Homeಕರ್ನಾಟಕಮತ ಎಣಿಕೆಗೆ ಕ್ಷಣಗಣನೆ; 2,615 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ಮತ ಎಣಿಕೆಗೆ ಕ್ಷಣಗಣನೆ; 2,615 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯದ ಅಧಿಕಾರದ ಚುಕ್ಕಾಣಿಯನ್ನು ಯಾರು ಹಿಡಿಯಲಿದ್ದಾರೆಂಬ ಭವಿಷ್ಯ ಇಂದು ನಿರ್ಧಾರವಾಗಲಿದೆ.

ರಾಜ್ಯದ 3.67 ಕೋಟಿ ಮತದಾರರು ನೀಡಿರುವ ನಿರ್ಧಾರ ಇಂದು ಪ್ರಕಟವಾಗುತ್ತಿದ್ದು, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ಈಗಾಗಲೇ ಸರ್ಕಾರ ರಚಿಸುವ ಕಸರತ್ತಿನಲ್ಲಿ ನಿರತವಾಗಿವೆ.

ಅತಂತ್ರ ಸರ್ಕಾರ ರಚನೆಯಾದಲ್ಲಿ ಮೈತ್ರಿಯ ಸೂಚನೆಯನ್ನು ಜೆಡಿಎಸ್ ನೀಡಿದರೆ, ಆಪರೇಷನ್‌ ಸಂಬಂಧ ಕಮಲ ಮತ್ತು ಕೈ ಪಕ್ಷಗಳೆರಡೂ ಸೂಚನೆ ನೀಡಿವೆ. ಮತದಾನೋತ್ತರ ಸಮೀಕ್ಷೆಗಳು ಹೆಚ್ಚಿನದಾಗಿ ಕಾಂಗ್ರೆಸ್‌ಗೆ ಒಲವು ತೋರಿಸಿದರೆ, ಕೆಲವು ಸಮೀಕ್ಷೆಗಳು ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಹೇಳಿವೆ. ಹಲವು ಸಮೀಕ್ಷೆಗಳು ಅತಂತ್ರ ಸರ್ಕಾರದ ಸೂಚನೆಯನ್ನೂ ನೀಡಿವೆ.

ವಿಧಾನಸಭೆಯ 224 ಕ್ಷೇತ್ರಗಳ ಶಾಸಕರ ಆಯ್ಕೆಗೆ ಏಪ್ರಿಲ್‌ 10 ಮತದಾನ ನಡೆದಿತ್ತು. 5.07 ಕೋಟಿ ಮತದಾರರಲ್ಲಿ 3.67 ಕೋಟಿ ಮಂದಿ ಮತಚಲಾಯಿಸಿದ್ದಾರೆ. 2,615 ಅಭ್ಯರ್ಥಿಗಳು ಕಣದಲ್ಲಿದ್ದು, ಜನರ ವಿಶ್ವಾಸಗೆದ್ದು ಯಾರು ವಿಧಾನಸಭೆ ಪ್ರವೇಶಿಸಲಿದ್ದಾರೆ ಎಂಬುದು ಇಂದು ತಿಳಿಯಲಿದೆ.

ಬಿಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಹೊತ್ತಿಗೆ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ. ಸಂಜೆ ವೇಳೆಗೆ ಪೂರ್ಣ ಫಲಿತಾಂಶ ಪ್ರಕಟವಾಗಲಿದೆ.

“ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ 34 ಕೇಂದ್ರಗಳಲ್ಲಿ ಏಕಕಾಲಕ್ಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದ್ದು, ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ” ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ತಿಳಿಸಿದೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತ ಯಂತ್ರಗಳನ್ನು ಭದ್ರವಾಗಿ ಇಡಲಾಗಿದ್ದು, ಸ್ಟ್ರಾಂಗ್ ರೂಂಗಳಲ್ಲಿ 3 ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ.

100%
ಮತ ಎಣಿಕೆ ನಡೆಯಲಿರುವ ಕೇಂದ್ರಗಳು

28 ವಿಧಾನಸಭೆ ಕ್ಷೇತ್ರ ಹೊಂದಿರುವ ಬೆಂಗಳೂರು ನಗರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 10 ಡಿಸಿಪಿಗಳು ಮತ್ತು ಇತರ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಪ್ರತಿ ಮತ ಎಣಿಕೆ ಕೇಂದ್ರದಲ್ಲಿ ಅರೆಸೇನಾ ಪಡೆಗಳ ಜೊತೆಗೆ ಎಸಿಪಿಗಳು, ಇನ್‌ಸ್ಪೆಕ್ಟರ್‌ಗಳು, ಸಬ್‌ಇನ್‌ಸ್ಪೆಕ್ಟರ್‌ಗಳ ನಂತರ ಇಬ್ಬರು ಡಿಸಿಪಿಗಳು ಹಾಜರಿರುತ್ತಾರೆ. ಮುಂಜಾಗ್ರತೆ ವಹಿಸಿ ಸೆಕ್ಷನ್ 144 ಕೂಡ ಜಾರಿ ಮಾಡಲಾಗಿದೆ. ಮತ ಎಣಿಕೆ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು, ವಿಠಲ್ ಮಲ್ಯ ರಸ್ತೆಯ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್, ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜು, ತಿಲಕನಗರದ ಎಸ್‌ಎಸ್‌ಎಂಆರ್‌ವಿ ಕಾಲೇಜು ಮತ್ತು ದೇವನಹಳ್ಳಿಯ ಆಕಾಶ್ ಇಂಟರ್‌ನ್ಯಾಷನಲ್ ಸ್ಕೂಲ್‌ನಲ್ಲಿ ಮತ ಎಣಿಕೆ ನಡೆಯಲಿದೆ.

