Homeಮುಖಪುಟಪುಲ್ವಾಮ ಕುರಿತು ಸತ್ಯಪಾಲ್ ಮಲಿಕ್‌ ಹೇಳಿಕೆಯಿಂದ ದೇಶವೇ ಬೆಚ್ಚಿಬಿದ್ದಿದೆ: ಕಾಂಗ್ರೆಸ್

ಪುಲ್ವಾಮ ಕುರಿತು ಸತ್ಯಪಾಲ್ ಮಲಿಕ್‌ ಹೇಳಿಕೆಯಿಂದ ದೇಶವೇ ಬೆಚ್ಚಿಬಿದ್ದಿದೆ: ಕಾಂಗ್ರೆಸ್

ಮೋದಿ ಸರ್ಕಾರದ ಅಸಮರ್ಥತೆಯಿಂದ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಹೇಳಿದ್ದಾರೆ.

- Advertisement -
- Advertisement -

ನರೇಂದ್ರ ಮೋದಿಜಿ ನಿಮ್ಮ ಸರ್ಕಾರದ ತಪ್ಪಿನಿಂದಾಗಿ ಪುಲ್ವಾಮ ದಾಳಿಯಲ್ಲಿ 40 ಧೈರ್ಯವಂತ ಸೈನಿಕರು ಹುತಾತ್ಮರಾಗಬೇಕಾಯಿತು. ನಮ್ಮ ಯೋಧರಿಗೆ ವಿಮಾನ ಸಿಕ್ಕಿದ್ದರೆ ಈ ದಾಳಿಯನ್ನು ತಪ್ಪಿಸಬಹುದಿತ್ತು. ಈ ಬಹುದೊಡ್ಡ ತಪ್ಪಿಗೆ ಕ್ರಮ ತೆಗೆದುಕೊಳ್ಳುವ ಬದಲು ನೀವು ವಿಷಯವನ್ನು ನಿಗ್ರಹಿಸಿ ನಿಮ್ಮ ಇಮೇಜ್‌ಗೆ ಧಕ್ಕೆ ಆಗದಂತೆ ನೋಡಿಕೊಂಡಿರಿ. ಪುಲ್ವಾಮದ ಕುರಿತು ಸತ್ಯಪಾಲ್ ಮಲಿಕ್‌ರವರ ಹೇಳಿಕೆಯಿಂದ ದೇಶವೇ ಬೆಚ್ಚಿಬಿದ್ದಿದೆ ಎಂದು ಕಾಂಗ್ರೆಸ್ ಹೇಳಿದೆ.

ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಈ ಸಂದರ್ಶನ ಬಿತ್ತರಗೊಳ್ಳುತ್ತಿದ್ದಂತೆ ಪ್ರತಿಪಕ್ಷ ಕಾಂಗ್ರೆಸ್ ನರೇಂದ್ರ ಮೋದಿಯವರ ಮೇಲೆ ಟೀಕಾಪ್ರಹಾರ ನಡೆಸಿದೆ. ರಾಹುಲ್ ಗಾಂಧಿಯವರು ವೈರ್ ವರದಿಯನ್ನು ಟ್ವೀಟ್ ಮಾಡಿದ್ದು, “ಪ್ರಧಾನಿಯವರು ಭ್ರಷ್ಟಾಚಾರವನ್ನು ಹೆಚ್ಚು ದ್ವೇಷಿಸುವುದಿಲ್ಲ” ಎಂದು ಬರೆದಿದ್ದಾರೆ.

ಕಾಂಗ್ರೆಸ್ ಪಕ್ಷವು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮೋದಿಯವರ ಬಗ್ಗೆ ಮಲಿಕ್ ಮಾಡಿದ ಆರೋಪಗಳನ್ನು ಪುನರಾವರ್ತಿಸಿದೆ. 2019 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ತಮ್ಮ ವೈಯಕ್ತಿಕ ಇಮೇಜ್ ಅನ್ನು ಉಳಿಸಲು ಮೋದಿ ಅವರು ಪುಲ್ವಾಮ ಘಟನೆಯನ್ನು “ನಿಗ್ರಹಿಸಿದ್ದಾರೆ” ಎಂದು ಕಾಂಗ್ರೆಸ್ ಆರೋಪಿಸಿದೆ.

ದಿ ವೈರ್ ಪತ್ರಕರ್ತ ಕರಣ್ ಥಾಪರ್‌ರವರಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ, “ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದಾರೆ.

ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ ಎಂದಿದ್ದಾರೆ.

ಭ್ರಷ್ಟಾಚಾರದ ವಿಷಯಕ ಕುರಿತು ಮಾತನಾಡಿದ ಅವರು, “ಹೈಡ್ರೋ ಎಲೆಕ್ಟ್ರಿಕ್ ಯೋಜನೆ ಮತ್ತು ರಿಲಯೆನ್ಸ್ ಇನ್ಸೂರೆನ್ಸ್ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಮುಖಂಡ ರಾಮ್ ಮಾಧವ್ ಬಂದಿದ್ದರು. ಆ ಯೋಜನೆಗಳಿಗೆ ಸಹಿ ಹಾಕಿದ್ದರೆ ನನಗೆ 300 ಕೋಟಿ ಸಿಗುತ್ತದೆ ಎಂದು ಜನ ಮಾತನಾಡುತ್ತಿದ್ದರು. ಆದರೆ ನಾನು ಆ ತಪ್ಪು ಕೆಲಸ ಮಾಡಲಿಲ್ಲ. ರಾಮ್ ಮಾಧವ್ ಎಷ್ಟೇ ಪ್ರಯತ್ನ ಪಟ್ಟರೂ ನಾನು ಆ ಯೋಜನೆಗಳನ್ನು ಜಾರಿಗೊಳಿಸಲಿಲ್ಲ ಎಂದಿದ್ದಾರೆ.

