Homeಮುಖಪುಟತುರ್ತು ಪರಿಸ್ಥಿತಿ ಅವಧಿಯಿಂದಲೂ ಜನಸಂಖ್ಯೆ ನಿಯಂತ್ರಣಕ್ಕೆ ದೇಶ ಗಮನ ಹರಿಸಿಲ್ಲ: ನಾರಾಯಣ ಮೂರ್ತಿ

ತುರ್ತು ಪರಿಸ್ಥಿತಿ ಅವಧಿಯಿಂದಲೂ ಜನಸಂಖ್ಯೆ ನಿಯಂತ್ರಣಕ್ಕೆ ದೇಶ ಗಮನ ಹರಿಸಿಲ್ಲ: ನಾರಾಯಣ ಮೂರ್ತಿ

- Advertisement -
- Advertisement -

“ಹೆಚ್ಚುತ್ತಿರುವ ಜನಸಂಖ್ಯೆಯು ದೇಶಕ್ಕೆ ದೊಡ್ಡ ಸವಾಲಾಗಿದೆ, ತುರ್ತು ಪರಿಸ್ಥಿತಿಯ ಅವಧಿಯಿಂದಲೂ ಭಾರತೀಯರು ಜನಸಂಖ್ಯೆಯ ನಿಯಂತ್ರಣಕ್ಕೆ ಗಮನ ಹರಿಸಿಲ್ಲ” ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ ಅವರು ಭಾನುವಾರ ಹೇಳಿದ್ದಾರೆ.

ನಾರಾಯಣ ಮೂರ್ತಿ ಅವರು ಮುಖ್ಯ ಅತಿಥಿಯಾಗಿದ್ದ ಪ್ರಯಾಗ್‌ರಾಜ್‌ನಲ್ಲಿರುವ ಮೋತಿಲಾಲ್ ನೆಹರು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಘಟಿಕೋತ್ಸವ ಸಮಾರಂಭದಲ್ಲಿ ಈ ಹೇಳಿಕೆಯನ್ನು ನೀಡಿದರು.

“ಭಾರತವು ಜನಸಂಖ್ಯೆ, ತಲಾ ಭೂಮಿ ಲಭ್ಯತೆ ಮತ್ತು ಆರೋಗ್ಯ ಸೌಲಭ್ಯಗಳಿಗೆ ಸಂಬಂಧಿಸಿದ ಮಹತ್ವದ ಸವಾಲುಗಳನ್ನು ಎದುರಿಸುತ್ತಿದೆ” ಎಂದು ಅವರು ಹೇಳಿದರು.

“ತುರ್ತು ಪರಿಸ್ಥಿತಿಯ ಅವಧಿಯಿಂದಲೂ, ನಾವು ಭಾರತೀಯರು ಜನಸಂಖ್ಯೆಯ ನಿಯಂತ್ರಣಕ್ಕೆ ಸಾಕಷ್ಟು ಗಮನ ನೀಡಿಲ್ಲ. ಇದು ನಮ್ಮ ದೇಶವನ್ನು ಸಮರ್ಥನೀಯವಲ್ಲದ ಅಪಾಯವನ್ನುಂಟುಮಾಡುತ್ತದೆ. ಹೋಲಿಸಿದರೆ, ಯುಎಸ್, ಬ್ರೆಜಿಲ್ ಮತ್ತು ಚೀನಾದಂತಹ ದೇಶಗಳು ತಲಾ ಭೂಮಿ ಲಭ್ಯತೆ ಹೆಚ್ಚು” ಎಂದು ಅವರು ಹೇಳಿದರು.

ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದು ನಿಜವಾದ ವೃತ್ತಿಪರನ ಜವಾಬ್ದಾರಿ ಎಂದು ನಾರಾಯಣ ಮೂರ್ತಿ ಒತ್ತಿ ಹೇಳಿದರು.

“ಈ ಕೊಡುಗೆಯು ಹೆಚ್ಚಿನ ಆಕಾಂಕ್ಷೆಗಳನ್ನು ಹೊಂದುವುದು, ದೊಡ್ಡ ಕನಸುಗಳನ್ನು ಕಾಣುವುದು ಮತ್ತು ಆ ಕನಸುಗಳನ್ನು ವಾಸ್ತವಕ್ಕೆ ತಿರುಗಿಸಲು ಶ್ರಮಿಸುವುದರ ಮೇಲೆ ಅವಲಂಬಿತವಾಗಿದೆ” ಎಂದು ಇನ್ಫೋಸಿಸ್ ಸಹ-ಸಂಸ್ಥಾಪಕರು ಹೇಳಿದ್ದಾರೆ.

ಒಂದು ತಲೆಮಾರು ಮುಂದಿನವರ ಬದುಕನ್ನು ಹಸನಾಗಿಸಲು ಹಲವಾರು ತ್ಯಾಗಗಳನ್ನು ಮಾಡಬೇಕು, ನನ್ನ ಪ್ರಗತಿಗಾಗಿ ನನ್ನ ತಂದೆ-ತಾಯಿ, ಒಡಹುಟ್ಟಿದವರು ಮತ್ತು ಶಿಕ್ಷಕರು ಗಣನೀಯ ತ್ಯಾಗ ಮಾಡಿದ್ದಾರೆ. ಮುಖ್ಯ ಅತಿಥಿಯಾಗಿ ನಾನು ಇಲ್ಲಿ ಹಾಜರಿರುವುದು ಅವರ ತ್ಯಾಗ ವ್ಯರ್ಥವಾಗಲಿಲ್ಲ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.

ಸಮಾರಂಭದಲ್ಲಿ 1,670 ಪದವಿಗಳನ್ನು ನೀಡಲಾಯಿತು. ಸ್ನಾತಕೋತ್ತರ ವಿದ್ಯಾರ್ಥಿಗಳು 34 ಚಿನ್ನದ ಪದಕಗಳನ್ನು ಪಡೆದರೆ, ಪದವಿಪೂರ್ವ ವಿದ್ಯಾರ್ಥಿಗಳು 13 ಪಡೆದರು.

ಇದನ್ನೂ ಓದಿ; ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಒಪ್ಪಿಗೆ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ಸಿದ್ದರಾಮಯ್ಯ; ಇಂದು ಮಧ್ಯಾಹ್ನ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...