Homeಕರ್ನಾಟಕದೇಶದ ಮೊದಲ ‘ಓಮಿಕ್ರಾನ್’ ಪ್ರಕರಣ ಕರ್ನಾಟಕದಲ್ಲಿ ಪತ್ತೆ

ದೇಶದ ಮೊದಲ ‘ಓಮಿಕ್ರಾನ್’ ಪ್ರಕರಣ ಕರ್ನಾಟಕದಲ್ಲಿ ಪತ್ತೆ

- Advertisement -
- Advertisement -

ಭಾರತದಲ್ಲಿ ಓಮಿಕ್ರಾನ್ ರೂಪಾಂತರದ ಎರಡು ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ. ಈ ಎರಡೂ ಪ್ರಕರಣಗಳು ಕರ್ನಾಟಕದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಜಾಗತಿಕವಾಗಿ ಓಮಿಕ್ರಾನ್‌ ರೂಪಾಂತರ ವೈರಸ್‌ ಪತ್ತೆಯಾದ 30 ನೇ ದೇಶವಾಗಿದೆ ಭಾರತ.

“ಎರಡೂ ಪ್ರಕರಣಗಳು ಕರ್ನಾಟಕದಲ್ಲಿ ವರದಿಯಾಗಿದ್ದು. 66 ಮತ್ತು 46 ವರ್ಷ ವಯಸ್ಸಿನ ಇಬ್ಬರು ರೋಗಿಗಳಲ್ಲಿ ಇದು ಕಂಡು ಬಂದಿದೆ” ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ರೋಗಿಗಳ ಗೌಪ್ಯತೆಯನ್ನು ರಕ್ಷಿಸಲು ಅವರ ಗುರುತನ್ನು ಸದ್ಯಕ್ಕೆ ಬಹಿರಂಗಪಡಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಕ್ಕಳಿಗೆ ಮೊಟ್ಟೆ ಬೇಡ ಎನ್ನುವವರಿಗೆ ತಜ್ಞ ವೈದ್ಯರು ಹೇಳುವುದೇನು?

ಮೂಲಗಳ ಪ್ರಕಾರ, ವಿದೇಶಿಯಾಗಿರುವ 66 ವರ್ಷ ವಯಸ್ಸಿನ ರೋಗಿಯು ದಕ್ಷಿಣ ಆಫ್ರಿಕಾದಿಂದ ಇತ್ತೀಚೆಗೆ ಬಂದಿದ್ದರು. 46 ವರ್ಷದ ಮತ್ತೊಬ್ಬ ರೋಗಿ ಭಾರತದವರೇ ಆಗಿದ್ದು, ಬೆಂಗಳೂರಿನಲ್ಲಿ ಆರೋಗ್ಯ ಕಾರ್ಯಕರ್ತರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಇಬ್ಬರು ವ್ಯಕ್ತಿಗಳೊಂದಿಗೆ ಸಂಪರ್ಕದಲ್ಲಿದ್ದ ಎಲ್ಲಾ ಜನರನ್ನು ಪತ್ತೆಹಚ್ಚಲಾಗಿದೆ ಮತ್ತು ಪರೀಕ್ಷಿಸಲಾಗುತ್ತಿದೆ. ಎರಡೂ ಪ್ರಕರಣಗಳಲ್ಲಿ ರೋಗಿಗಳು ಸೌಮ್ಯವಾಗಿದ್ದು, ಇದುವರೆಗೆ ಯಾವುದೇ ತೀವ್ರವಾದ ರೋಗಲಕ್ಷಣಗಳಿಲ್ಲ ಎಂದು ಹೇಳಲಾಗಿದೆ.

“ಓಮಿಕ್ರಾನ್ ಪತ್ತೆಯಾಗಿರುವುದರಿಂದ ನಾವು ಭಯಪಡಬೇಕಾಗಿಲ್ಲ. ಆದರೆ ಅದರ ಬಗ್ಗೆ ಅರಿವು ಇರಬೇಕಾಗಿದೆ. ಕೊರೊನಾದ ಸೂಕ್ತ ನಡವಳಿಕೆಯನ್ನು ಅನುಸರಿಸಿ ಮತ್ತು ಸಭೆಗಳನ್ನು ಸೇರಬೇಡಿ” ಎಂದು ಅಗರ್ವಾಲ್ ಹೇಳಿದರು.