ಅದೇ ರೀತಿ ಗೋವಾದ ರಾಜ್ಯಪಾಲನಾಗಿದ್ದಾಗ ಅಲ್ಲಿನ ಭ್ರಷ್ಟಾಚಾರಗಳ ಕುರಿತು ಪ್ರಧಾನಿ ಮೋದಿಯವರಿಗೆ ದೂರು ನೀಡಿದ್ದೆ. ಅವುಗಳನ್ನು ಸರಿಪಡಿಸುವ ಬದಲು ನಿರ್ಲಕ್ಷ್ಯ ಮಾಡಿದ್ದಲ್ಲದೆ ನನ್ನನ್ನು ಗೋವಾದ ರಾಜ್ಯಪಾಲ ಸ್ಥಾನದಿಂದ ಕಿತ್ತು ಮೇಘಾಲಯಕ್ಕೆ ಕಳಿಸಿದರು. ಪ್ರಧಾನಿಯವರ ಸುತ್ತಲಿನ ಜನರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತು ಆಗಾಗ್ಗೆ ಪ್ರಧಾನಿ ಕಚೇರಿಯ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ. ಇದೆಲ್ಲವನ್ನೂ ಮೋದಿಯವರ ಗಮನಕ್ಕೆ ತಂದಿದ್ದೇನೆ, ಆದರೆ ಪ್ರಧಾನಿ ಕಾಳಜಿ ತೋರುತ್ತಿಲ್ಲ. ಹಾಗಾಗಿ ನಾನು ಖಚಿತವಾಗಿ ಹೇಳಬಲ್ಲೆ ಭ್ರಷ್ಟಾಚಾರ ಕುರಿತು ನರೇಂದ್ರ ಮೋದಿಯವರಿಗೆ ಹೆಚ್ಚಿನ ದ್ವೇಷವಿಲ್ಲ ಎಂದು ಸತ್ಯಪಾಲ್ ಮಲಿಕ್ ಹೇಳಿದ್ದಾರೆ.

ಈ ಕುರಿತು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಪ್ರಶ್ನೆ ಮಾಡಿವೆ. ಸಮಾಜವಾದಿ ಪಕ್ಷದ ವಕ್ತಾರ ಮನೋಜ್ ಸಿಂಗ್ ಕಾಕಾ ಪುಲ್ವಾಮಾ ಘಟನೆಯನ್ನು ತಡೆಯುವಲ್ಲಿ ಮೋದಿ ಸರ್ಕಾರದ ಅಸಮರ್ಥತೆಯನ್ನು ಉಲ್ಲೇಖಿಸಿದ್ದಾರೆ. “ಸಿಆರ್‌ಪಿಎಫ್‌ನ ವೀರ ಸೈನಿಕರು ವಿಮಾನವನ್ನು ಕೇಳಿದಾಗ ಅದನ್ನು ಏಕೆ ನೀಡಲಿಲ್ಲ? ನಮ್ಮ ಸೈನಿಕರು ಹುತಾತ್ಮತೆಗೆ ಯಾರು ಹೊಣೆ?” ಎಂದು ಪ್ರಶ್ನಿಸಿದ್ದಾರೆ.

ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಟ್ವೀಟ್ ಮಾಡಿ, ಸತ್ಯಪಾಲ್ ಮಲಿಕ್‌ರವರ ಹೇಳಿಕೆಗಳ ಕುರಿತು ರಾಷ್ಟ್ರೀಯ ಮಾಧ್ಯಮಗಳ ಮೌನವನ್ನು ಪ್ರಶ್ನಿಸಿದ್ದಾರೆ. “ಪುಲ್ವಾಮ ದಾಳಿಯ ಸತ್ಯದ ಬಗ್ಗೆ ಮಾಜಿ ಜಮ್ಮು ಕಾಶ್ಮೀರ ಗವರ್ನರ್ ಮತ್ತು ಬಿಜೆಪಿ ನಾಯಕ ಸತ್ಯಪಾಲ್ ಮಲಿಕ್ ಅವರು ಮಾಡಿದ ದೊಡ್ಡ ಬಹಿರಂಗಪಡಿಸುವಿಕೆಯ ಬಗ್ಗೆ ಎಷ್ಟು ರಾಷ್ಟ್ರೀಯವಾದಿ ಭಾರತೀಯ ಮಾಧ್ಯಮ ಚಾನೆಲ್‌ಗಳು ಪ್ರೈಮ್-ಟೈಮ್ ಚರ್ಚೆ ನಡೆಸುತ್ತಿವೆ? ಯಾರಾದರೂ?” ಎಂದಿದ್ದಾರೆ.

ಇದನ್ನೂ ಓದಿ ; ಮುಸ್ಲಿಂ ಮೀಸಲಾತಿ ರದ್ದು ವಿಚಾರ: ಅತಿ ಕಳಪೆ, ದೋಷಪೂರಿತ ನಿರ್ಧಾರವೆಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...