Homeಮುಖಪುಟನೀಟ್-ಯುಜಿ ಕೌನ್ಸಿಲಿಂಗ್‌ಗೆ ತಡೆ : ಕೇಂದ್ರದ ವಿರುದ್ದ ಕಾಂಗ್ರೆಸ್ ಕಿಡಿ

ನೀಟ್-ಯುಜಿ ಕೌನ್ಸಿಲಿಂಗ್‌ಗೆ ತಡೆ : ಕೇಂದ್ರದ ವಿರುದ್ದ ಕಾಂಗ್ರೆಸ್ ಕಿಡಿ

- Advertisement -
- Advertisement -

ಮುಂದಿನ ಸೂಚನೆಯವರೆಗೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್-ಯುಜಿ)ಯ ಕೌನ್ಸಿಲಿಂಗ್ ಅನ್ನು ಇಂದು (ಜುಲೈ 6) ತಡೆ ಹಿಡಿಯಲಾಗಿದೆ ಎಂದು ವರದಿಯಾಗಿದೆ.

ಜುಲೈ 8ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಯವರೆಗೂ ಕಾಯುವಂತೆ ಪರೀಕ್ಷಾ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಈ ಕುರಿತು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಪ್ರತಿಕ್ರಿಯಿಸಿದ್ದು, “ದಿನಕಳೆದಂತೆ ಇಡೀ ನೀಟ್-ಯುಜಿ ಹಗರಣವು ಮತ್ತಷ್ಟು ಹದಗೆಡತೊಡಗಿದೆ. ಈ ವಿಚಾರದಲ್ಲಿ ಅಜೈವಿಕ ಪ್ರಧಾನಿ ಹಾಗೂ ಅವರ ಜೈವಿಕ ಶಿಕ್ಷಣ ಸಚಿವರು ತಮ್ಮ ಅದಕ್ಷತೆ ಮತ್ತು ಅಸೂಕ್ಷ್ಮತೆಗಳಿಗೆ ಮತ್ತಷ್ಟು ಪುರಾವೆಗಳನ್ನು ಒದಗಿಸುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

ಜೂನ್ 4ರಂದು ಪ್ರಕಟಗೊಂಡ 2024ರ ನೀಟ್-ಯುಜಿ ಫಲಿತಾಂಶದಲ್ಲಿ 1,563 ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಿರುವುದು ಮತ್ತು 67 ವಿದ್ಯಾರ್ಥಿಗಳು 720 ಪೂರ್ಣ ಅಂಕ ಗಳಿಸಿರುವುದು ಹಾಗೂ ಕೆಲ ವಿದ್ಯಾರ್ಥಿಗಳು 718, 719 ಅಂಕಗಳನ್ನು ಪಡೆದಿರುವುದು ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ವಿದ್ಯಾರ್ಥಿಗಳ ಕೃಪಾಂಕ ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲಾಗಿತ್ತು.

ಬರೋಬ್ಬರಿ 24 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದ ಪರೀಕ್ಷೆ ಮೇ 5, 2024 ರಂದು ನಡೆದಿತ್ತು. ಜೂನ್ 4, 2024ರಂದು ಫಲಿತಾಂಶ ಪ್ರಕಟಗೊಂಡ ನಂತರ ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಪರೀಕ್ಷೆ ಬರೆಯಲು ಸರಿಯಾಗಿ ಸಮಯ ಸಿಕ್ಕಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳಿಗೆ ಕೃಪಾಂಕ ನೀಡಲಾಗಿದೆ. ಈ ಕಾರಣದಿಂದ 718, 719 ಅಂಕಗಳು ಲಭಿಸಿವೆ. ಕೆಲ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಸುಲಭವಾಗಿದ್ದುದೇ ಅವರು ಭಾರೀ ಅಂಕ ಪಡೆಯಲು ಕಾರಣ ಎಂದು ರಾಷ್ಟ್ರೀಯ ಪರಿಕ್ಷಾ ಸಂಸ್ಥೆ (ಎನ್‌ಟಿಎ) ಆರಂಭದಲ್ಲಿ ಹೇಳಿತ್ತು.

ಆದರೆ, ವಿದ್ಯಾರ್ಥಿಗಳು ಮತ್ತು ಇತರರಿಂದ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಕೃಪಾಂಕ ಕುರಿತು ಮರು ಪರಿಶೀಲಿಸಲು ಕೇಂದ್ರ ಶಿಕ್ಷಣ ಸಚಿವಾಲಯ ನಾಲ್ವರ ಸಮಿತಿ ರಚಿಸಿದೆ ಎಂದು ಎನ್‌ಟಿಎ ಮಹಾನಿರ್ದೇಶಕ ಸುಬೋಧ್ ಕುಮಾರ್ ಸಿಂಗ್ ಜೂನ್ 8ರಂದು ಸುದ್ದಿಗೋಷ್ಟಿ ನಡೆಸಿ ತಿಳಿಸಿದ್ದರು.

ಈ ನಡುವೆ ನೀಟ್ ಮರು ಪರೀಕ್ಷೆ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಅರ್ಜಿ ಸಂಬಂಧ ಪ್ರತಿಕ್ರಿಯೆ ಕೇಳಿ ಜೂನ್ 11ರಂದು ಸುಪ್ರೀಂ ಕೋರ್ಟ್ ಎನ್‌ಟಿಎಗೆ ನೋಟಿಸ್ ಜಾರಿ ಮಾಡಿತ್ತು. ಇದಕ್ಕೆ ಉತ್ತರಿಸಿದ್ದ ಎನ್‌ಟಿಎ 1,563 ವಿದ್ಯಾರ್ಥಿಗಳ ಗ್ರೇಸ್ ಅಂಕಗಳನ್ನು ರದ್ದುಗೊಳಿಸಲಾಗುವುದು. ಅವರು ಮತ್ತೆ ಪರೀಕ್ಷೆಗೆ ಹಾಜರಾಗಲು ಆಯ್ಕೆಯನ್ನು ಹೊಂದಿರುತ್ತಾರೆ ಎಂದು ತಿಳಿಸಿತ್ತು. ಅದರಂತೆ ಗ್ರೇಸ್ ಅಂಕ ರದ್ದುಪಡಿಸಿ ಮರು ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ.

ಇದನ್ನೂ ಓದಿ : ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳು ಪಡೆದ ಹಣ ಮುಟ್ಟುಗೋಲು ಹಾಕಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...