ಪೋಕ್ಸೋ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಕೋರ್ಟ್ ಸಮನ್ಸ್

ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಮಾರ್ಚ್ 15ಕ್ಕೆ ಪ್ರಕರಣದ ವಿಚಾರಣೆ ನಿಗದಿಪಡಿಸಿರುವ ಬೆಂಗಳೂರಿನ 1 ನೇ ತ್ವರಿತಗತಿ ನ್ಯಾಯಾಲಯ, ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪಪಟ್ಟಿಯ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಳ್ಳಲಿದ್ದು, ಯಡಿಯೂರಪ್ಪ ಮತ್ತು ಪ್ರಕರಣದ ಇತರೆ ಆರೋಪಿಗಳಿಗೂ ಸಮನ್ಸ್‌ ಜಾರಿ ಮಾಡಿದೆ. ತನ್ನ ವಿರುದ್ದದ ಪೋಕ್ಸೋ ಪ್ರಕರಣ ರದ್ದುಗೊಳಿಸುವಂತೆ ಮತ್ತು ನಿರೀಕ್ಷಣಾ ಜಾಮೀನು ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಫೆಬ್ರವರಿ 7ರಂದು ಯಡಿಯೂರಪ್ಪ … Continue reading ಪೋಕ್ಸೋ ಪ್ರಕರಣ : ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಕೋರ್ಟ್ ಸಮನ್ಸ್