Homeಮುಖಪುಟಇಸ್ಲಾಂ, ಪ್ರವಾದಿ ವಿರುದ್ಧ ಹೇಳಿಕೆ : ವಿಚಾರಣೆಗೆ ಗೈರಾದ ಜಿತೇಂದ್ರ ತ್ಯಾಗಿ ಬಂಧಿಸುವಂತೆ ಕೋರ್ಟ್ ಆದೇಶ

ಇಸ್ಲಾಂ, ಪ್ರವಾದಿ ವಿರುದ್ಧ ಹೇಳಿಕೆ : ವಿಚಾರಣೆಗೆ ಗೈರಾದ ಜಿತೇಂದ್ರ ತ್ಯಾಗಿ ಬಂಧಿಸುವಂತೆ ಕೋರ್ಟ್ ಆದೇಶ

- Advertisement -
- Advertisement -

ಇಸ್ಲಾಂ ಮತ್ತು ಪ್ರವಾದಿ ಮುಹಮ್ಮದರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಪ್ರಕರಣದಲ್ಲಿ ಜಿತೇಂದ್ರ ತ್ಯಾಗಿ ಅವರನ್ನು ಬಂಧಿಸಲು ಶ್ರೀನಗರ ನ್ಯಾಯಾಲಯ ಆದೇಶಿಸಿದೆ.

ಹಲವು ಬಾರಿ ನೋಟಿಸ್ ಜಾರಿ ಮಾಡಿದ್ದರೂ, ನ್ಯಾಯಾಲಯದ ಮುಂದೆ ಹಾಜರಾಗಲು ವಿಫಲರಾದ ಕಾರಣ ಬಂಧಿಸಲು ಆದೇಶ ಹೊರಡಿಸಲಾಗಿದೆ. ಬಂಧಿಸಲಾಗಿದೆ ಎಂಬುವುದನ್ನು ಖಚಿತಪಡಿಸಲು ಹಿರಿಯ ಪೊಲೀಸ್ ವರಿಷ್ಠಾಧಿಕಾರಿಗೆ (ಎಸ್‌ಎಸ್‌ಪಿ) ನ್ಯಾಯಾಲಯ ನಿರ್ದೇಶನ ನೀಡಿದೆ.

ಆರೋಪಿಯನ್ನು ಬಂಧಿಸಲು ತಂಡ ರಚಿಸಬೇಕು. ಮುಂದಿನ ವಿಚಾರಣೆಯ ದಿನವಾದ ಏಪ್ರಿಲ್ 25ರೊಳಗೆ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ಶ್ರೀನಗರದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಸೂಚಿಸಿದೆ.

2021ರಲ್ಲಿ ಲಕ್ನೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವಾಗ ಇಸ್ಲಾಂ ಮತ್ತು ಪ್ರವಾದಿ ಮುಹಮ್ಮದರ ವಿರುದ್ಧ ನೀಡಿದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ, ಧಾರ್ಮಿಕ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವುದು ಸೇರಿದಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, ಸೆಕ್ಷನ್ 295ಎ ಮತ್ತು ಸೆಕ್ಷನ್ 505ರ ಅಡಿಯಲ್ಲಿ ಜಿತೇಂದ್ರ ತ್ಯಾಗಿ ವಿರುದ್ದ ಶ್ರೀನಗರದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಕ್ರಿಮಿನಲ್ ದೂರು ದಾಖಲಿಸಲಾಗಿದೆ.

ಜಿತೇಂದ್ರ ತ್ಯಾಗಿ 2021ರಲ್ಲಿ ಕುರ್‌ಆನ್‌ನಲ್ಲಿರುವ ಕೆಲವು ಸೂಕ್ತಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜಿತೇಂದ್ರ ತ್ಯಾಗಿಗೆ ಛೀಮಾರಿ ಹಾಕಿತ್ತು. ಅಲ್ಲದೆ, ಅವರ ವಿರುದ್ದ ಹಲವು ಎಫ್‌ಐಆರ್‌ಗಳು ದಾಖಲಾಗಿತ್ತು.

ಈ ಹಿಂದೆ ವಸೀಮ್ ರಿಝ್ವಿ ಎಂಬ ಹೆಸರಿನೊಂದಿಗೆ ಇಸ್ಲಾಂ ಧರ್ಮದ ಜೊತೆ ಗುರುತಿಸಿಕೊಂಡಿದ್ದ ಜಿತೇಂದ್ರ ತ್ಯಾಗಿ, ಉತ್ತರ ಪ್ರದೇಶದ ಶಿಯಾ ಕೇಂದ್ರ ವಕ್ಫ್ ಮಂಡಳಿಯ ಅಧ್ಯಕ್ಷರಾಗಿದ್ದರು. ಬಳಿಕ ಹಿಂದೂ ಧರ್ಮದ ತ್ಯಾಗಿ ಸಮುದಾಯದೊಂದಿಗೆ ಗುರುತಿಸಿಕೊಂಡ ಅವರು ತನ್ನ ಹೆಸರನ್ನು ಜಿತೇಂದ್ರ ನಾರಾಯಣ್ ಸಿಂಗ್ ತ್ಯಾಗಿ ಎಂದು ಬದಲಾಯಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ವಕ್ಫ್ ಆಸ್ತಿಗಳ ಮಾರಾಟ ಮತ್ತು ವರ್ಗಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ ತ್ಯಾಗಿ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಈ ಹಿಂದೆ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿತ್ತು.

