ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರ ಸಮಾಧಿ ಅಥವಾ ಅಜ್ಮೀರ್ ದರ್ಗಾವನ್ನು ಶಿವ ದೇವಾಲಯ ಎಂದು ಪ್ರತಿಪಾದಿಸಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯ ಇಂದು (ನ.27) ವಿಚಾರಣೆಗೆ ಸ್ವೀಕರಿಸಿದೆ ಎಂದು ವರದಿಯಾಗಿದೆ.
ಹಿಂದೂ ಸೇನೆ ಸಲ್ಲಿಸಿರುವ ಅರ್ಜಿಯನ್ನು ಅಜ್ಮೀರ್‌ನ ಸ್ಥಳೀಯ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದ್ದು, ಮುಂದಿನ ವಿಚಾರಣೆಯನ್ನು ಡಿಸೆಂಬರ್ 20ಕ್ಕೆ ನಿಗದಿಪಡಿಸಿದೆ ಎಂದು ತಿಳಿದು ಬಂದಿದೆ.
ಅಜ್ಮೀರ್ ಪಶ್ಚಿಮ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ಮನಮೋಹನ್ ಚಂದೇಲ್ ಅವರು ವಿಷ್ಣು ಗುಪ್ತಾ ಎಂಬವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದು, ಅಜ್ಮೀರ್ ದರ್ಗಾ ಸಮಿತಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಗೆ ನೋಟಿಸ್ ಜಾರಿ ಮಾಡುವಂತೆ ಸೂಚಿಸಿದ್ದಾರೆ.
ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅರ್ಜಿದಾರ ವಿಷ್ಣು ಗುಪ್ತಾ, ಅಜ್ಮೀರ್ ದರ್ಗಾವು ಮಹಾದೇವನಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಪ್ರತಿಪಾದಿಸಿದ್ದಾಗಿ ವರದಿ ಹೇಳಿದೆ.
ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಅಜ್ಮೀರ್ ದರ್ಗಾವನ್ನು ಶಿವ ದೇವಾಲಯವೆಂದು ಘೋಷಿಸಲು ಕೋರಿ ವಿಷ್ಣು ಗುಪ್ತಾ ಅವರು ಸಲ್ಲಿಸಿದ್ದ ಸಿವಿಲ್ ದಾವೆಯನ್ನು ಸ್ವೀಕರಿಸಲು ಅಜ್ಮೀರ್ ನ್ಯಾಯಾಲಯ ನಿರಾಕರಿಸಿತ್ತು.
ಇದನ್ನೂ ಓದಿ : ದೇಶದಲ್ಲಿ 58,929 ವಕ್ಫ್ ಆಸ್ತಿಗಳ ಅತಿಕ್ರಮಣ, ಕರ್ನಾಟಕದಲ್ಲಿ 869 : ಕೇಂದ್ರ



Super