Homeಮುಖಪುಟಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

ಬೆಲೆ ಏರಿಕೆ: ಮದುಮಕ್ಕಳಿಗೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಈರುಳ್ಳಿ ಉಡುಗೊರೆ!

45 ಸೆಕೆಂಡ್‌ಗಳ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನೂರಾರು ಮಂದಿ ತಮ್ಮ ಗೋಡೆಗಳಲ್ಲಿ ಹಂಚಿಕೊಂಡಿದ್ದಾರೆ.

- Advertisement -
- Advertisement -

ಚಿನ್ನ, ಬೆಳ್ಳಿ ಬೆಲೆ ದುಬಾರಿಯಾಗುತ್ತಿರುವಂತೆಯೇ ಇಂಧನ, ಈರುಳ್ಳಿ ಬೆಲೆಯೂ ಹೆಚ್ಚುತ್ತಿದೆ. ಮದುವೆಗಳಲ್ಲಿ ದುಬಾರಿ ಗಿಫ್ಟ್ ಕೊಡುವವರು ಈಗ ಹೊಸ ಹೊಸ ಪ್ಲಾನ್‌ಗಳನ್ನು ಮಾಡುತ್ತಿದ್ದಾರೆ. ತಮಿಳುನಾಡಿನಲ್ಲಿ ನಡೆದ ಮದುವೆಯೊಂದರಲ್ಲಿ ನವದಂಪತಿಗೆ ಸ್ನೇಹಿತರು ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್ ಮತ್ತು ಈರುಳ್ಳಿ ಉಡುಗೊರೆ ನೀಡಿದ್ದಾರೆ.

ತಮಿಳುನಾಡಿನ ಚೆನೈನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವಧು-ವರರ ಸ್ನೇಹಿತರು ದುಬಾರಿ ಉಡುಗೊರೆ ನೀಡಲು ಯೋಚಿಸಿ, ಒಂದು ಎಲ್‌ಪಿಜಿ ಸಿಲಿಂಡರ್, ಕ್ಯಾನ್ ಪೆಟ್ರೋಲ್ ನೀಡಿದ್ದಾರೆ. ಜೊತೆಗೆ ಈರುಳ್ಳಿಯಿಂದ ಮಾಡಿದ ಹೂಮಾಲೆಗಳನ್ನು ತೋಡಿಸಿದ್ದಾರೆ.

45 ಸೆಕೆಂಡ್‌ಗಳ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ನೂರಾರು ಮಂದಿ ತಮ್ಮ ವಾಲ್‌ಗಳಲ್ಲಿ ಹಂಚಿಕೊಂಡಿದ್ದಾರೆ.

ನವ ದಂಪತಿಯಾದ ಕಾರ್ತಿಕ್ ಮತ್ತು ಶರಣ್ಯ ಈ ಗಿಫ್ಟ್‌ಗಳಿಂದ ಆಶ್ಚರ್ಯಚಕಿತರಾಗಿದ್ದು, ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್, ಈರುಳ್ಳಿ ಹಾರಗಳನ್ನು ಧರಿಸಿ ಫೋಟೋಗೆ ಪೋಸ್ ನೀಡಿದ್ದಾರೆ. ಮದುವೆಗೆ ಆಗಮಿಸಿದ್ದ ಅತಿಥಿಗಳು ಕೂಡ ಸ್ನೇಹಿತರ ಈ ಉಡುಗೊರೆಗಳನ್ನು ನೋಡಿ ನಗು ಚೆಲ್ಲಿದ್ದಾರೆ.

ದೇಶದಲ್ಲಿ ಕಳೆದ 12 ದಿನಗಳಿಂದ ಇಂಧನ ಬೆಲೆ ಸತತವಾಗಿ ಹೆಚ್ಚಾಗುತ್ತಿದೆ. ಇದರ ಜೊತೆಗೆ ಒಕ್ಕೂಟ ಸರ್ಕಾರ ಎಲ್​​ಪಿಜಿ ಸಿಲಿಂಡರ್​ ಬೆಲೆಯನ್ನು ಏರಿಕೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಯುವ ಜನತೆ ಹೀಗೆ ಉಡುಗೊರೆಗಳನ್ನು ನೀಡುವ ಮೂಲಕ ಬೆಲೆ ಏರಿಕೆಯನ್ನು ವಿಭಿನ್ನವಾಗಿ ವಿರೋಧಿಸಿದ್ದಾರೆ.

ಇದನ್ನೂ ಓದಿ: ಒಬ್ಬನೇ ಒಬ್ಬ ಪ್ರೇಕ್ಷಕನಿಗೆ ಐವರು ಭಾಷಣಕಾರರು!: ಬಿಜೆಪಿ ಕಾಲೆಳೆದ ಸಂಸದ ಶಶಿ ತರೂರ್

ಇಂಧನ ದರ ಏರಿಕೆ ಖಂಡಿಸಿ ದೇಶದಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಮೀಮ್ಸ್‌ಗಳು ಹರಿದಾಡುತ್ತಿವೆ. ನಿನ್ನೆಯಷ್ಟೇ (ಫೆ.20) ಮಹಾರಾಷ್ಟ್ರದಲ್ಲಿ ಅಂತರರಾಜ್ಯ ಡೀಸೆಲ್ ಕಳ್ಳರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿ, ಗ್ಯಾಂಗ್‌ನ 14 ಸದಸ್ಯರನ್ನು ವಶಕ್ಕೆ ಪಡೆಯಲಾಗಿದೆ.


ಇದನ್ನೂ ಓದಿ: ಮಹಾರಾಷ್ಟ್ರ: ಅಂತರರಾಜ್ಯ ಡೀಸೆಲ್ ಕಳ್ಳರ ಗ್ಯಾಂಗ್‌ನ 14 ಸದಸ್ಯರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...