Homeಮುಖಪುಟಜ್ಞಾನೇಶ್ ಕುಮಾರ್ ವಿರುದ್ಧ ಭ್ರಷ್ಟಾಚಾರ ತನಿಖೆ: ಕೇರಳದ ವಿಜಿಲೆನ್ಸ್ ಮುಂದೆ ಹಾಜರಾದ ಗುತ್ತಿಗೆದಾರ; ಹಿಂದಿನ ತನಿಖೆ...

ಜ್ಞಾನೇಶ್ ಕುಮಾರ್ ವಿರುದ್ಧ ಭ್ರಷ್ಟಾಚಾರ ತನಿಖೆ: ಕೇರಳದ ವಿಜಿಲೆನ್ಸ್ ಮುಂದೆ ಹಾಜರಾದ ಗುತ್ತಿಗೆದಾರ; ಹಿಂದಿನ ತನಿಖೆ ಸಾಕ್ಷ್ಯ ಮುಚ್ಚಿಹಾಕಿದ ಆರೋಪ

- Advertisement -
- Advertisement -

ತಿರುವನಂತಪುರಂ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ವಿರುದ್ಧದ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ತನಿಖೆ ಮತ್ತೆ ಮುನ್ನೆಲೆಗೆ ಬಂದಿದೆ. ಕೇರಳ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ನಡೆದ ರಸ್ತೆ ನಿರ್ಮಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತು ಗುತ್ತಿಗೆದಾರ ವಿ.ಒ. ಸಾಜನ್ ಸೋಮವಾರ ಕೇರಳದ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳದ (ವಿಎಸಿಬಿ) ಮುಂದೆ ಹಾಜರಾಗಿದ್ದಾರೆ. ಈ ಹಿಂದಿನ ತನಿಖೆ ಉದ್ದೇಶಪೂರ್ವಕವಾಗಿ ಅಸಮರ್ಪಕವಾಗಿ ನಡೆಸಲಾಗಿತ್ತು. ಜ್ಞಾನೇಶ್ ಕುಮಾರ್ ಅವರನ್ನು ರಕ್ಷಿಸುವ ರೀತಿಯಲ್ಲಿ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದ್ದು, ಅವರ ಪಾತ್ರವನ್ನು ಸೂಚಿಸುವ ನಿರ್ಣಾಯಕ ಸಾಕ್ಷ್ಯಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಸಾಜನ್ ಗಂಭೀರ ಆರೋಪ ಮಾಡಿದ್ದಾರೆ.

ಕೊಲ್ಲಂ ಜಿಲ್ಲೆಯ ಚಡಯಮಂಗಲ ಮೂಲದ ಗುತ್ತಿಗೆದಾರ ಸಾಜನ್, ತಿರುವನಂತಪುರಂನ ಮುತ್ತಥರದಲ್ಲಿರುವ ವಿಜಿಲೆನ್ಸ್ ಕಚೇರಿಗೆ ಹಾಜರಾಗುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕರಣದ ಕುರಿತು ಸಾಕಷ್ಟು ಮಾಹಿತಿ ಮತ್ತು ಸಾಕ್ಷ್ಯಗಳು ಲಭ್ಯವಿದ್ದರೂ ಆರಂಭಿಕ ಹಂತದಲ್ಲಿ ಸಮಗ್ರ ತನಿಖೆ ನಡೆಸಿರಲಿಲ್ಲ ಎಂದು ಹೇಳಿದ್ದಾರೆ. “ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿ ಲಭ್ಯವಿದೆ. ಆದರೆ ಆರಂಭದಲ್ಲೇ ವಿವರವಾದ ತನಿಖೆ ನಡೆಸಲಾಗಿಲ್ಲ. ಅಂತಹ ತನಿಖೆ ನಡೆಯದ ಕಾರಣ ಜ್ಞಾನೇಶ್ ಕುಮಾರ್ ಅವರನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಲಿಲ್ಲ” ಎಂದು ಅವರು ಆರೋಪಿಸಿದ್ದಾರೆ.

