Homeಮುಖಪುಟಮತ್ತೆರೆಡು ದಿನ JNU ಕಾರ್ಯಕರ್ತೆಯರ ಪೊಲೀಸ್‌ ಕಸ್ಟಡಿ ವಿಸ್ತರಿಸಿದ ನ್ಯಾಯಾಲಯ

ಮತ್ತೆರೆಡು ದಿನ JNU ಕಾರ್ಯಕರ್ತೆಯರ ಪೊಲೀಸ್‌ ಕಸ್ಟಡಿ ವಿಸ್ತರಿಸಿದ ನ್ಯಾಯಾಲಯ

- Advertisement -
- Advertisement -

ಫೆಬ್ರವರಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಮೇ 26 ರ ಮಂಗಳವಾರದಂದು ಪಿಂಜ್ರಾತೋಡ್ ಕಾರ್ಯಕರ್ತೆಯರಾದ ದೇವಂಗನಾ ಕಲಿತಾ ಮತ್ತು ನತಾಶಾ ನರ್ವಾಲ್ ಅವರ ಪೊಲೀಸ್ ಕಸ್ಟಡಿಯನ್ನು ಮತ್ತೆರೆಡು ದಿನಗಳವರೆಗೆ ವಿಸ್ತರಿಸಿದೆ.

ಕಲಿತಾ (30) ಮತ್ತು ನಾರ್ವಾಲ್ (32) ಅವರನ್ನು ಪೊಲೀಸರು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ ನಂತರ ಮಂಡೋಲಿ ಜೈಲಿನೊಳಗಿನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು.

ಮೇ 23 ರಂದು ಜಫರಾಬಾದ್ ಧರಣಿ ಪ್ರತಿಭಟನೆಯಲ್ಲಿ ಪಾತ್ರವಹಿಸಿದ್ದಕ್ಕಾಗಿ ಇಬ್ಬರು ಕಾರ್ಯಕರ್ತರನ್ನು ಬಂಧಿಸಲಾಯಿತು ಮತ್ತು ಮರುದಿನ ಅವರಿಗೆ ಜಾಮೀನು ನೀಡಲಾಯಿತು. ಆದರೆ, ಕೆಲವೇ ನಿಮಿಷಗಳಲ್ಲಿ ಇಬ್ಬರು ಮಹಿಳೆಯರನ್ನು ಕೊಲೆ ಯತ್ನ, ಗಲಭೆ ಮತ್ತು ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಮತ್ತೆ ಬಂಧಿಸಲಾಯಿತು.

ಅವರ ಮೇಲೆ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ), ಸೆಕ್ಷನ್ 120 ಬಿ (ಕ್ರಿಮಿನಲ್ ಪಿತೂರಿ), ಶಸ್ತ್ರಾಸ್ತ್ರ ಕಾಯ್ದೆಯಡಿ ಅಪರಾಧಗಳು ಮತ್ತು ಸಾರ್ವಜನಿಕ ಆಸ್ತಿ ನಾಶವನ್ನು ತಡೆಗಟ್ಟುವ ಕಾಯ್ದೆಯಡಿ ಹೊಸ ಎಫ್‌ಐಆರ್ ದಾಖಲಿಸಲಾಗಿದೆ.

ಪೊಲೀಸರು 14 ದಿನಗಳ ಕಸ್ಟಡಿಗೆ ಕೋರಿದರೆ, ನ್ಯಾಯಾಲಯವು ಎರಡು ದಿನಗಳ ಕಸ್ಟಡಿ ನೀಡಿತು, ಅದನ್ನು ಈಗ ಮತ್ತೆರೆಡು ದಿನಗಳಿಗೆ ವಿಸ್ತರಿಸಲಾಗಿದೆ. ನ್ಯಾಯಾಲಯವು ಮುಂದಿನ ವಿಚಾರನೆಯನ್ನು ಮೇ 29 ರ ಶುಕ್ರವಾರ ನಡೆಸಲಿದೆ.


ಇದನ್ನೂ ಓದಿ: CAA ವಿರೋಧಿ ಹೋರಾಟಗಾರ್ತಿಯವರಿಗೆ ಜಾಮೀನು ನೀಡಿದ ನ್ಯಾಯಾಲಯ: ಮತ್ತೆ ಬಂಧಿಸಿದ ದೆಹಲಿ ಪೊಲೀಸರು! 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...