Homeಮುಖಪುಟಎನ್‌ಇಪಿ ಜಾರಿಗೊಳಿಸುವಂತೆ ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

ಎನ್‌ಇಪಿ ಜಾರಿಗೊಳಿಸುವಂತೆ ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

- Advertisement -
- Advertisement -

ತಮಿಳುನಾಡು ಸರ್ಕಾರ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ -2020 (ಎನ್‌ಇಪಿ) ಮತ್ತು ಅದರ ‘ತ್ರಿಭಾಷಾ ಸೂತ್ರ’ವನ್ನು ಜಾರಿಗೊಳಿಸುವಂತೆ ನಿರ್ದೇಶಿಸಲು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಶುಕ್ರವಾರ (ಮೇ.9) ವಜಾಗೊಳಿಸಿದೆ.

ಸಂವಿಧಾನದ 32ನೇ ವಿಧಿಯಡಿಯಲ್ಲಿ ಯಾವುದೇ ರಾಜ್ಯ ಎನ್‌ಇಪಿ ಅಳವಡಿಸಿಕೊಳ್ಳುವಂತೆ ಒತ್ತಾಯಿಸಿ ನ್ಯಾಯಾಲಯ ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠ ಹೇಳಿದೆ.

ಜಿ.ಎಸ್ ಮಣಿ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯವು ಹೀಗೆ ಹೇಳಿದೆ:

“ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿ, 2020 ಅನ್ನು ಅಳವಡಿಸಿಕೊಳ್ಳಬೇಕೇ ಅಥವಾ ಬೇಡವೇ ಎಂಬುದು ಒಂದು ಸಂಕೀರ್ಣ ವಿಷಯವಾಗಿದೆ. ಸಂವಿಧಾನದ 32ನೇ ವಿಧಿಯ ಮೂಲಕ ಸುಪ್ರೀಂ ಕೋರ್ಟ್ ನಾಗರಿಕರ ಹಕ್ಕುಗಳನ್ನು ರಕ್ಷಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ನಿರ್ದೇಶನಗಳನ್ನು ನೀಡಬಹುದು. ಆದರೆ, ರಾಷ್ಟ್ರೀಯ ಶಿಕ್ಷಣ ನೀತಿ 2020ರಂತಹ ನೀತಿಯನ್ನು ಅಳವಡಿಸಿಕೊಳ್ಳಲು ರಾಜ್ಯವನ್ನು ನೇರವಾಗಿ ಒತ್ತಾಯಿಸಲು ಸಾಧ್ಯವಿಲ್ಲ. ಆದಾಗ್ಯೂ, ರಾಷ್ಟ್ರೀಯ ಶಿಕ್ಷಣ ನೀತಿಗೆ ಸಂಬಂಧಿಸಿದ ರಾಜ್ಯದ ಕ್ರಮ ಅಥವಾ ನಿಷ್ಕ್ರಿಯತೆಯು ಯಾವುದೇ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದರೆ ನ್ಯಾಯಾಲಯವು ಮಧ್ಯಪ್ರವೇಶಿಸಬಹುದು. ಈ ಅರ್ಜಿಯಲ್ಲಿ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾದ ಬಗ್ಗೆ ಪ್ರಸ್ತಾಪಿಸಿಲ್ಲ. ಹಾಗಾಗಿ, ಈ ಬಗ್ಗೆ ಪರಿಶೀಲಿಸಲು ಸೂಚಿಸುವ ಅಗತ್ಯವಿಲ್ಲ. ಅರ್ಜಿದಾರರು ತಮಿಳುನಾಡು ರಾಜ್ಯದವರಾಗಿರಬಹುದು. ಆದರೆ, ಅವರ ಸ್ವಂತ ಒಪ್ಪಿಗೆಯ ಮೇರೆಗೆ, ಅವರು ಈಗ ನವದೆಹಲಿಯಲ್ಲಿ ವಾಸಿಸುತ್ತಿದ್ದಾರೆ. ಇಂತಹ ಸಂದರ್ಭಗಳಲ್ಲಿ, ಈ ಅರ್ಜಿಯನ್ನು ವಜಾಗೊಳಿಸಲಾಗಿದೆ.”

“ಪಿಐಎಲ್‌ನ ಮುಖ್ಯ ವಿಷಯವನ್ನು ನ್ಯಾಯಾಲಯವು ಸೂಕ್ತ ಕ್ರಮದಲ್ಲಿ ಪರಿಶೀಲಿಸಬಹುದು” ಎಂದು ಇದೇ ವೇಳೆ ನ್ಯಾಯಪೀಠ ಹೇಳಿದೆ.

ಅಲ್ಲದೆ, ತಕ್ಷಣ ವಿಷಯವನ್ನು ಕೈಗೆತ್ತಿಕೊಂಡಿದೆ. ಈ ವೇಳೆ ಖುದ್ದಾಗಿ ನ್ಯಾಯಾಲಯದಲ್ಲಿ ಹಾಜರಿದ್ದ ಅರ್ಜಿದಾರರನ್ನು, “ನೀವು ಯಾರು? ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ನಿಮಗೆ ಏಕೆ ಕಾಳಜಿ ಅಥವಾ ಯಾವ ರೀತಿಯ ಕಾಳಜಿ? ಎಂದು ಪೀಠ ಪ್ರಶ್ನಿಸಿದೆ.

ಅದಕ್ಕೆ ಉತ್ತರಿಸಿದ ಅರ್ಜಿದಾರ, “ತಾನು ತಮಿಳುನಾಡಿನವನು, ಈಗ ದೆಹಲಿಯಲ್ಲಿ ನೆಲೆಸಿದ್ದೇನೆ. ಹಿಂದಿ ಕಲಿಸುವುದಿಲ್ಲ ಎಂಬ ತಮಿಳುನಾಡಿನ ನೀತಿಯಿಂದಾಗಿ, ತನಗೆ ಸುಲಭವಾಗಿ ಹಿಂದಿ ಕಲಿಯಲು ಸಾಧ್ಯವಾಗಲಿಲ್ಲ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಪಾರ್ದಿವಾಲಾ ಅವರು, “ಈಗ ದೆಹಲಿಯಲ್ಲಿ ಇದ್ದೀರಲ್ವ ಹಿಂದಿ ಕಲಿಯಿರಿ” ಎಂದು ಹೇಳಿದ್ದಾರೆ. ಈ ಮೂಲಕ ತಮಿಳುನಾಡಿನಲ್ಲಿ ಎನ್‌ಇಪಿಗೆ ಜಾರಿಗೆ ನಿರ್ದೇಶನ ನೀಡಲು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ 2020ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಶಿಕ್ಷಣ ನೀತಿ ಅಥವಾ ಹೊಸ ಶಿಕ್ಷಣ ನೀತಿಯನ್ನು (ಎನ್‌ಇಪಿ) ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲ ಎಂದು ತಮಿಳುನಾಡು ಸರ್ಕಾರ ಹೇಳಿದೆ. ಎನ್‌ಇಪಿಯ ತ್ರಿಭಾಷ ಸೂತ್ರ ಹಿಂದಿ ಹೇರಿಕೆಯ ಪ್ರಯತ್ನ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ್ದಾರೆ.

ವಿಕಿಪೀಡಿಯಾ VS ಎಎನ್‌ಐ | ಪುಟ ತೆಗೆದು ಹಾಕುವ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್; ಮಾನನಷ್ಟ ಮೊಕದ್ದಮೆಯ ಹೊಸ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...