ಪ್ರಕರಣದ ಪ್ರಮುಖ ಸಾಕ್ಷಿಗಳ ಹೇಳಿಕೆಗಳನ್ನು ಬದಲಾಯಿಸಲು ಒತ್ತಡ ಹೇರಲಾಗಿತ್ತು ಎಂಬ ಗಂಭೀರ ಆರೋಪವನ್ನೂ ಸಾಜನ್ ಮಾಡಿದ್ದಾರೆ. ಯೋಜನೆಯ ಗುತ್ತಿಗೆ ಪಡೆದ ಕಂಪನಿಯ ಮುಖ್ಯ ವಾಣಿಜ್ಯ ವ್ಯವಸ್ಥಾಪಕರು ಆರಂಭದಲ್ಲಿ ಜ್ಞಾನೇಶ್ ಕುಮಾರ್ ಅವರ ಪಾತ್ರವನ್ನು ಸೂಚಿಸುವ ಹೇಳಿಕೆ ನೀಡಿದ್ದರು. ಆದರೆ, ಸುಮಾರು ನಾಲ್ಕು ತಿಂಗಳ ಬಳಿಕ ಅವರನ್ನು ಮತ್ತೆ ವಿಚಾರಣೆಗೆ ಕರೆಸಲಾಗಿತ್ತು. ಈ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಅವರ ಹೆಸರನ್ನು ಹೇಳಿಕೆಯಿಂದ ಕೈಬಿಡದಿದ್ದರೆ ಕಂಪನಿಯ ಬಿಲ್‌ಗಳನ್ನು ಮಂಜೂರು ಮಾಡುವಲ್ಲಿ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಲಾಗಿತ್ತು ಎಂಬುದು ಸಾಜನ್ ಆರೋಪ. ಒತ್ತಡದ ಪರಿಣಾಮವಾಗಿ ಎರಡನೇ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಅದರಲ್ಲಿ ಕುಮಾರ್ ಅವರ ಹೆಸರನ್ನು ಕೈಬಿಡಲಾಗಿದೆ ಎಂದು ಅವರು ಹೇಳಿದ್ದಾರೆ. ಈ ಆರೋಪಗಳಿಗೆ ಸಂಬಂಧಿಸಿದಂತೆ ಸಾಕ್ಷ್ಯಚಿತ್ರ ದಾಖಲೆಗಳೂ ತಮ್ಮ ಬಳಿ ಇವೆ ಎಂದು ತಿಳಿಸಿರುವ ಸಾಜನ್, ಈಗ ನಡೆಯುತ್ತಿರುವ ತನಿಖೆಯಲ್ಲಿ ಅವುಗಳನ್ನು ಪರಿಶೀಲಿಸಲಾಗುತ್ತದೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.

ಕೇರಳದ ಗೃಹ ಸಚಿವ ರಮೇಶ್ ಚೆನ್ನಿತ್ತಲ ಇತ್ತೀಚೆಗೆ ಈ ಪ್ರಕರಣದ ಕುರಿತು ತನಿಖೆಗೆ ಆದೇಶಿಸಿದ್ದರು. 2006ರಲ್ಲಿ ಜ್ಞಾನೇಶ್ ಕುಮಾರ್ ಕೇರಳ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಯಾಗಿದ್ದಾಗ ಕೈಗೆತ್ತಿಕೊಳ್ಳಲಾದ ಕೇರಳ ರಾಜ್ಯ ಸಾರಿಗೆ ಯೋಜನೆ (ಕೆಎಸ್‌ಟಿಪಿ)ಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಅಂಗಮಾಲಿಯಿಂದ ತಿರುವನಂತಪುರಂವರೆಗಿನ ಎಂಸಿ ರಸ್ತೆಯ ಪುನರ್‌ನಿರ್ಮಾಣಕ್ಕಾಗಿ 2006ರಲ್ಲಿ ವಿಶ್ವಬ್ಯಾಂಕ್ ಅನುದಾನದೊಂದಿಗೆ 215 ಕೋಟಿ ರೂಪಾಯಿ ವೆಚ್ಚದ ಯೋಜನೆ ರೂಪಿಸಲಾಗಿತ್ತು. ಈ ಕಾಮಗಾರಿಯ ಗುತ್ತಿಗೆಯನ್ನು ಮಲೇಷ್ಯಾ ಮೂಲದ ಸಂಸ್ಥೆ ಮತ್ತು ಭಾಗೀರಥ ಎಂಜಿನಿಯರಿಂಗ್ ನಡುವಿನ ಜಂಟಿ ಉದ್ಯಮವಾದ ಪಿಎಟಿಐ-ಬಿಇಎಲ್‌ಗೆ ನೀಡಲಾಗಿತ್ತು. ಈ ಯೋಜನೆಯಲ್ಲಿ ಹಲವು ಅಕ್ರಮಗಳು ನಡೆದಿದ್ದವು ಎಂಬ ಆರೋಪ ಕೇಳಿಬಂದಿತ್ತು. ಮಲೇಷ್ಯಾ ಕಂಪನಿಯ ಯೋಜನಾ ಎಂಜಿನಿಯರ್ ಲೀ ಸೀ ಬೀನ್ ನಿರ್ಮಾಣ ಕಾಮಗಾರಿಯ ಸಂದರ್ಭದಲ್ಲಿ ಹಲವು ದೂರುಗಳನ್ನು ಸಲ್ಲಿಸಿದ್ದರು. ಬಳಿಕ ಮಲೇಷ್ಯಾಕ್ಕೆ ಮರಳಿದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ವರದಿ ಉಲ್ಲೇಖಿಸಿದೆ.