ಒಕ್ಕೂಟ ಸರ್ಕಾರದ ಕೊರೊನಾ ಕಾರ್ಯಪಡೆಯ ಮುಖ್ಯಸ್ಥ ಡಾ. ವಿ.ಕೆ. ಪಾಲ್, “ತಕ್ಷಣಕ್ಕೆ ಯಾವುದೇ ರೀತಿಯ ತೀವ್ರ ನಿರ್ಬಂಧಗಳನ್ನು ಕೈಗೊಂಡಿಲ್ಲ. ಪರಿಸ್ಥಿತಿಯು ನಿಯಂತ್ರಣದಲ್ಲಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಸಾಲ ನೀಡಲು SBI ಜೊತೆ ಕೈಜೋಡಿಸಿದ ಅದಾನಿ ಕ್ಯಾಪಿಟಲ್

ಈ ಬಗ್ಗೆ ಬೆಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಗೌರವ್ ಗುಪ್ತಾ ಅವರು ಕೂಡಾ ಸ್ಪಷ್ಟ ಪಡಿಸಿದ್ದಾರೆ. “ಬಿಬಿಎಂಪಿ ವ್ಯಾಪ್ತಿಯಲ್ಲಿ ಇಬ್ಬರು ಕೋವಿಡ್ ಪಾಸಿಟಿವ್ ವ್ಯಕ್ತಿಗಳಲ್ಲಿ ಓಮೈಕ್ರಾನ್ ವೈರಾಣು ಪತ್ತೆಯಾಗಿದ್ದು, ಪಾಲಿಕೆ ವತಿಯಿಂದ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾರೊಬ್ಬರೂ ಭಯಪಡುವ ಅಗತ್ಯವಿಲ್ಲ. ಎಲ್ಲರೂ ಕೋವಿಡ್ ನಿಯಮಗಳನ್ನು(CAB) ಅನ್ನು ಪಾಲಿಸಲು ಕೋರುತ್ತೇನೆ” ಎಂದು ತಿಳಿಸಿದ್ದಾರೆ.

ಓಮಿಕ್ರಾನ್ ವೇಗವಾಗಿ ಹರಡುತ್ತದೆ ಎಂಬುವುದನ್ನು ತಜ್ಞರು ಸ್ಪಷ್ಟಪಡಿಸಿದ್ದರಾದರೂ, ಅದರಿಂದಾಗಿ ತೀವ್ರ ಆರೋಗ್ಯದ ಸಮಸ್ಯೆ ಆಗುತ್ತದೆ ಎಂಬ ಬಗ್ಗೆ ಯಾವುದೆ ಪುರಾವೆ ಇಲ್ಲ ಎಂದು ಹೇಳಿದ್ದಾರೆ.

ಓಮಿಕ್ರಾನ್‌ ರೂಪಾಂತರ ವೈರಸ್‌ ಅನ್ನು ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಹಚ್ಚಲಾಯಿತು. ಇದು ಪತ್ತೆಯಾಗುತ್ತಿದ್ದಂತೆ ಹಲವಾರು ರಾಷ್ಟ್ರಗಳು ನಿರ್ಬಂಧಗಳನ್ನು ಪುನಃ ಹೇರುತ್ತಿವೆ. 2020 ರ ಅಕ್ಟೋಬರ್‌ನಲ್ಲಿ ಭಾರತದಲ್ಲಿ ಮೊದಲು ಕಂಡುಹಿಡಿಯಲಾದ ಡೆಲ್ಟಾ ರೂಪಾಂತರ ವೈರಸ್‌ ನಂತರ ಈ ವೈರಸ್‌ ಹೊಸತಾಗಿ ಪತ್ತೆಯಾಗಿದೆ.

ಭಾರತವು ಡಿಸೆಂಬರ್ 15 ರಂದು ನಿಗದಿತ ವಾಣಿಜ್ಯ ಅಂತರರಾಷ್ಟ್ರೀಯ ವಿಮಾನಯಾನಗಳನ್ನು ಮರುಪ್ರಾರಂಭಿಸಲು ಸಿದ್ಧವಾಗಿತ್ತು. ಆದರೆ ಬುಧವಾರ ಆ ಯೋಜನೆಯನ್ನು ರದ್ದುಗೊಳಿಸಿ, ಮರುಪ್ರಾರಂಭದ ದಿನಾಂಕವನ್ನು ಸರಿಯಾದ ಸಮಯದಲ್ಲಿ ಘೋಷಿಸಲಾಗುವುದು ಎಂದು ಹೇಳಿದೆ.

ಇದನ್ನೂ ಓದಿ:ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...