ಸಿಎಎ ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದದ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್‌ | Naanu gauri

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟಗಾರ ಅಖಿಲ್ ಗೊಗೊಯ್‌‌ ವಿರುದ್ದ ದಾಖಲಾಗಿದ್ದ ಎರಡು ಪ್ರಕರಣಗಳಲ್ಲಿ ಒಂದು ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ನ್ಯಾಯಾಲಯವು ಮಂಗಳವಾರ ಖುಲಾಸೆಗೊಳಿಸಿದೆ. 2019 ರಲ್ಲಿ ಅಸ್ಸಾಂನಲ್ಲಿ ನಡೆದ ಸಿಎಎ ವಿರೋಧಿ ಹೋರಾಟದಲ್ಲಿ ಭಾಗವಹಿಸಿದ್ದಕ್ಕಾಗಿ ಅವರ ವಿರುದ್ದ ಪ್ರಕರಣಗಳು ದಾಖಲಾಗಿದ್ದವು. ಆದರೆ ಅವರು ಜೈಲಿನಲ್ಲಿದ್ದುಕೊಂಡೆ ಇತ್ತೀಚೆಗೆ ಅಸ್ಸಾಂನಲ್ಲಿ ನಡೆದ ಚುನಾವಣೆ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.

ಎನ್‌ಐಎ ಅವರ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಿದ್ದು, ಒಂದು ಐಪಿಸಿ ಮತ್ತು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ತಿದ್ದುಪಡಿ ಕಾಯ್ದೆ (ಯುಎಪಿಎ) ಯ ಹಲವಾರು ವಿಭಾಗಗಳ ಅಡಿಯಲ್ಲಿ ದಿಬ್ರುಗಡದ ಚಾಬುವಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ಇನ್ನುಂದು ಗುವಾಹಟಿಯ ಚಾಂದಮರಿಯಲ್ಲಿ ಪ್ರಕರಣದಲ್ಲಿ ದಾಖಲಾಗಿತ್ತು. ಪ್ರಸ್ತುತ ಚಾಬುವಾ ಪ್ರಕರಣವನ್ನು ಖುಲಾಸೆಗೊಳಿಸಲಾಗಿದ್ದು, ಮತ್ತೊಂದು ಪ್ರಕರಣ ಮುಂದುವರಿಯಲಿದೆ.

ಇದನ್ನೂ ಓದಿ: ಪರಿಸರ ಚಳವಳಿ, ಸಿಎಎ ವಿರೋಧಿ ಹೋರಾಟಗಳ ಗಟ್ಟಿ ದನಿ ಅಖಿಲ್ ಗೊಗೋಯ್

ಅಪರಾಧ ಪಿತೂರಿ, ದೇಶದ್ರೋಹ, ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ರಾಷ್ಟ್ರೀಯ ಸಮಗ್ರತೆಗೆ ವಿರುದ್ಧವಾದ ಪ್ರತಿಪಾದನೆಗಳು ಮತ್ತು ಭಯೋತ್ಪಾದಕ ಸಂಘಟನೆಗಳಿಗೆ ಬೆಂಬಲ ಇತ್ಯಾದಿ ಪ್ರಕರಣಗಳು ಅವರ ಮೇಲೆ ದಾಖಲಾಗಿದ್ದವು.

“ಚಾಬುವಾ ಪ್ರಕರಣದ ವಿಚಾರಣೆ ಮುಗಿದಿದೆ. ಅಖಿಲ್ ಗೊಗೊಯ್ ಮತ್ತು ಇತರ ಇಬ್ಬರು ತಪ್ಪು ಮಾಡಿದ್ದಾರೆ ಎಂದು ಸಾಬೀತುಪಡಿಸಲು ಎನ್‌ಐಎ ವಿಫಲವಾದ ಕಾರಣ ಅವರನ್ನು ಪ್ರಕರಣದಿಂದ ಖುಲಾಸೆ ಮಾಡಲಾಗಿದೆ” ಎಂದು ಗೊಗೊಯಿ ಪರ ವಕೀಲ ಕೃಷ್ಣ ಅಖಿಲ್ ಗೊಗೊಯ್‌‌ ಪತ್ರಕರ್ತರಿಗೆ ತಿಳಿಸಿದ್ದಾರೆ.

ಅಸ್ಸಾಮಿನ ಹೆಸರಾಂತ ರೈತ ಸಂಘಟನೆಯಾದ ಕೃಷಿಕ್ ಮುಕ್ತಿ ಸಂಗ್ರಾಮ್ ಸಮಿತಿ (KMSS)ಯ ನಾಯಕರಾದ ಅಖಿಲ್ ಗೊಗೋಯ್ ಅವರನ್ನು ಜೊರ್‌ಹಾಟ್‌ನಲ್ಲಿ 2019ರ ಡಿಸೆಂಬರ್ 12ರ ಸಂಜೆ ಬಂಧಿಸಲಾಗಿತ್ತು. ಆಗಿನಿಂದ ಅವರು ಸೆರೆವಾಸ ಅನುಭವಿಸುತ್ತಲೆ ಇದ್ದಾರೆ.

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here