ಲೀ ಸೀ ಬೀನ್ ಅವರ ಸಾವಿನ ನಂತರ ಮತ್ತು ಜ್ಞಾನೇಶ್ ಕುಮಾರ್ ಕೇಂದ್ರ ಸರ್ಕಾರದ ನಿಯೋಜನೆಯ ಮೇರೆಗೆ ನವದೆಹಲಿಗೆ ತೆರಳಿದ ಹಿನ್ನೆಲೆಯಲ್ಲಿ 2006ರಲ್ಲಿ ಈ ಸಂಬಂಧದ ತನಿಖೆ ಮುಂದುವರಿಯಲಿಲ್ಲ ಎನ್ನಲಾಗಿದೆ. ಇದೀಗ ಹಲವು ವರ್ಷಗಳ ಬಳಿಕ ಪ್ರಕರಣ ಮತ್ತೆ ತನಿಖೆಯ ಹಂತಕ್ಕೆ ಬಂದಿರುವುದು ಮಹತ್ವ ಪಡೆದುಕೊಂಡಿದೆ.

ಇನ್ನೊಂದೆಡೆ, ದೇಶದ ಮುಖ್ಯ ಚುನಾವಣಾ ಆಯುಕ್ತರಾಗಿರುವ ಜ್ಞಾನೇಶ್ ಕುಮಾರ್ ವಿರುದ್ಧದ ಈ ಬೆಳವಣಿಗೆ ರಾಜಕೀಯವಾಗಿಯೂ ಮಹತ್ವ ಪಡೆದುಕೊಂಡಿದೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿಚಾರವಾಗಿ ಕಾಂಗ್ರೆಸ್ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲೇ ಈ ತನಿಖೆ ಆರಂಭವಾಗಿದೆ. ಸದ್ಯದ ಆರೋಪಗಳ ಕುರಿತು ಜ್ಞಾನೇಶ್ ಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಿಂದಿನ ತನಿಖೆಯಲ್ಲಿ ಸಾಕ್ಷ್ಯಗಳನ್ನು ಮುಚ್ಚಿಹಾಕಲಾಗಿದೆ ಎಂಬ ಗುತ್ತಿಗೆದಾರರ ಆರೋಪ ಮತ್ತು ಇದೀಗ ಆರಂಭವಾಗಿರುವ ಹೊಸ ತನಿಖೆ ಪ್ರಕರಣಕ್ಕೆ ಯಾವ ತಿರುವು ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಂಧನೂರು| ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ದೌರ್ಜನ್ಯ; ತಿಡಿಗೋಳದಲ್ಲಿ ಬೃಹತ್‌ ಪ್ರತಿಭಟನೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ಇತ್ತೀಚೆಗೆ ಜರುಗಿದ ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ಸವರ್ಣೀಯರಿಂದ ನಡೆದ ದೌರ್ಜನ್ಯ, ಸಾಮೂಹಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆ ಆಚರಣೆ ವಿರೋಧಿಸಿ ದಲಿತ ಮತ್ತು ಪ್ರಗತಿಪರ...

ಗೌರಿ ಲಂಕೇಶ್, ಕಲ್ಬುರ್ಗಿ ಹತ್ಯೆ ಪ್ರಕರಣ: 6 ತಿಂಗಳಲ್ಲಿ ವಿಚಾರಣೆ ಮುಗಿಸಿ ಆರೋಪಿಗಳನ್ನು ಜೈಲಿಗೆ ಕಳುಹಿಸುವೆ – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣಗಳ ವಿಚಾರಣೆಯನ್ನು ಮುಂಬರುವ ಆರು ತಿಂಗಳೊಳಗೆ ಪೂರ್ಣಗೊಳಿಸಿ, ಆರೋಪಿಗಳನ್ನು ಜೈಲಿಗೆ ಕಳುಹಿಸುವುದಾಗಿ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಕೇರಳದ...

