Homeಮುಖಪುಟಭ್ರಷ್ಟಾಚಾರ - ಸುಲಿಗೆ ಪ್ರಕರಣ; ಬಿಎಸ್‌ವೈ ವಿರುದ್ಧ ಮರು ವಿಚಾರಣೆಗೆ ಹೈಕೋರ್ಟ್ ಆದೇಶ

ಭ್ರಷ್ಟಾಚಾರ – ಸುಲಿಗೆ ಪ್ರಕರಣ; ಬಿಎಸ್‌ವೈ ವಿರುದ್ಧ ಮರು ವಿಚಾರಣೆಗೆ ಹೈಕೋರ್ಟ್ ಆದೇಶ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರರ ವಿರುದ್ಧ ದಾಖಲಾಗಿದ್ದ ಭ್ರಷ್ಟಾಚಾರ ಸುಲಿಗೆ ಪ್ರಕರಣವನ್ನು ಮರು ವಿಚಾರಣೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ಇಂದು ಆದೇಶಿಸಿದೆ.

2020ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ಅವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ದೂರು ದಾಖಲಿಸಲಾಗಿತ್ತು.

ಬಿ.ವೈ ವಿಜಯೇಂದ್ರ ಮತ್ತು ಶಶಿಧರ ಮರಡಿಯವರು ರಾಮಲಿಂಗಂ ಕನ್ಸ್‌ಸ್ಟ್ರಕ್ಸನ್‌ ಎಂಬುವವರಿಂದ ಹಣ ನೀಡದಿದ್ದರೆ ನಿಮ್ಮ ಬಿಡಿಎ ಪ್ರಾಜೆಕ್ಟ್ ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿ ಆರ್‌ಟಿಜಿಎಸ್ ಮೂಲಕ ಅಪಾರ ಪ್ರಮಾಣದ (17 ಕೋಟಿ ರೂಗಳು) ಹಣವನ್ನು ಸುಲಿಗೆ ಮಾಡಿದ್ದಾರೆ ಎಂಬ ಆರೋಪ ಮಾಡಲಾಗಿತ್ತು. ಈ ಕುರಿತು ವಾಟ್ಸಾಪ್ ಚಾಟ್ ಒಂದು ಲೀಕ್ ಹಾಕಿ ಭಾರೀ ಕೋಲಾಹಲ ಸೃಷ್ಟಿಸಿತ್ತು. ಇದನ್ನು ನಿರಂತರವಾಗಿ ವರದಿ ಮಾಡಿದ ಪವರ್ ಟಿವಿ ಮೇಲೆ ದಾಳಿ ನಡೆಸಲಾಗಿತ್ತು.

ಈ ಪ್ರಕರಣದ ಕುರಿತು ಸಿಎಂ ಯಡಿಯೂರಪ್ಪ ಮತ್ತವರ ಕುಟುಂಬದವರ ವಿರುದ್ಧ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಜಾರಿ ನಿರ್ದೇಶನಾಲಯ (ಇಡಿ)ಕ್ಕೆ ಮತ್ತು ರಾಜ್ಯಪಾಲರಿಗೆ ದೂರು ನೀಡಿದ್ದರು. ಆನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿಯೂ ದೂರು ದಾಖಲಿಸಲಾಗಿತ್ತು. ಆದರೆ ಆ ನ್ಯಾಯಾಲಯ ರಾಜ್ಯಪಾಲರ ಒಪ್ಪಿಗೆ ಇಲ್ಲದ ಕಾರಣ ಅರ್ಜಿಯನ್ನು ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.

ಈಗ ಹೈಕೋರ್ಟ್ ಆ ಪ್ರಕರಣದ ಮರು ವಿಚಾರಣೆ ನಡೆಸಲು ಸಮ್ಮತಿ ಸೂಚಿಸಿದೆ. ಹಾಗಾಗಿ ಯಡಿಯೂರಪ್ಪ ಕುಟುಂಬದ ವಿರುದ್ಧ ಮತ್ತೊಮ್ಮೆ ಮರುತನಿಖೆ ನಡೆಯಲಿದೆ.

ಇದನ್ನೂ ಓದಿ: ಅಕ್ರಮ‌ ಹಣ ವರ್ಗಾವಣೆ ಆರೋಪ: ಬಿಎಸ್‌ವೈ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...