಿಡುಗಡೆಗೊಳಿಸಿದ್ದಾರೆ.

‘ಭ್ರಷ್ಟಾಚಾರ, ಭ್ರಷ್ಟಾಚಾರ ಇದು ನಲ್ವತ್ತು ಪರ್ಸೆಂಟ್‌‌‌ನ ಸರ್ಕಾರ’ ಎಂಬ ಹಾಡನ್ನು ಕಾಂಗ್ರೆಸ್‌ ಈಗಾಗಲೆ ಸಾಮಾಜಿಕ ಮಾಧ್ಯಮಗಳಲ್ಲಿ ಬಿಡುಗಡೆ ಮಾಡಿದ್ದು ಜನರ ಗಮನ ಸೆಳೆದಿದೆ. ಕಳೆದ ಹಲವು ತಿಂಗಳಿನಿಂದ 40% ಕಮಿಷನ್ ವಿಚಾರವು ರಾಜ್ಯದ ಬಿಜೆಪಿ ಸರ್ಕಾರಕ್ಕೆ ಭಾರಿ ಹಿನ್ನೆಡೆ ಉಂಟು ಮಾಡುತ್ತಿದೆ. ಗುತ್ತಿಗೆದಾರರ ಸಂಘದ ಮುಖಂಡ ಕೆಂಪ್ಪಯ್ಯ ಅವರು ಪ್ರಧಾನ ಮಂತ್ರಿ ಮೋದಿಗೆ ಪತ್ರ ಬರೆದು ಈ ಬಗ್ಗೆ ದೂರು ಕೂಡಾ ನೀಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, “ರಾಜ್ಯ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೂ ನಾವು ಭ್ರಷ್ಟಾಚಾರದ ವಿಚಾರವನ್ನು ಪಕ್ಷದ ಕಚೇರಿಯಲ್ಲಿ ಮಾತನಾಡುತ್ತಿರುದೇಕೆ ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿರಬಹುದು. ಅಧಿವೇಶನ 10 ದಿನಗಳ ಕಾಲ ನಡೆಯಲಿದ್ದು, ಇಂದು ಪ್ರಕೃತಿ ವಿಕೋಪದ ಚರ್ಚೆ ಆಗುತ್ತಿದೆ. ಅಧಿವೇಶನದಲ್ಲಿ ಭ್ರಷ್ಟಾಚಾರದ ವಿಚಾರವನ್ನು ವ್ಯಾಪಕವಾಗಿ ಚರ್ಚೆ ಮಾಡಬೇಕಿದ್ದು, ಕಾಂಗ್ರೆಸ್ ಈ ಜವಾಬ್ದಾರಿ ವಹಿಸಿಕೊಂಡಿದೆ. ನಮ್ಮ ಶಾಸಕರುಗಳಿಗೆ ಜವಾಬ್ದಾರಿ ನೀಡಿದ್ದು, ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಚರ್ಚೆ ಮಾಡಲು ತಿಳಿಸಿದ್ದೇವೆ. ಅಧಿವೇಶನದಲ್ಲಿ ಹಾಗೂ ಹೊರಗೆ ರಾಜ್ಯದ ಇತರೆ ಭಾಗಗಳಲ್ಲಿ ಸಾರ್ವಜನಿಕವಾಗಿ ಈ ಬಗ್ಗೆ ಚರ್ಚೆ ಆಗಬೇಕಿದೆ” ಎಂದು ಹೇಳಿದ್ದಾರೆ.

“ನಮ್ಮ ರಾಜ್ಯ ಹಾಗೂ ಬೆಂಗಳೂರು ನಗರ ಐಟಿ ಕ್ಯಾಪಿಟಲ್, ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ, ಎಜುಕೇಶನ್ ಹಬ್ ಎಂದು ಖ್ಯಾತಿ ಪಡೆದಿದೆ. ಇದಕ್ಕೆ ಹಲವರ ಕೊಡುಗೆ ಇದೆ. ಆದರೆ ಈಗ ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ‘ದೇಶದ ಭ್ರಷ್ಟಾಚಾರದ ರಾಜಧಾನಿ’ ಎಂದು ಕುಖ್ಯಾತಿ ಬಂದಿದೆ. ಭ್ರಷ್ಟಾಚಾರದ ವಿಚಾರದಲ್ಲಿ ಮಾಧ್ಯಮಗಳು ನಮಗಿಂತ ಹೆಚ್ಚಿನ ತನಿಖೆ ಮಾಡಿದ್ದು, ನಿಮಗೆ ಜನರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ” ಎಂದು ಅವರು ಮಾಧ್ಯಮಗಳನ್ನು ಶ್ಲಾಘಿಸಿದರು.

ಇದನ್ನೂ ಓದಿ: 1% ಕಮಿಷನ್‌‌‌ ಲಂಚ ಆರೋಪ: ಆರೋಗ್ಯ ಸಚಿವನನ್ನು ವಜಾಗೊಳಿಸಿದ ಪಂಜಾಬ್ ಸಿಎಂ!