ಪೂರ್ವ ಮತ್ತು ಪಶ್ಚಿಮ ವಿಭಾಗದ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು ಭದ್ರತಾ ವ್ಯವಸ್ಥೆಗಳನ್ನು ಮೇಲ್ವಿಚಾರಣೆ ಮಾಡುತ್ತಾರೆ. 10 ಡಿಸಿಪಿಗಳು, 15 ಸಹಾಯಕ ಪೊಲೀಸ್ ಆಯುಕ್ತರು, 38 ಪೊಲೀಸ್ ಇನ್ಸ್‌ಪೆಕ್ಟರ್‌ಗಳು, 250 ಪೊಲೀಸ್ ಸಬ್‌ಇನ್‌ಸ್ಪೆಕ್ಟರ್‌ಗಳು ಮತ್ತು ನಗರ ಪೊಲೀಸ್‌ನ ಇತರ 1,200 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅರೆಸೇನಾ ಪಡೆಗಳ 12 ಕಂಪನಿಗಳು, 36 ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಮತ್ತು ಸಿಟಿ ಆರ್ಮ್ಡ್ ರಿಸರ್ವ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

ಪ್ರತಿ ಮತ ಎಣಿಕೆ ಕೇಂದ್ರಕ್ಕೆ ಮೂವರು ಎಸಿಪಿಗಳು, ಆರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ಮತ್ತು 50 ಸಬ್ ಇನ್‌ಸ್ಪೆಕ್ಟರ್‌ಗಳ ಜೊತೆಗೆ 300 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಸೆಕ್ಷನ್ 144 ಜಾರಿ ಇರಲಿದೆ.

ನಿಚ್ಚಳ ಬಹುಮತದ ಸಾಧ್ಯತೆಯನ್ನು ಹೆಚ್ಚಿನ ಸಮೀಕ್ಷೆಗಳ ಫಲಿತಾಂಶಗಳು ಅಲ್ಲಗಳೆದಿವೆ. ಹೀಗಾಗಿ 2018ರ ಚುನಾವಣೆಯಂತೆ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣವಾಗಬಹುದೇ ಎಂಬ ಚರ್ಚೆಯೂ ರಾಜ್ಯದಲ್ಲಿ ಬಿರುಸಾಗಿದೆ.

ಮತ ಎಣಿಕೆಗೂ ಮುನ್ನವೇ ಮೂರು ಪ್ರಮುಖ ಪಕ್ಷಗಳನ್ನು ಪಕ್ಷಾಂತರದ ಭೀತಿ ಆವರಿಸಿಕೊಂಡಿದೆ. ಮತ ಎಣಿಕೆ ಪೂರ್ಣಗೊಳ್ಳುತ್ತಿದ್ದಂತೆಯೇ ಪಕ್ಷದ ಶಾಸಕರನ್ನು ಕರೆದೊಯ್ದು ಸುರಕ್ಷಿತ ಸ್ಥಳದಲ್ಲಿ ಹಿಡಿದಿಟ್ಟುಕೊಳ್ಳುವ ತಂತ್ರಗಾರಿಕೆಯನ್ನು ಆಯಾ ಪಕ್ಷಗಳ ನಾಯಕರು ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರು ಶುಕ್ರವಾರವೇ ಸಭೆಗಳನ್ನು ನಡೆಸಿದ್ದಾರೆ.

ಚುನಾವಣಾ ಕಣದಲ್ಲಿ ಪ್ರಬಲರಾಗಿರುವ ಪಕ್ಷೇತರರು ಮತ್ತು ಕಡಿಮೆ ಸಂಖ್ಯೆಯ ಸ್ಥಾನ ಗಳಿಸಬಹುದಾದ ಪಕ್ಷಗಳ ಮೇಲೆ ಪ್ರಮುಖ ರಾಜಕೀಯ ಪಕ್ಷಗಳು ಗಮನ ಹರಿಸಿವೆ. ಅತಂತ್ರ ಸ್ಥಿತಿ ನಿರ್ಮಾಣವಾದರೆ ಅಂತಹ ಶಾಸಕರನ್ನು ಸೆಳೆಯುವ ತಂತ್ರ ರೂಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...