Homeಮುಖಪುಟ10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

- Advertisement -
- Advertisement -

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ.

ಉತ್ತರ ಪ್ರದೇಶದ ಜಲ ಮಂಡಳಿಯ ಮಾಜಿ ಜೂನಿಯರ್ ಇಂಜಿನಿಯರ್ ರಾಮ್ ಭವನ್ (50) ಮತ್ತು ಆತನ ಪತ್ನಿ ದುರ್ಗಾವತಿ (47) ಶಿಕ್ಷೆಗೆ ಒಳಗಾದ ಅಪರಾಧಿಗಳು.

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ದಂಪತಿ ಅಪರಾಧಿಗಳೆಂದು ನ್ಯಾಯಾಲಯವು ತೀರ್ಪು ನೀಡಿದೆ.

ಅಪರಾಧದ ಪ್ರಮಾಣ, ಅವಧಿ ಮತ್ತು ವ್ಯವಸ್ಥಿತ ಸ್ವರೂಪವನ್ನು ಉಲ್ಲೇಖಿಸಿದ ನ್ಯಾಯಾಧೀಶರು, ಈ ಪ್ರಕರಣವು ‘ಅಪರೂಪದಲ್ಲಿ ಅಪರೂಪ’ ಎಂದು ಆದೇಶದಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೆ, ಅಪರಾಧಿಗಳಲ್ಲಿ ಸುಧಾರಣೆಗೆ ಯಾವುದೇ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, 2010 ಮತ್ತು 2020ರ ನಡುವೆ ಬಾಲಕರ ಮೇಲೆ ದೌರ್ಜನ್ಯಗಳು ನಡೆದಿವೆ. ಸಂತ್ರಸ್ತರ ಪೈಕಿ ಕೇವಲ ಮೂರು ವರ್ಷದಷ್ಟು ಚಿಕ್ಕ ಬಾಲಕರು ಕೂಡ ಸೇರಿದ್ದಾರೆ ಎಂಬುವುದು ಅತ್ಯಂತ ಆಘಾತಕಾರಿ ವಿಷಯವಾಗಿದೆ.

ದಂಪತಿ ತಮ್ಮ ನೆರೆಹೊರೆಯಲ್ಲಿ ವಾಸಿಸುತ್ತಿದ್ದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಅಪ್ರಾಪ್ತ ಬಾಲಕರನ್ನೇ ಗುರಿಯಾಗಿಸಿಕೊಂಡಿದ್ದರು. ಮಕ್ಕಳಿಗೆ ಹಣ, ಆಹಾರ, ಮೊಬೈಲ್ ಫೋನ್‌ಗಳು, ಇಂಟರ್ನೆಟ್ ಸೌಲಭ್ಯ ಮತ್ತು ಆನ್‌ಲೈನ್ ವಿಡಿಯೋ ಗೇಮ್‌ಗಳ ಆಮಿಷವೊಡ್ಡುತ್ತಿದ್ದರು.

ಒಮ್ಮೆ ಮಕ್ಕಳ ವಿಶ್ವಾಸ ಗಳಿಸಿದ ನಂತರ, ದಂಪತಿ ತಮ್ಮ ಮನೆಯಲ್ಲೇ ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದರು. ಈ ಘೋರ ಕೃತ್ಯಗಳನ್ನು ಮೊಬೈಲ್ ಫೋನ್‌ ಮತ್ತು ಇತರ ಡಿಜಿಟಲ್ ಸಾಧನಗಳಲ್ಲಿ ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು.

ವಿಡಿಯೋಗಳನ್ನು ಎನ್‌ಕ್ರಿಪ್ಟ್ ಮಾಡಿದ ಪ್ಲಾಟ್‌ಫಾರ್ಮ್‌ಗಳು ಮತ್ತು ಡಾರ್ಕ್ ವೆಬ್ ಸೇರಿದಂತೆ ವಿವಿಧ ಆನ್‌ಲೈನ್ ಮಾಧ್ಯಮಗಳಲ್ಲಿ ಹಂಚಿಕೆ ಮತ್ತು ಮಾರಾಟ ಮಾಡುತ್ತಿದ್ದರು. ಈ ವಿಡಿಯೋಗಳನ್ನು ಸುಮಾರು 47 ದೇಶಗಳ ಗ್ರಾಹಕರು ವೀಕ್ಷಿಸುತ್ತಿದ್ದರು ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

2020ರಲ್ಲಿ ಇಂಟರ್‌ಪೋಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಈ ಪ್ರಕರಣದ ತನಿಖೆಯನ್ನು ಆರಂಭಿಸಿತ್ತು. ಸಿಬಿಐ ಅಂತರ್ಜಾಲದಲ್ಲಿ ಮಕ್ಕಳ ಲೈಂಗಿಕ ದೌರ್ಜನ್ಯದ ವಿಷಯಗಳನ್ನು (ಸಿಎಸ್‌ಎಎಂ) ಮೇಲ್ವಿಚಾರಣೆ ಮಾಡುವಾಗ ಆರೋಪಿ ರಾಮ್ ಭವನ್ ಸಿಕ್ಕಿ ಬಿದ್ದಿದ್ದ.