“ಡಬಲ್ ಇಂಜಿನ್ ಸರ್ಕಾರ ಬಂದರೆ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದ್ದರು. ಆದರೆ ಈ ಡಬಲ್ ಇಂಜಿನ್ ಸರ್ಕಾರ ಬಂದ ನಂತರ ದೆಹಲಿಯಿಂದ ರಾಜ್ಯಕ್ಕೆ ಎಷ್ಟು ಅನುದಾನ ಬಂದಿದೆ ಎಂಬ ಪಟ್ಟಿಯನ್ನು ಸರ್ಕಾರ ನೀಡಲಿ. ಬೇರೆ ರಾಜ್ಯಗಳಲ್ಲಿ ಪ್ರವಾಹ ಬಂದಾಗ ಖುದ್ದು ವೀಕ್ಷಣೆ ಮಾಡುವ ಪ್ರಧಾನಿಗಳು ನಮ್ಮ ರಾಜ್ಯ ಸತತವಾಗಿ ಪ್ರವಾಹದಿಂದ ತತ್ತರಿಸುತ್ತಿದ್ದರೂ ಈ ಕಡೆ ತಿರುಗಿ ನೋಡಿಲ್ಲ. ನಮ್ಮ ರಾಜ್ಯಕ್ಕೆ ನೀಡಬೇಕಾಗಿದ್ದ ನ್ಯಾಯ ನೀಡಲಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಮಂತ್ರಿಗಳು ಬೆಂಗಳೂರಿಗೆ ಬಂದು ಸಬ್ ಅರ್ಬನ್ ರೈಲು ಯೋಜನೆ ಉದ್ಘಾಟಿಸಿ ಹೋದರು. ಈ ಯೋಜನೆ ಉದ್ಘಾಟನಾ ಕಾರ್ಯಕ್ರಮದ ಜಾಹೀರಾತಿನಲ್ಲೇ ಉಳಿದಿದೆಯೇ ಹೊರತು ಚಾಲ್ತಿ ಆಗಲಿಲ್ಲ. ಈ ಸರ್ಕಾರ ಬಂದ ನಂತರ ರಾಜ್ಯಕ್ಕೆ ಯಾವುದಾದರೂ ರಾಷ್ಟ್ರೀಯ ಯೋಜನೆ ನೀಡಿದ್ದೀರಾ? ಇಲ್ಲ. ಆದರೆ ಈ ಸರ್ಕಾರಕ್ಕೆ ಭ್ರಷ್ಟಾಚಾರದ ಹೆಸರು ಬಂದಿದೆ. ಪೊಲೀಸ್ ಇಲಾಖೆಯಲ್ಲಿ ಎಲ್ಲ ಹುದ್ದೆಗಳಿಗೂ ಒಂದೊಂದು ದರ ನಿಗದಿ ಮಾಡಿದ್ದೀರಿ. ಸರ್ಕಾರಿ ಇಲಾಖೆಗಳಲ್ಲಿನ ಹುದ್ದೆಗಳ ನೇಮಕಾತಿಯಲ್ಲಂತೂ ಭ್ರಷ್ಟಾಚಾರ ತಾಂಡವವಾಡುತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 40% ಕಮಿಷನ್ ಬ್ಯಾನರ್ ಹಾಕಿ ಶಿವಾನಂದ ಮೇಲ್ಸೇತುವೆ ಉದ್ಘಾಟಿಸಿದ ಆಪ್ ಕಾರ್ಯಕರ್ತರ ಬಂಧನ

‘‘ಬಿಜೆಪಿ ಚುನಾವಣೆ ಪೂರ್ವದಲ್ಲಿ 600 ಭರವಸೆ ನೀಡಿತ್ತು. ಅದರಲ್ಲಿ 90%ದಷ್ಟು ಮಾತನ್ನು ಉಳಿಸಿಕೊಂಡಿಲ್ಲ. ಬಸವಣ್ಣನ ನಾಡಿನಲ್ಲಿ ನುಡಿದಂತೆ ನಡೆಯಬೇಕು. ಆದರೆ ನಿಮ್ಮಿಂದ ಅದು ಸಾಧ್ಯವಾಗಿಲ್ಲ. ನಾವು ದಿನನಿತ್ಯ ಪ್ರಶ್ನೆ ಕೇಳುತ್ತಿದ್ದು ಒಂದು ಪ್ರಶ್ನೆಗೂ ಉತ್ತರ ನೀಡಲು ನಿಮ್ಮಿಂದ ಸಾಧ್ಯವಾಗಿಲ್ಲ. ಬೆಂಗಳೂರು ವಿವಿಯ ರಿಜಿಸ್ಟಾರ್ ಪ್ರೊ. ಅಶೋಕ್ ಉಪಕುಲಪತಿ ಆಗಲು ಹೋಗಿ ಆತ್ಮಹತ್ಯೆ ಮಾಡಿಕೊಂಡರು. ಈ ಬಗ್ಗೆ ಸರ್ಕಾರ ತನಿಖೆ ಮಾಡಲಿಲ್ಲ ಯಾಕೆ? ಯಾವ ಕಾಲದಲ್ಲೂ ಈ ಮಟ್ಟದ ಭ್ರಷ್ಟಾಚಾರ ಇರಲಿಲ್ಲ” ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಸಹಾಯವಾಣಿಯನ್ನೂ ತೆರೆದಿದ್ದು, ಭ್ರಷ್ಟಾಚಾರ ಕಂಡಲ್ಲಿ 8447704040 ನಂಬರ್‌‌ಗೆ ಕರೆ ಅಥವಾ ವಾಟ್ಸಪ್ ಮೂಲಕ ತಿಳಿಸುವಂತೆ ಕೇಳಿದೆ. ಅಷ್ಟೆ ಅಲ್ಲದೆ www.40percentsarkaara.com ಎಂಬ ವೆಬ್ ಸೈಟ್‌‌ನಲ್ಲಿ ಕೂಡಾ ತಿಳಿಸಬಹುದು ಎಂದು ಹೇಳಿದ್ದು, ಮಾಹಿತಿ ನೀಡಿದವರ ಮಾಹಿತಿಯನ್ನು ಗೌಪ್ಯವಾಗಿ ಇಡುತ್ತೇವೆ ಎಂದು ಭರವಸೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...