Homeಮುಖಪುಟಬೆಂಗಳೂರು | ಕಾರು ಗುದ್ದಿ ಡೆಲಿವರಿ ಬಾಯ್ ಹತ್ಯೆ ಆರೋಪ : ದಂಪತಿ ಬಂಧನ

ಬೆಂಗಳೂರು | ಕಾರು ಗುದ್ದಿ ಡೆಲಿವರಿ ಬಾಯ್ ಹತ್ಯೆ ಆರೋಪ : ದಂಪತಿ ಬಂಧನ

- Advertisement -
- Advertisement -

ಕಾರು ಗುದ್ದಿ ಗಿಗ್ ಕಾರ್ಮಿಕನನ್ನು (ಡೆಲಿವರಿ ಬಾಯ್) ಹತ್ಯೆಗೈದು, ಅದನ್ನು ರಸ್ತೆ ಅಪಘಾತ ಎಂದು ಬಿಂಬಿಸಿದ್ದ ಆರೋಪದ ಮೇಲೆ ದಂಪತಿಯನ್ನು ಬೆಂಗಳೂರು ದಕ್ಷಿಣ ಪೊಲೀಸರು ಬಂಧಿಸಿದ್ದಾರೆ.

ಅರೆಕೆರೆ ನಿವಾಸಿಗಳಾದ ಮನೋಜ್‌ (32) ಮತ್ತು ಆತನ ಪತ್ನಿ ಆರತಿ ಶರ್ಮಾ (29) ಬಂಧಿತರು. ಅ.25ರಂದು ತಡರಾತ್ರಿ ಸುಮಾರು 12 ಗಂಟೆಗೆ ನಗರದ ನಟರಾಜ ಲೇಔಟ್‌ನ ಶ್ರೀರಾಮ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ.

ಕೆಂಬತ್ತಹಳ್ಳಿ ನಿವಾಸಿಯಾದ ದರ್ಶನ್‌ (22) ಹತ್ಯೆಯಾದ ಡೆಲಿವರಿ ಬಾಯ್. ಈತನ ಸ್ನೇಹಿತ ವರುಣ್‌ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ದರ್ಶನ್‌ ಸಹೋದರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಮನೋಜ್‌ ಕಲರಿಪಯಟ್ಟು ತರಬೇತುದಾರನಾದರೆ, ಪತ್ನಿ ಆರತಿ ಶರ್ಮಾ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ದಂಪತಿ ಕಳೆದ ಎಂಟು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದಾರೆ. ಕೆಂಬತ್ತಹಳ್ಳಿಯ ದರ್ಶನ್‌ ಮತ್ತು ಉತ್ತರಹಳ್ಳಿಯ ವರುಣ್‌ ಸ್ನೇಹಿತರಾಗಿದ್ದು, ಆಹಾರ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದರು.

ಮನೋಜ್‌ ಮತ್ತು ಆರತಿ ಶರ್ಮಾ ಅಕ್ಟೋಬರ್ 25ರಂದು ತಡರಾತ್ರಿ ತಮ್ಮ ಕಾರಿನಲ್ಲಿ ನಟರಾಜ ಲೇಔಟ್‌ ಮಾರ್ಗವಾಗಿ ಮನೆ ಕಡೆಗೆ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಎದುರಿನಿಂದ ದರ್ಶನ್‌ ಮತ್ತು ವರುಣ್‌ ದ್ವಿಚಕ್ರ ವಾಹನದ ಮೂಲಕ ಮನೆ ಕಡೆಗೆ ಹೊರಟಿದ್ದರು. ಈ ವೇಳೆ ಆಕಸ್ಮಿಕವಾಗಿ ದರ್ಶನ್‌ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಮನೋಜ್‌ ಅವರ ಕಾರಿನ ಮಿರರ್‌ಗೆ ತಾಕಿದೆ. ಅದಕ್ಕಾಗಿ ದರ್ಶನ್‌ ಕ್ಷಮೆ ಕೇಳಿ ದ್ವಿಚಕ್ರ ವಾಹನ ನಿಲ್ಲಿಸದೆ ಮುಂದಕ್ಕೆ ಹೊರಟ್ಟಿದ್ದಾರೆ.

ಇದರಿಂದ ರೊಚ್ಚಿಗೆದ್ದ ಮನೋಜ್ ದಂಪತಿ, ಕಾರನ್ನು ಯೂ-ಟರ್ನ್ ತೆಗೆದುಕೊಂಡು ಸುಮಾರು 2 ಕಿ.ಮೀ ಹಿಂಬಾಲಿಸಿ ದರ್ಶನ್ ಮತ್ತು ವರುಣ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ದರ್ಶನ್ ಮತ್ತು ವರುಣ್ ಇಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದರು. ದರ್ಶನ್ ಗಂಭೀರವಾಗಿ ಗಾಯಗೊಂಡರೆ, ವರುಣ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರು. ಅಪಘಾತದ ಬಳಿಕ ದಂಪತಿ ಕಾರು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದರು. ಗಂಭೀರ ಗಾಯಗೊಂಡಿದ್ದ ದರ್ಶನ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತೀವ್ರ ರಕ್ತಸ್ತಾವವಾಗಿ ಚಿಕಿತ್ಸೆ ಫಲಿಸದೆ ದರ್ಶನ್ ಸಾವನ್ನಪ್ಪಿದ್ದರು.