ದೀಪಾವಳಿಯ ಮರುದಿನ ದಟ್ಟ ಹೊಗೆಯಿಂದ ಮುಸುಕಾದ ದೆಹಲಿ ಆಕಾಶ; ಅಪಾಯಕಾರಿ ಮಟ್ಟಕ್ಕೆ ಏರಿದ ವಾಯುಮಾಲಿನ್ಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಿಗದಿತ ಸಮಯ ಮೀರಿಯೂ ನಗರದಾದ್ಯಂತ ಪಟಾಕಿ ಸಿಡಿಸಿದ ಪರಿಣಾಮ, ಸೋಮವಾರ ಬೆಳಗ್ಗೆ ದೆಹಲಿ ತೀವ್ರ ವಾಯುಮಾಲಿನ್ಯದ ಹೊಡೆತಕ್ಕೆ ಸಿಲುಕಿದೆ. ದಟ್ಟ ಬೂದು ಬಣ್ಣದ ಹೊಗೆಯ ಮಂಜು ನಗರದ ಆಕಾಶವನ್ನು...

‘ಉತ್ತರ ಪ್ರದೇಶದಲ್ಲಿ ನಾಗರಿಕ ಸ್ವಾತಂತ್ರ್ಯದ ಸ್ಥಿತಿ ನಾಚಿಕೆಗೇಡಿನದ್ದು’; ಹಕ್ಕುಗಳ ಉಲ್ಲಂಘನೆ ಪೊಲೀಸರಿಗೆ ದಿನನಿತ್ಯದ ಸಂಗತಿ: ಅಲಹಾಬಾದ್ ಹೈಕೋರ್ಟ್

ಲಕ್ನೋ: ಉತ್ತರ ಪ್ರದೇಶದಲ್ಲಿ ಪೊಲೀಸರಿಂದ ನಾಗರಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಲಹಾಬಾದ್ ಹೈಕೋರ್ಟ್, ರಾಜ್ಯದಲ್ಲಿನ ನಾಗರಿಕ ಸ್ವಾತಂತ್ರ್ಯದ ಪರಿಸ್ಥಿತಿಯನ್ನು 'ನಾಚಿಕೆಗೇಡಿನದ್ದು' ಎಂದು ಬಣ್ಣಿಸಿದೆ. ನಾಗರಿಕರ...

ಗಾಜಾದಲ್ಲಿ ಟೆಂಟ್‌ಗಳ ಮೇಲೆ ಕುಸಿದ ಮರಳಿನ ದಿಬ್ಬ; ನಾಲ್ವರು ಮಕ್ಕಳು ಸೇರಿ ಐವರ ಸಾವು

ಮಧ್ಯ ಗಾಜಾದ ದೇರ್ ಅಲ್-ಬಲಾಹ್‌ನಲ್ಲಿ ಸ್ಥಳಾಂತರಗೊಂಡ ಕುಟುಂಬಗಳು ಆಶ್ರಯ ಪಡೆದಿದ್ದ ಟೆಂಟ್‌ಗಳ ಮೇಲೆ ಮರಳಿನ ದಿಬ್ಬ ಕುಸಿದು ಬಿದ್ದ ಪರಿಣಾಮ ನಾಲ್ವರು ಮಕ್ಕಳು ಮತ್ತು ಓರ್ವ ಮಹಿಳೆ ಸೇರಿದಂತೆ ಕನಿಷ್ಠ ಐವರು ಪ್ಯಾಲೆಸ್ತೀನಿಯರು...