ಈತ ಮತ್ತು ಈತನ ಪತ್ನಿ ದುರ್ಗಾವತಿ ಸೇರಿ ಬಾಲಕರ ಮೇಲಿನ ದೌರ್ಜನ್ಯದ ವಿಡಿಯೋಗಳನ್ನು ಚಿತ್ರೀಕರಿಸಿ, ಅವುಗಳನ್ನು ಡಾರ್ಕ್ ವೆಬ್ ಮೂಲಕ ಸುಮಾರು 47 ದೇಶಗಳಿಗೆ ಮಾರಾಟ ಮಾಡುತ್ತಿದ್ದರು ಎಂಬುದು ನಂತರ ತನಿಖೆಯಿಂದ ತಿಳಿದು ಬಂದಿತ್ತು.

ಸಿಬಿಐ ಅಕ್ಟೋಬರ್ 31,2020 ರಂದು ರಾಮ್ ಭವನ್, ದುರ್ಗಾವತಿ ಮತ್ತು ಇತರ ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ಲೈಂಗಿಕ ದೌರ್ಜನ್ಯ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಸಾಮಗ್ರಿಗಳ ರಚನೆ ಮತ್ತು ಪ್ರಸಾರದ ಆರೋಪಗಳನ್ನು ಹೊರಿಸಿತ್ತು.

ತನಿಖೆಯ ವೇಳೆ ಅಪರಾಧಿಗಳ ಮನೆಯಿಂದ 8 ಲಕ್ಷ ರೂಪಾಯಿ ನಗದು, 12 ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ಪೆನ್ ಡ್ರೈವ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇವುಗಳಲ್ಲಿ ಸಾವಿರಾರು ಅಶ್ಲೀಲ ವಿಡಿಯೋಗಳು ಮತ್ತು ಫೋಟೋಗಳು ಪತ್ತೆಯಾಗಿತ್ತು. ತನಿಖಾಧಿಕಾರಿಗಳು ಸಂತ್ರಸ್ತ ಬಾಲಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು ಮತ್ತು ಹೇಳಿಕೆಗಳನ್ನು ದಾಖಲಿಸಿದ್ದರು.

ತನಿಖೆ ಪೂರ್ಣಗೊಳಿಸಿ ಫೆಬ್ರವರಿ 10, 2021ರಂದು ಸಿಬಿಐ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿತ್ತು.

ವಿಚಾರಣೆಯ ಸಮಯದಲ್ಲಿ, ಪ್ರಾಸಿಕ್ಯೂಷನ್ ಸಂತ್ರಸ್ತರ ಸಾಕ್ಷ್ಯಗಳು, ವೈದ್ಯಕೀಯ ತಜ್ಞರ ವರದಿಗಳು ಮತ್ತು ವಶಪಡಿಸಿಕೊಂಡ ಮೊಬೈಲ್ ಫೋನ್‌ ಹಾಗೂ ಪೆನ್‌ಡ್ರೈವ್‌ಗಳಿಂದ ವಶಪಡಿಸಿಕೊಂಡ ಡಿಜಿಟಲ್ ಪುರಾವೆಗಳು ಸೇರಿದಂತೆ ಬಹು ಸಾಕ್ಷ್ಯಗಳನ್ನು ನ್ಯಾಯಾಲಯದ ಮುಂದಿಟ್ಟಿತ್ತು.

ದೌರ್ಜನ್ಯದಿಂದ ಬಾಲಕರಿಗೆ ತೀವ್ರ ದೈಹಿಕ ಮತ್ತು ಮಾನಸಿಕ ಹಾನಿಯಾಗಿದೆ. ಕೆಲವು ಸಂತ್ರಸ್ತರ ಗಾಯಗಳಿಗೆ ಆಸ್ಪತ್ರೆಯ ಚಿಕಿತ್ಸೆ ಅಗತ್ಯವಿದೆ. ಇನ್ನು ಕೆಲವರಿಗೆ ಕಣ್ಣುಗಳು ಕೆಂಪಾಗುವುದು ಸೇರಿದಂತೆ ತೊಂದರೆಗಳು ಉಂಟಾಗಿವೆ ಎಂಬುವುದನ್ನು ನ್ಯಾಯಾಲಯ ಗಮನಿಸಿತ್ತು.

ಸುಮಾರು 10 ವರ್ಷಗಳ ಕಾಲ ದೌರ್ಜನ್ಯ ಮುಂದುವರೆದಿತ್ತು. ಹೆಚ್ಚಿನ ಸಂಖ್ಯೆಯ ಮಕ್ಕಳು ಇದಕ್ಕೆ ಬಲಿಯಾಗಿದ್ದಾರೆ ಎಂಬುವುದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, “ಇದು ವ್ಯವಸ್ಥಿತ ಮತ್ತು ಶೋಷಣೆಯ ಕೃತ್ಯ” ಎಂದು ಹೇಳಿದ್ದಾರೆ.

2026ರ ಫೆ. 20ರಂದು ನ್ಯಾಯಾಲಯವು ದಂಪತಿಯು ಬಹು ಅಪರಾಧಗಳಲ್ಲಿ ದೋಷಿಗಳು ಎಂದು ಘೋಷಿಸಿ ಮರಣದಂಡನೆ ಶಿಕ್ಷೆ ವಿಧಿಸಿದೆ. ಇದೇ ವೇಳೆ 33 ಸಂತ್ರಸ್ತರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...