ಈ ಸಂಬಂಧ ದರ್ಶನ್ ಸಹೋದರಿ ನೀಡಿದ ದೂರು ಆಧರಿಸಿ ತನಿಖೆ ಕೈಗೊಂಡ ಜೆ.ಪಿ ನಗರ ಸಂಚಾರಿ ಠಾಣೆ ಪೊಲೀಸರು, ಘಟನಾ ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮನೋಜ್ ದಂಪತಿ ಉದ್ದೇಶಪೂರ್ವಕವಾಗಿಯೇ ಕಾರು ಗುದ್ದಿ ದರ್ಶನ್ ಸಾವಿಗೆ ಕಾರಣರಾಗಿರುವುದು ಗೊತ್ತಾಗಿದೆ. ಪೊಲೀಸರು ಕಾರಿನ ನೋಂದಣಿ ಸಂಖ್ಯೆ ಮೂಲಕ ದಂಪತಿಯನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಉದ್ದೇಶಪೂರ್ವಕವಾಗಿ ಕಾರು ಗುದ್ದಿರುವುದನ್ನು ದಂಪತಿ ಒಪ್ಪಿಕೊಂಡಿದ್ದಾರೆ. ಹಾಗಾಗಿ, ಜೆ.ಪಿ ನಗರ ಸಂಚಾರಿ ಪೊಲೀಸರು ಪ್ರಕರಣವನ್ನು ಪುಟ್ಟೇನಹಳ್ಳಿ ಠಾಣೆಗೆ ವರ್ಗಾಯಿಸಿದ್ದು, ಅವರು ದಂಪತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.

ದಲಿತ ಟೆಕ್ಕಿ ಕೆವಿನ್ ಅಮಾನವೀಯ ಹತ್ಯೆ ಪ್ರಕರಣ; ಆರೋಪಿ ಪೊಲೀಸ್‌ ಅಧಿಕಾರಿಗೆ ಜಾಮೀನು ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, "ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್...

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ...

ಬಿಹಾರದಲ್ಲಿ ರಾಹುಲ್ ಗಾಂಧಿ ‘ಅಂಗಡಿ’ ಮುಚ್ಚಲಿದೆ: ಅಮಿತ್ ಶಾ

‘ಚುನಾವಣೆಯಲ್ಲಿ 160 ಸ್ಥಾನಗಳನ್ನು ಗೆಲ್ಲುವ ಮೂಲಕ ಎನ್‌ಡಿಎ ಮೈತ್ರಿಕೂಟವು ಸರ್ಕಾರ ರಚಿಸಲಿದ್ದು, ಬಿಹಾರದಲ್ಲಿ ರಾಹುಲ್ ಗಾಂಧಿ ಅವರ ‘ಅಂಗಡಿ’ ಮುಚ್ಚಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. ಬಿಹಾರದ ಪುರ್ನಿಯಾದಲ್ಲಿ...

‘ಮತಗಳ್ಳತನ’ ವಿರುದ್ಧ 1.12 ಕೋಟಿ ಸಹಿ ಸಂಗ್ರಹ, ನ.10ರಂದು ಎಐಸಿಸಿಗೆ ಹಸ್ತಾಂತರ : ಡಿ.ಕೆ ಶಿವಕುಮಾರ್

ರಾಜ್ಯ ಹಾಗೂ ದೇಶದಲ್ಲಿ ನಡೆದಿರುವ ಮತಗಳ್ಳತನದ ವಿರುದ್ಧ ಎಐಸಿಸಿ ನಾಯಕರು ಹಮ್ಮಿಕೊಂಡಿರುವ ಸಹಿಸಂಗ್ರಹ ಅಭಿಯಾನದಲ್ಲಿ ಕರ್ನಾಟಕದಿಂದ 1,12,40,000 ಸಹಿಗಳನ್ನು ಸಂಗ್ರಹಿಸಲಾಗಿದೆ" ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ...

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ವಿಡಿಯೋ ವೈರಲ್, ಟ್ರೋಲ್; ಅವಮಾನ ಸಹಿಸಲಾಗದೆ ಯುವಕ ಆತ್ಮಹತ್ಯೆ

ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಳ್ಲಿ ವೈರಲ್ ಆಗಿ, ಜನರಿಂದ ನಿಂದನೆ, ಟ್ರೋಲ್ ಗಳನ್ನು ಸಹಿಸಲಾಗದೆ 27ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯಲ್ಲಿ ನಡೆದಿದೆ. ಅಕ್ಟೋಬರ್...

ಸವಾರಿ ಸಮಯದಲ್ಲಿ ಕಾಲು ಹಿಡಿಯಲು ಪ್ರಯತ್ನಿಸಿದ ರಾಪಿಡೋ ಚಾಲಕ: ಯುವತಿ ಆರೋಪ

ಗುರುವಾರ ಸಂಜೆ ಸವಾರಿ ಮಾಡುವಾಗ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದನೆಂದು ಬೆಂಗಳೂರಿನ ಯುವತಿಯೊಬ್ಬರು ಆರೋಪಿಸಿದ್ದಾರೆ. ನವೆಂಬರ್ 6 ರಂದು ನಡೆದಿರುವುದಾಗಿ ವರದಿಯಾಗಿರುವ ಈ ಘಟನೆಯು, ಅವರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ...

‘ಬಾಡಿ ಶೇಮಿಂಗ್’ ಪ್ರಶ್ನೆ ಕೇಳಿದ ಪತ್ರಕರ್ತನನ್ನು ತರಾಟೆಗೆ ತೆಗೆದುಕೊಂಡ ನಟಿ ಗೌರಿ ಕಿಶನ್ : ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಶಂಸೆ

ಬಾಡಿ ಶೇಮಿಂಗ್ (ದೇಹಾಕೃತಿಯನ್ನು ಹಿಯಾಳಿಸುವ) ಮತ್ತು ಲೈಂಗಿಕ ಉದ್ದೇಶವನ್ನು ಹೊಂದಿರುವ ಪ್ರಶ್ನೆ ಕೇಳಿದ ಯೂಟ್ಯೂಬ್ ಪತ್ರಕರ್ತನನ್ನು ನಟಿ ಗೌರಿ ಕಿಶನ್ ತೀವ್ರ ತರಾಟೆ ತೆಗೆದುಕೊಂಡ ಘಟನೆ ನವೆಂಬರ್ 6ರಂದು ಚೆನ್ನೈನಲ್ಲಿ ನಡೆದಿದೆ. ಗೌರಿ ಮತ್ತು...

ದಲಿತ ಯುವಕನಿಗೆ ಮೂತ್ರ ಕುಡಿಸಿದ್ದ 3 ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್

ಗ್ವಾಲಿಯರ್ : ಕಳೆದ ತಿಂಗಳು ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಭಿಂಡ್ ಮೂತ್ರ ವಿಸರ್ಜನೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್‌ನ ಗ್ವಾಲಿಯರ್ ಪೀಠ ಶುಕ್ರವಾರ ತಿರಸ್ಕರಿಸಿದೆ. ಕೆಲವು ಮೇಲ್ಜಾತಿಯ ಯುವಕರು ದಲಿತ...

ಬಿಜೆಪಿ-ಆರ್‌ಎಸ್‌ಎಸ್, ಶಿಯಾ ಧರ್ಮಗುರು ಕುರಿತ ಮಾನನಷ್ಟ ಪ್ರಕರಣಗಳಿಂದ ಅಜಂ ಖಾನ್ ಖುಲಾಸೆ

ಉತ್ತರ ಪ್ರದೇಶದ ಮಾಜಿ ಸಚಿವ ಅಜಂ ಖಾನ್ ಅವರನ್ನು ದ್ವೇಷ ಹರಡುವುದು, ಅಧಿಕೃತ ಲೆಟರ್‌ಹೆಡ್ ಅನ್ನು ದುರುಪಯೋಗಪಡಿಸಿಕೊಳ್ಳುವುದು ಸೇರಿದಂತೆ ಬಿಜೆಪಿ, ಆರ್‌ಎಸ್‌ಎಸ್ ಮತ್ತು ಪ್ರಮುಖ ಶಿಯಾ ಧರ್ಮಗುರು ಮೌಲಾನಾ ಸೈಯದ್ ಕಲ್ಬೆ ಜವಾದ್...

ಪುಣೆ ಭೂ ಹಗರಣ: ಅಜಿತ್ ಪವಾರ್ ಪುತ್ರ ಪಾರ್ಥ್ ಸಂಸ್ಥೆಗೆ ನೋಟಿಸ್; ದಂಡ ಪಾವತಿಸುವಂತೆ ಕಂದಾಯ ಇಲಾಖೆ ಸೂಚನೆ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪುತ್ರ ಪಾರ್ಥ್ ಪವಾರ್ ಭಾಗಿಯಾಗಿದ್ದಾರೆ ಎಂದು ಹೇಳಲಾದ ಪುಣೆ ಭೂ ಹಗರಣದಲ್ಲಿ ಹೊಸ ಬೆಳವಣಿಗೆ ಬೆಳಕಿಗೆ ಬಂದಿದೆ. ಪಾರ್ಥ್‌ಗೆ ಸಂಬಂಧಿಸಿದ ಅಮೀಡಿಯಾ ಎಲ್‌ಎಲ್‌ಪಿ ಕಂಪನಿಗೆ ರಾಜ್ಯ...