Homeಮುಖಪುಟದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?: ಸಿದ್ದರಾಮಯ್ಯ

ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ?: ಸಿದ್ದರಾಮಯ್ಯ

- Advertisement -
- Advertisement -

“ದೇವರಿಂದಲೂ ಕಮಿಷನ್ ಕೇಳುವ ನಿಮ್ಮದು ಯಾವ ರೀತಿಯ ಧರ್ಮ ರಕ್ಷಣೆ” ಎಂದು ಬಸವರಾಜ ಬೊಮ್ಮಾಯಿಯವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

“ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದು ಶಿರಹಟ್ಟಿ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಆಕ್ಷೇಪ ವ್ಯಕ್ತಪಡಿಸಿರುವುದನ್ನು ಉಲ್ಲೇಖಿಸಿರುವ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಧರ್ಮ ರಕ್ಷಕರು ಎಂದು ತಮ್ಮನ್ನು ಕರೆದುಕೊಳ್ಳುವ ಬಿಜೆಪಿಯವರು ಮಠ, ಮಂದಿರಗಳ ಅನುದಾನವನ್ನೂ ಬಿಡದೆ 30% ಕಮಿಷನ್ ತಿಂದು ತೇಗುತ್ತಿರುವುದು ನಾಚಿಕೆಗೇಡು. 10% ಡಿಸ್ಕೌಂಟ್ ಯಾಕೆ? ಅದನ್ನು ತಿಂದು ಬಿಡಿ ಎಂದು ವ್ಯಂಗ್ಯವಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ ಎಂದು ಖಾಲಿ ಬುಟ್ಟಿಯ ಮುಂದೆ ನಿಂತು ಪುಂಗಿ ಊದಬೇಡಿ, ದಾಖಲೆಗಳನ್ನು ಬಿಡುಗಡೆ ಮಾಡಿ‌ ಮಾತನಾಡಿ. ಬುಟ್ಟಿಯ ಒಳಗಿರುವುದು ನಾಗರ ಹಾವೋ, ಹಾವಿನಪುರದ ಹಾವೋ ನೋಡಿಯೇ ಬಿಡೋಣ ಎಂದು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, “ಈ ಅನ್ಯಾಯಕ್ಕೆ ಯಾರು ಹೊಣೆ? ಮಾನ್ಯ ಮುಖ್ಯಮಂತ್ರಿಗಳೇ ಇದಕ್ಕೇನಂತೀರಿ? ಉತ್ತರ ಕೊಡಿ. ರಾಜ್ಯದಲ್ಲಿ ಎಸಿಬಿ ಇನ್ನೂ ಜೀವಂತವಾಗಿದೆಯೇ? ಧರ್ಮರಕ್ಷಣೆ ಎನ್ನುವುದು ಮುಖವಾಡ, ಭ್ರಷ್ಟಾಚಾರ ಅಸಲಿ ಮುಖವೇ?” ಎಂದು ಪ್ರಶ್ನಿಸಿದ್ದಾರೆ.

ಸ್ವಾಮೀಜಿ ಹೇಳಿದ್ದೇನು?

ಬೀಳಗಿ ತಾಲ್ಲೂಕಿನ ಬಾಡಗಂಡಿಯಲ್ಲಿ ಉತ್ತರ ಕರ್ನಾಟಕ ಸ್ವಾಭಿಮಾನಿ ವೇದಿಕೆ ಭಾನುವಾರ ಆಯೋಜಿಸಿದ್ದ ಕೃಷ್ಣಾ-ಮಹಾದಾಯಿ-ನವಲಿ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿರುವ ದಿಂಗಾಲೇಶ್ವರ ಸ್ವಾಮೀಜಿ, “ಮಠಗಳಿಗೆ ಸರ್ಕಾರ ಬಿಡುಗಡೆ ಮಾಡುವ ಅನುದಾನ ಪಡೆಯಲು ಶೇ. 30ರಷ್ಟು ಕಮಿಷನ್ ನೀಡಬೇಕಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಇಲ್ಲಿಗೆ ಬಂದು ನಿಂತಿದೆ” ಎಂದಿದ್ದಾರೆ.

