Homeಕರ್ನಾಟಕನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ಅರ್ಜಿ: ಎಸ್‌ಐಟಿಗೆ ಕೋರ್ಟ್‌ ನೋಟಿಸ್

ನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ಅರ್ಜಿ: ಎಸ್‌ಐಟಿಗೆ ಕೋರ್ಟ್‌ ನೋಟಿಸ್

- Advertisement -
- Advertisement -

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಮೊದಲ ಆರೋಪಿ, ಶಾಸಕ ಹೆಚ್‌.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯ ವಿಶೇಷ ತನಿಖಾ ತಂಡ (ಎಸ್‌ಐಟಿ)ಗೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.

ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಎಸ್‌ಐಟಿಗೆ ನೋಟಿಸ್ ಜಾರಿಗೊಳಿಸಿದ್ದು, ಆಕ್ಷೇಪಣೆ ಸಲ್ಲಿಸಲು ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಅರ್ಜಿ ವಿಚಾರಣೆ ವೇಳೆ ರೇವಣ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಮೂರ್ತಿ ಡಿ. ನಾಯ್ಕ್‌ ಅವರು, ಎಫ್‌ಐಆರ್‌ನಲ್ಲಿ ಜಾಮೀನು ನೀಡಬೇಕಾದ ಆರೋಪಗಳಿವೆ. ಆದರೆ, ಮ್ಯಾಜಿಸ್ಟ್ರೇಟ್‌ಗೆ ಅತ್ಯಾಚಾರ ಆರೋಪ ಸೇರಿಸಲು ಅರ್ಜಿ ನೀಡಲಾಗಿದೆ. ಇದಕ್ಕೆ ಪೂರಕವಾಗಿ ರೇವಣ್ಣ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ವಾದ ಮಂಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿದಾರರ ವಿರುದ್ಧ ಎಸ್ಐಟಿ, ಭಾರತೀಯ ದಂಡ ಸಂಹಿತೆ–1860ರ ಕಲಂ 376 (ಅತ್ಯಾಚಾರ ಆರೋಪ) ಅನ್ನು ಸೇರ್ಪಡೆ ಮಾಡಿದೆ. ಗೃಹ ಸಚಿವರು ಪ್ರಕರಣದ ಆರೋಪಿಗಳನ್ನು ಬಂಧಿಸುವುದಾಗಿ ತಿಳಿಸಿದ್ದಾರೆ. ಆದ್ದರಿಂದ, ಅರ್ಜಿದಾರರಿಗೆ ಬಂಧನದಿಂದ ರಕ್ಷಣೆ ನೀಡಬೇಕು ಮತ್ತು ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದಾರೆ.

“ಎಫ್‌ಐಆರ್‌ನಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಆರೋಪಗಳಿವೆ. ನಿರೀಕ್ಷಣಾ ಜಾಮೀನು ಅರ್ಜಿ ಹೇಗೆ ಊರ್ಜಿತವಾಗುತ್ತದೆ? ನೀವು ವಿಚಾರಣಾ ನ್ಯಾಯಾಲಯದಲ್ಲಿ ನೇರವಾಗಿ ಹಾಜರಾಗಬಹುದಿತ್ತಲ್ಲಾ?” ಎಂದು ರೇವಣ್ಣ ಪರ ವಕೀಲರನ್ನು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ.

ಬಳಿಕ ಎಸ್‌ಐಟಿಗೆ ನೋಟಿಸ್ ಜಾರಿ ಮಾಡಿ, ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದ್ದಾರೆ. ವಿಚಾರಣೆಯನ್ನು ನಾಳೆಗೆ (ಮೇ.3) ಮುಂದೂಡಲಾಗಿದೆ.

ಇದನ್ನೂ ಓದಿ : ಪ್ರಜ್ವಲ್‌ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

0
"ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ಮಧ್ಯೆಯೇ ಬಹಿರಂಗವಾಗಿ ಗೋಹತ್ಯೆ ಮಾಡಿದ್ದಾರೆ" ಎಂದು ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಜೀಪ್‌ ಒಂದರ ಮುಂಭಾಗದಲ್ಲಿ ಹಸುವಿನ ಕಳೇಬರ ಕಟ್ಟಿದಂತೆ ಕಾಣುತ್ತಿದೆ. ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆಯನ್ನು ನಾವು...