ಇಸ್ರೇಲ್‌ನ ನೂತನ ಸರ್ಕಾರ ರಚಿಸಲು ಗಾಡಿ ಐಸೆನ್‌ಕೋಟ್‌ಗೆ ಅಧಿಕೃತ ಆಹ್ವಾನ

ಇಸ್ರೇಲ್‌ನ ಯಾಶರ್ ಪಕ್ಷದ ನಾಯಕ ಗಾಡಿ ಐಸೆನ್‌ಕೋಟ್ ಅವರು ದೇಶದ ಮುಂದಿನ ಸರ್ಕಾರ ರಚಿಸುವ ಅಧಿಕೃತ ಹೊಣೆಗಾರಿಕೆಯನ್ನು ಭಾನುವಾರ (ನ.8) ಸ್ವೀಕರಿಸಿದ್ದಾರೆ. ನೂತನವಾಗಿ ಆಯ್ಕೆಯಾಗಿರುವ 26ನೇ ನೆಸೆಟ್‌ನ (ಇಸ್ರೇಲ್ ಸಂಸತ್ತು) ಮೊದಲ ಸರ್ಕಾರ...

ಎಥನಾಲ್ ಪ್ರಮಾಣವನ್ನು ಶೇ. 20ರಿಂದ 30ಕ್ಕೆ ಏರಿಸಲು ಕೇಂದ್ರ ಸರ್ಕಾರದಲ್ಲಿ ಈ ಹಿಂದೆಯೇ ಚರ್ಚೆಯಾಗಿತ್ತು!: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!

ಬೆಂಗಳೂರು: ಕರ್ನಾಟಕದಲ್ಲಿ E20 ಪೆಟ್ರೋಲ್‌ನಲ್ಲಿ ನಿಗದಿತ ಮಿತಿಗಿಂತಲೂ ಅಧಿಕ ಪ್ರಮಾಣದ ಎಥನಾಲ್ ಬೆರೆಸಿ ಸಾರ್ವಜನಿಕರಿಗೆ ವಂಚಿಸಲಾಗುತ್ತಿದೆ ಎನ್ನುವ ರಾಜ್ಯ ಸರ್ಕಾರದ ಗಂಭೀರ ಆರೋಪಗಳ ನಡುವೆಯೇ, ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ...

ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗೆ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ರಾಜೀನಾಮೆ

ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಬಿಸ್ವಜಿತ್ ಬಸು ಪಶ್ಚಿಮ ಬಂಗಾಳ ಎಸ್‌ಐಆರ್ ನ್ಯಾಯಮಂಡಳಿಗಳಿಗೆ ರಾಜೀನಾಮೆ ನೀಡಿದ್ದಾರೆ, ಒಂದು ತಿಂಗಳಲ್ಲಿ ಸಮಿತಿಯಿಂದ ಹೊರಗುಳಿದ 19 ಸದಸ್ಯರಲ್ಲಿ ನಾಲ್ಕನೇ ವ್ಯಕ್ತಿಯಾಗಿದ್ದಾರೆ. ರಾಜ್ಯದ ಮತದಾರರ ಪಟ್ಟಿಯಿಂದ ಹೊರಗುಳಿದ...

‘ನೋಟ್ ಬಂದಿ’ ಆರ್ಥಿಕತೆ ಹಾಳು ಮಾಡಿದೆ, ‘ವೋಟ್ ಬಂದಿ’ ರಾಜಕೀಯ ನಾಶಪಡಿಸುತ್ತಿದೆ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದೆ. 2016ರಲ್ಲಿ ಜಾರಿಗೊಳಿಸಿದ 'ನೋಟ್ ಬಂದ್' ದೇಶದ ಆರ್ಥಿಕತೆಯನ್ನು ಹಾಳುಮಾಡಿದ್ದರೆ, ಈಗ ನಡೆಯುತ್ತಿರುವ 'ವೋಟ್ ಬಂದ್' ದೇಶದ ರಾಜಕೀಯ...

“ಪಟಾಕಿಗಳನ್ನು ಸಿಡಿಸುವುದರಿಂದ ಹಲವು ರೋಗ-ರುಜಿನಗಳು ಗುಣಮುಖವಾಗುತ್ತವೆ” – ಪಶ್ಚಿಮ ಬಂಗಾಳ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ ಹೇಳಿಕೆ!

ಕಾಳಿ ಪೂಜೆ ಮತ್ತು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪರಿಸರ ಮಾಲಿನ್ಯ ಹಾಗೂ ಶಬ್ದ ನಿಯಂತ್ರಿಸಲು ಆಡಳಿತ ಮಂಡಳಿಗಳು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ವಿಧಿಸುತ್ತಿರುವ ಬೆನ್ನಲ್ಲೇ, ಕೋಲ್ಕತ್ತಾದ ಟಾಲಿಗಂಜ್ ಕ್ಷೇತ್ರದ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ...