Homeಕರ್ನಾಟಕಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಪ್ರಕರಣ| ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಪ್ರಕರಣ| ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

- Advertisement -
- Advertisement -

ಕಾಂಗ್ರೆಸ್‌ ಅಧಿಕಾರವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿರುವ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಅವರ ಕುಟುಂಬಸ್ಥರಿಗೆ ಮತ್ತೊಂದು ಸಂಕಟ ಎದುರಾಗಿದೆ.

ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಅಂತಿಮ ವರದಿ ಸಲ್ಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ಬುಧವಾರ ಆದೇಶಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯಡಿಯೂರಪ್ಪ ಮತ್ತು ಅವರ ಕುಟುಂಬಸ್ಥರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್‌ಸ್ಟ್ರಕ್ಷನ್‌ ಕಂಪೆನಿಯಿಂದ ಕೋಟ್ಯಂತರ ರೂಪಾಯಿ ನಗದು ಮತ್ತು ಶೆಲ್ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪ ಅವರ ಮೇಲಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು 2021ರ ಜೂನ್‌ನಲ್ಲಿ ದಾಖಲಿಸಿದ್ದ ಖಾಸಗಿ ದೂರಿನ ವಿಚಾರಣೆಯನ್ನು ಬುಧವಾರ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಜಯಂತ್‌ ಕುಮಾರ್, ತನಿಖೆ ನಡೆಸಿ, ನವೆಂಬರ್ 2ರ ಒಳಗೆ ಅಂತಿಮ ವರದಿ ಸಲ್ಲಿಸಬೇಕು ಎಂದು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದ್ದಾರೆ.

ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯಿದೆಯ ಸೆಕ್ಷನ್‌ಗಳಾದ 7, 8, 9, 10 ಮತ್ತು 13, ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 383, 384, 415, 418, 420, 34 ಮತ್ತು 120ಬಿ ಅಡಿಯ ಅಪರಾಧಗಳಿಗೆ ಸಂಬಂಧಿಸಿದಂತೆ ಸಿಆರ್‌ಪಿಸಿ ಸೆಕ್ಷನ್ 156(3)ರ ಅಡಿ ತನಿಖೆ ನಡೆಸಲು ಬೆಂಗಳೂರಿನ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ನ್ಯಾಯಾಲಯವು ಆದೇಶಿಸಿದೆ.

ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಲಾಗಿದ್ದು, ಈಚೆಗೆ ಕರ್ನಾಟಕ ಹೈಕೋರ್ಟ್, ವಿಶೇಷ ತನಿಖಾ ದಳದಿಂದ (ಎಸ್ಐಟಿ) ತನಿಖೆಗೆ ಆಗ್ರಹಿಸಿ ಅಬ್ರಹಾಂ ಸಲ್ಲಿಸಿದ್ದ ಮನವಿಯನ್ನು ಭಾಗಶಃ ಎತ್ತಿ ಹಿಡಿದಿತ್ತು.

ರಾಜ್ಯಪಾಲರಿಂದ ಅಗತ್ಯ ಪೂರ್ವಾನುಮತಿ ಪಡೆದಿಲ್ಲ ಎಂದು ಯಡಿಯೂರಪ್ಪ ಮತ್ತು ಇತರರ ವಿರುದ್ಧದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿತ್ತು. ಆ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಬದಿಗೆ ಸರಿಸಿತ್ತು. ಅಲ್ಲದೇ, ಯಡಿಯೂರಪ್ಪ ಮತ್ತು ಇತರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರನ್ನು ಮರುಪರಿಗಣಿಸಲು ಹೈಕೋರ್ಟ್ ಆದೇಶ ಮಾಡಿತ್ತು. ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ತನಿಖೆಗೆ ಆದೇಶಿಸಿದೆ.

ಇದನ್ನೂ ಓದಿರಿ: ರಾಜಕಾಲುವೆ ಒತ್ತುವರಿ: ಘಟಾನುಘಟಿ ಸಂಸ್ಥೆಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ

ಯಡಿಯೂರಪ್ಪ, ಪುತ್ರ ಬಿ.ವೈ.ವಿಜಯೇಂದ್ರ, ಪುತ್ರಿ ಪದ್ಮಾವತಿ ಅವರ ಅಳಿಯ ಸಂಜಯ್ ಶ್ರೀ, ಶಶಿಧರ ಮರಡಿ, ಚಂದ್ರಕಾಂತ್ ರಾಮಲಿಂಗಂ, ಅಂದಿನ ಬಿಡಿಎ ಅಧ್ಯಕ್ಷ ಹಾಗೂ ಹಾಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಐಎಎಸ್ ಅಧಿಕಾರಿ ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ಯಡಿಯೂರಪ್ಪ ಅವರ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ.

ಯಡಿಯೂರಪ್ಪ ಮತ್ತು ಸೋಮಶೇಖರ್ ವಿರುದ್ಧದ ತನಿಖೆಗೆ ಅನುಮತಿ ಕೋರಿ ಅಬ್ರಹಾಂ ಅವರು ರಾಜ್ಯಪಾಲರು ಮತ್ತು ವಿಧಾನಸಭೆ ಸ್ಪೀಕರ್‌ಗೆ ಮನವಿ ಸಲ್ಲಿಸಿದ್ದರು. 2021ರ ಜೂನ್ 24ರಂದು ರಾಜ್ಯಪಾಲರು ಅನುಮತಿ ನಿರಾಕರಿಸಿದ್ದರು. ಇದನ್ನು ಆಧರಿಸಿ, 2021ರ ಜುಲೈ 8ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಖಾಸಗಿ ದೂರನ್ನು ವಜಾ ಮಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...