ಮುಂದುವರಿದು, “ಮಠಗಳಿಗೆ ಬಿಡುಗಡೆಯಾದ ಅನುದಾನದಲ್ಲಿ ಪರ್ಸೆಂಟೇಜ್ ಕಡಿತ ಆದ ನಂತರವೇ ಕಟ್ಟಡದ ಕೆಲಸ ಆರಂಭವಾಗುತ್ತದೆ. ಇಲ್ಲದಿದ್ದರೆ ಆಗೊಲ್ಲ. ಇಷ್ಟು ರೊಕ್ಕ ಕಡಿತ ಮಾಡದಿದ್ದರೆ ನಿಮ್ಮ ಕೆಲಸ ಆಗುವುದಿಲ್ಲ ಎಂದು ಆ ಅಧಿಕಾರಿಗಳು ನಮಗೆ ಹೇಳುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: 40% ಕಮಿಷನ್‌ ನಿಜ; 25,000 ಕೋಟಿ ರೂ. ಪೆಂಡಿಂಗ್ ಬಿಲ್ ಇದೆ: ಗುತ್ತಿಗೆದಾರರ ಸಂಘದ ಅಧ್ಯಕ್ಷರ ಗಂಭೀರ ಆರೋಪ

ಗೋವಿನ ಮೇವಿನಲ್ಲೂ ಕಮಿಷನ್‌

ರಾಜ್ಯದ ಗೋ ಶಾಲೆಗಳಿಗೆ ಹಸಿರು ಮೇವು ಮತ್ತು ಒಣ ಮೇವು ಸರಬರಾಜು ಮಾಡಿರುವ ಸರಬರಾಜುದಾರರಿಗೆ ಬಾಕಿ ಉಳಿಸಿಕೊಂಡಿರುವ ಕನಿಷ್ಠ 30-40 ಲಕ್ಷ ರೂ.ಗಳನ್ನು ಪಾವತಿಸಲು ಕಂದಾಯ ಇಲಾಖೆಯ ಅಧೀನದಲ್ಲಿರುವ ಜಿಲ್ಲಾಧಿಕಾರಿಗಳು ಮತ್ತು ಪಶುಪಾಲನೆ, ಪಶು ವೈದ್ಯ ಇಲಾಖೆಯ ಉನ್ನತ ಅಧಿಕಾರಿಗಳು ಲಂಚ ಹಾಗೂ ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದಾರೆಂದು ಪ್ರಧಾನಿಯವರಿಗೆ ದೂರು ಸಲ್ಲಿಸಲಾಗಿದೆ.

ಹುಬ್ಬಳ್ಳಿ ಮೂಲದ ಹರ್ಷ ಅಸೋಸಿಯೇಟ್ಸ್‌ನ ಜಿ.ಎಂ.ಸುರೇಶ್ ಎಂಬುವರು 2022ರ ಏಪ್ರಿಲ್‌ 14ರಂದು ದೂರು ನೀಡಿದ್ದಾರೆ. ಪಶುಪಾಲನೆ, ಪಶುವೈದ್ಯ ಸೇವಾ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಕಮಿಷನ್ ದಾಹವನ್ನು ದೂರಿನಲ್ಲಿ ತೆರೆದಿಟ್ಟಿದ್ದಾರೆ ಎಂದು ‘ದಿ ಫೈಲ್‌’ ಇತ್ತೀಚೆಗೆ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅಷ್ಟೇ ಅಲ್ಲ ಹೊಸದಾಗಿ ಮದುವೆಯಾದ ಹುಡುಗ ಹುಡುಗಿಯವರ ಮೊದಲನೇ ರಾತ್ರಿ ಗೂ ಕೂಡ ಕಮಿಷನ್ ಕೇಳುತ್ತಾರೆ ಈ ಜನ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...