Homeಮುಖಪುಟಕೆಮ್ಮು ಸಿರಪ್ ಸಾವು: ಕೋಲ್ಡ್ರಿಫ್ ತಯಾರಕ ಶ್ರೇಸನ್ ಫಾರ್ಮಾ ಪರವಾನಗಿ ರದ್ದುಗೊಳಿಸಿದ ತಮಿಳುನಾಡು ಸರ್ಕಾರ 

ಕೆಮ್ಮು ಸಿರಪ್ ಸಾವು: ಕೋಲ್ಡ್ರಿಫ್ ತಯಾರಕ ಶ್ರೇಸನ್ ಫಾರ್ಮಾ ಪರವಾನಗಿ ರದ್ದುಗೊಳಿಸಿದ ತಮಿಳುನಾಡು ಸರ್ಕಾರ 

- Advertisement -
- Advertisement -

ಕೋಲ್ಡ್ರಿಫ್ ತಯಾರಕ ಶ್ರೇಸನ್ ಫಾರ್ಮಾಸ್ಯುಟಿಕಲ್‌ನ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ತಮಿಳುನಾಡು ಸರ್ಕಾರ ಸೋಮವಾರ ಹೇಳಿದೆ. ಕೆಮ್ಮು ಸಿರಪ್ ಆಗಿರುವ ಕೋಲ್ಡ್ರಿಫ್ ಮಧ್ಯಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಹಲವಾರು ಮಕ್ಕಳ ಸಾವಿಗೆ ಸಂಬಂಧಿಸಿದೆ ಎಂದು ಆರೋಪಿಸಲಾಗಿದೆ.

ತಮಿಳುನಾಡು ಸರ್ಕಾರದ ಆದೇಶದಲ್ಲಿ, ರಾಜ್ಯ ಸರ್ಕಾರವು ಕಂಪನಿಯನ್ನು ಮುಚ್ಚಲು ಆದೇಶಿಸಲಾಗಿದೆ ಎಂದು ಹೇಳಿದೆ.

“ಶ್ರೇಸನ್ ಫಾರ್ಮಾಸ್ಯುಟಿಕಲ್ ಕಂಪನಿಯ ಉತ್ಪಾದನಾ ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ, ಅಕ್ಟೋಬರ್ 13, 2025 ರಿಂದ ಕಂಪನಿಯನ್ನು ಮುಚ್ಚಲಾಗಿದೆ. ಮಧ್ಯಪ್ರದೇಶದಲ್ಲಿ ಮಕ್ಕಳ ಸಾವಿಗೆ ಕಾರಣವಾದ ಕೋಲ್ಡ್ರಿಫ್‌ನ ಕೆಮ್ಮು ಸಿರಪ್‌ನಲ್ಲಿ ವಿಷಕಾರಿ ಮಾಲಿನ್ಯಕಾರಕಗಳನ್ನು, ನಿರ್ದಿಷ್ಟವಾಗಿ ಡೈಥಿಲೀನ್ ಗ್ಲೈಕಾಲ್ (ಡಿಇಜಿ) ಪತ್ತೆಹಚ್ಚಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ” ಎಂದು ತಮಿಳುನಾಡು ಸರ್ಕಾರದ ಆರೋಗ್ಯ ಇಲಾಖೆ ತಿಳಿಸಿದೆ.

ಇಡಿ ದಾಳಿ

ಶ್ರೀಸನ್ ಫಾರ್ಮಾ ಮತ್ತು ಅದರ ಉಸ್ತುವಾರಿ ನಿರ್ದೇಶಕ ಪಿಯು ಕಾರ್ತಿಕೇಯನ್ ಸೇರಿದಂತೆ ತಮಿಳುನಾಡು ಆಹಾರ ಮತ್ತು ಔಷಧ ಆಡಳಿತದ ಉನ್ನತ ಅಧಿಕಾರಿಗಳ ಏಳು ಸ್ಥಳಗಳ ಮೇಲೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಕೆಲವೇ ಗಂಟೆಗಳ ನಂತರ ಈ  ಬೆಳವಣಿಗೆ ನಡಡೆದಿದೆ. ಕಳಪೆ ಮೂಲಸೌಕರ್ಯಗಳ ಹೊರತಾಗಿಯೂ ಶ್ರೀಸನ್ ಫಾರ್ಮಾ ತನ್ನ ಕಾರ್ಯಾಚರಣೆಯನ್ನು ಮುಂದುವರಿಸಲು ಅವಕಾಶ ನೀಡಿದ್ದಕ್ಕಾಗಿ ಟಿಎನ್‌ಎಫ್‌ಡಿಎ ಗಂಭೀರ ಲೋಪಗಳನ್ನು ಮಾಡಿದೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ ಪ್ರಕಾರ, ಶ್ರೀಸನ್ ಫಾರ್ಮಾ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದೆ. ಇದರ ಕೆಮ್ಮು ಸಿರಪ್‌ನಲ್ಲಿ ಡೈಥಿಲೀನ್ ಗ್ಲೈಕಾಲ್ (ಡಿಇಜಿ) ಕೂಡ ಇತ್ತು, ಇದು ಮಧ್ಯಪ್ರದೇಶದಲ್ಲಿ ಐದು ವರ್ಷದೊಳಗಿನ 22 ಮಕ್ಕಳ ಸಾವಿಗೆ ಕಾರಣವಾಗಬಹುದಾದ ಅತ್ಯಂತ ವಿಷಕಾರಿ ವಸ್ತುವಾಗಿದೆ.

ಮಕ್ಕಳ ಸಾವಿನ ನಂತರ, ಮಧ್ಯಪ್ರದೇಶ, ಅರುಣಾಚಲ ಪ್ರದೇಶ, ದೆಹಲಿ, ಪಂಜಾಬ್, ತಮಿಳುನಾಡು ಮತ್ತು ಜಾರ್ಖಂಡ್‌ನಂತಹ ಅನೇಕ ರಾಜ್ಯಗಳು ಕೋಲ್ಡ್ರಿಫ್ ಬಳಕೆಯನ್ನು ನಿಷೇಧಿಸಿವೆ.

ಛತ್ತೀಸ್‌ಗಢ| ಮಾದಕ ವ್ಯಸನಿ ಯುವಕರ ‘ಬೀಡಿ’ ಜಗಳ ಕೊಲೆಯಲ್ಲಿ ಅಂತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...