Homeಕರ್ನಾಟಕರಾಜ್ಯದಲ್ಲಿ ಕಾಟನ್‌ ಕ್ಯಾಂಡಿಯಲ್ಲಿ ಹೆಚ್ಚಿನ ಕೃತಕ ಬಣ್ಣಗಳ ಬಳಕೆ ನಿಷೇಧ

ರಾಜ್ಯದಲ್ಲಿ ಕಾಟನ್‌ ಕ್ಯಾಂಡಿಯಲ್ಲಿ ಹೆಚ್ಚಿನ ಕೃತಕ ಬಣ್ಣಗಳ ಬಳಕೆ ನಿಷೇಧ

- Advertisement -
- Advertisement -

ರಾಜ್ಯದಲ್ಲಿ ಕಾಟನ್‌ ಕ್ಯಾಂಡಿಯಲ್ಲಿ ಹೆಚ್ಚಿನ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.

ಈ ಕುರಿತು ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌, ಕಲರ್ ಕಾಟನ್‌ ಕ್ಯಾಂಡಿಯಲ್ಲಿ ಹಲವು ವಿಷಕಾರಿ ಅಂಶಗಳು ಇರುವುದರಿಂದ ಅವುಗಳ ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ಗೋಬಿ ಮಂಚೂರಿಯನ್‌ ತಯಾರಿಕೆಯಲ್ಲಿ ಕೂಡ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿಲ್ಲ ಎಂದು ಹೇಳಿದ್ದಾರೆ.

ಗೋಬಿ ಮಂಚೂರಿ ಸಸ್ಯಾಹಾರಿ ಪದಾರ್ಥ, ಹೀಗಾಗಿ ನಿಷೇಧ ಮಾಡಲು ಸಾಧ್ಯವಿಲ್ಲ. ಹೀಗಾಗಿ ಕೃತಕ ಬಣ್ಣ ಬಳಸದಂತೆ ಸೂಚಿಸಲಾಗಿದೆ, ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ರೋಡಮೈನ್‌-ಬಿ ಹಾಗೂ ಗೋಬಿ ಮಂಚೂರಿಯಲ್ಲಿ ಸನ್‌ಸೆಟ್‌ ಯೆಲ್ಲೊ ಬಣ್ಣ ಮತ್ತು ಟಾಟ್ರ್ರಾಜಿನ್‌ ರಾಸಾಯನಿಕ ಅಂಶ ಪತ್ತೆಯಾಗಿದೆ.

ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಗಡೆ ಆಹಾರ ಸೇವನೆ ಮಾಡುತ್ತಾರೆ. ಇದರಿಂದ ಕ್ಯಾನ್ಸರ್ ಹಾಗೂ ಇತರ ಖಾಯಿಲೆ ಹೆಚ್ಚಳವಾಗುತ್ತಿದೆ. ಸರಿಯಾದ ಆಹಾರ ತಯಾರು ಮಾಡದಿರುವುದು, ಹೆಚ್ಚು ಕೊಬ್ಬುಕಾರಕ, ಉಪ್ಪು ಹಾಗೂ ಸಕ್ಕರೆಯ ಆಹಾರ ಬಳಕೆಯಿಂದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಕಂಡುಬಂದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

ಕೃತಕ ಬಣ್ಣಗಳನ್ನು ಬಳಸಿರುವ ತಿಂಡಿ ತಿನಿಸುಗಳನ್ನು ದೀರ್ಘಕಾಲದಿಂದ ತಿನ್ನುವುದರಿಂದ ಕ್ಯಾನ್ಸರ್‌ನಂತಹ ಮಾರಕ ರೋಗಗಳು ಬರುವ ಸಾಧ್ಯತೆ ಇದೆ, ಆದ್ದರಿಂದ ಸಾರ್ವಜನಿಕರು ಕೃತಕ ಬಣ್ಣಗಳನ್ನು ಬಳಸಿ ತಯಾರಿಸಲಾಗುವ ಆಹಾರಗಳನ್ನು ಮಿತವಾಗಿ ಬಳಸಬೇಕು ಎಂದು ಹೇಳಿದ್ದಾರೆ.

171 ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಿದ್ದೇವೆ, ಇದರಲ್ಲಿ 107 ಮಾದರಿಯಲ್ಲಿ ಕೃತಕ ಬಣ್ಣ ಕಂಡು ಬಂದಿದೆ. 64 ಸುರಕ್ಷಿತವಾದ ಮಾದರಿಗಳು ಕಂಡು ಬಂದಿದೆ. ಟಾರ್ಟ್ರಾಜಿನ್, ಸನ್​ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್​ನಂತ ಕೃತಕ ಬಣ್ಣಗಳನ್ನು ಬಳಸಲಾಗಿದೆ ಇವು ಆರೋಗ್ಯಕ್ಕೆ ತುಂಬಾ ಅಪಾಯಕಾರಿ. 25 ವಿಧದ ಕಾಟನ್​​ ಕ್ಯಾಂಡಿ ಮಾದರಿಗಳನ್ನು ಸಂಗ್ರಹಿಸಲಾಗಿದೆ. 15 ಮಾದರಿಗಳಲ್ಲಿ ಕೃತಕ ಬಣ್ಣ ಬಳಸಿರುವುದು ಕಂಡು ಬಂದಿದೆ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ವಿಭಾಗವು, ಕಾಟನ್‌ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾದರಿಯನ್ನು ಸಂಗ್ರಹಿಸಿತ್ತು. ಪರೀಕ್ಷೆಗೆ ಒಳಪಡಿಸಿದಾಗ ಇವುಗಳಲ್ಲಿ ಕೃತಕ ಬಣ್ಣಗಳ ಬಳಸಿರುವುದು ಪತ್ತೆಯಾಗಿದೆ. ಕಲಬೆರಕೆ ಕಲರ್ ಬಳಕೆ ಮಾಡೋದು ಮತ್ತು ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿದೆ.  ಪರೀಕ್ಷೆಯ ವರದಿ ಬಂದ ಹಿನ್ನೆಲೆ ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಕ್ಕೆ ತಡೆ ಕೋರಿ ಸುಪ್ರೀಂ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...