ಎನ್‌ಇಪಿ ಜಾರಿಗೊಳಿಸುವಂತೆ ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

ತಮಿಳುನಾಡು ಸರ್ಕಾರ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ -2020 (ಎನ್‌ಇಪಿ) ಮತ್ತು ಅದರ ‘ತ್ರಿಭಾಷಾ ಸೂತ್ರ’ವನ್ನು ಜಾರಿಗೊಳಿಸುವಂತೆ ನಿರ್ದೇಶಿಸಲು ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಶುಕ್ರವಾರ (ಮೇ.9) ವಜಾಗೊಳಿಸಿದೆ. ಸಂವಿಧಾನದ 32ನೇ ವಿಧಿಯಡಿಯಲ್ಲಿ ಯಾವುದೇ ರಾಜ್ಯ ಎನ್‌ಇಪಿ ಅಳವಡಿಸಿಕೊಳ್ಳುವಂತೆ ಒತ್ತಾಯಿಸಿ ನ್ಯಾಯಾಲಯ ಯಾವುದೇ ನಿರ್ದೇಶನ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಜೆ.ಬಿ. ಪಾರ್ದಿವಾಲಾ ಮತ್ತು ನ್ಯಾಯಮೂರ್ತಿ ಆರ್. ಮಹಾದೇವನ್ ಅವರನ್ನೊಳಗೊಂಡ ಪೀಠ ಹೇಳಿದೆ. ಜಿ.ಎಸ್ ಮಣಿ ಎಂಬವರು ಸಲ್ಲಿಸಿದ್ದ ಅರ್ಜಿಯನ್ನು … Continue reading ಎನ್‌ಇಪಿ ಜಾರಿಗೊಳಿಸುವಂತೆ ರಾಜ್ಯವನ್ನು ಒತ್ತಾಯಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