ಜಾತ್ಯತೀತ ಸಂವಿಧಾನದಡಿ ‘ಹಿಂದೂ ರಾಷ್ಟ್ರ’ ಅಸ್ತಿತ್ವದಲ್ಲಿರಲು ಸಾಧ್ಯವಿಲ್ಲ : ಹಿರಿಯ ವಕೀಲೆ ಇಂದಿರಾ ಜೈಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಖಾತೆಗಳು ಸ್ಥಗಿತಗೊಳಿಸಿರುವುದನ್ನು ಪ್ರಶ್ನಿಸಿದ್ಧ ಟಿಎಂಸಿ ಆರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ : ವಿಚಾರಣೆ ತ್ವರಿತಗೊಳಿಸುವಂತೆ ಹೈಕೋರ್ಟ್‌ಗೆ ಸೂಚನೆ

ಪಶ್ಚಿಮ ಬಂಗಾಳ ಪೊಲೀಸರು ತಮ್ಮ ನಾಲ್ಕು 'ಇಂಡಿಯನ್ ಬ್ಯಾಂಕ್' ಖಾತೆಗಳನ್ನು ಸ್ಥಗಿತಗೊಳಿಸಿರುವುದನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ 'ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್' (ಎಐಟಿಸಿ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ (ಅ.1)...

ಬಂಗಾಳ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು; ನಂದಿಗ್ರಾಮ ಕಾಂಗ್ರೆಸ್‌ ಅಭ್ಯರ್ಥಿ ಜೈಲಿನಿಂದ ಬಿಡುಗಡೆ

ಪಶ್ಚಿಮ ಬಂಗಾಳ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ ಮರುದಿನವೇ, ಕಾಂಗ್ರೆಸ್‌ನ ನಂದಿಗ್ರಾಮ ಉಪಚುನಾವಣೆಯ ಅಭ್ಯರ್ಥಿ ಮಿಲನ್ ಪ್ರಧಾನ್ ಬುಧವಾರ (ಸೆ. 30) ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಲ್ದಿಯಾ ಜೈಲಿನ ಹೊರಗೆ...

ಚುನಾವಣಾ ಆಯೋಗದ ಐಟಿ ಸೆಲ್ ನಿರ್ದೇಶಕಿ ಸೀಮಾ ಖನ್ನಾ ವಿರುದ್ಧ ದೂರು ದಾಖಲಿಸಿದ ಸಂಸದೆ ಮಹುವಾ ಮೊಯಿತ್ರಾ

ಬಂಗಾಳದಲ್ಲಿ ಮತದಾರರ ಹೆಸರುಗಳು ಮತ್ತು ಪಟ್ಟಿಗಳನ್ನು ಕೇಂದ್ರ ಮಟ್ಟದಲ್ಲೇ ಸೇರಿಸಲು, ತೆಗೆದುಹಾಕಲು ಅಥವಾ ಬದಲಾಯಿಸಲು ಅನುವು ಮಾಡಿಕೊಡುವಂತಹ ಮತದಾರರ ಪಟ್ಟಿ ಸಾಫ್ಟ್‌ವೇರ್ ಬಳಕೆಗೆ ಸಂಬಂಧಿಸಿದಂತೆ, ಭಾರತೀಯ ಚುನಾವಣಾ ಆಯೋಗದ ಐಟಿ ವಿಭಾಗದ ಮಹಾನಿರ್ದೇಶಕಿ...

‘TCS ಮೇಲೆ ಒತ್ತಡ ಹೇರಲಾಗಿತ್ತೇ?’ : ಆನ್‌ಲೈನ್ ಫಾರಂ-6ರ ಬದಲಾವಣೆಗಳ ಕುರಿತು ಚುನಾವಣಾ ಆಯೋಗವನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ಹೊಸ ಮತದಾರರ ನೋಂದಣಿಗೆ ಬಳಸಲಾಗುವ ಆನ್‌ಲೈನ್ ಫಾರಂ ನಂಬರ್-6ರಲ್ಲಿ ಮಾಡಲಾದ ವಿವಾದಾತ್ಮಕ ಬದಲಾವಣೆಗಳ ಕುರಿತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುರುವಾರ (ಅ.1) ಭಾರತೀಯ ಚುನಾವಣಾ ಆಯೋಗದಿಂದ ಉತ್ತರವನ್ನು...

ರಾಜ್ಯದಾದ್ಯಂತ ಫಾರಂ-7ರ ಮೂಲಕ ವೋಟ್ ಡಿಲೀಟ್ ಮಾಡಿಸುತ್ತಿರುವ ಬಿಜೆಪಿಗರು : ಮಾಹಿತಿ ನೀಡಲು ಸಿಎಂ ಡಿ.ಕೆ ಶಿವಕುಮಾರ್ ಸೂಚನೆ

ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಫಾರಂ ನಂಬರ್ -7 ಸಲ್ಲಿಸುವ ಮೂಲಕ ಅಲ್ಪಸಂಖ್ಯಾತರು, ದಲಿತರು ಮತ್ತು ಬಡವರ ಮತಗಳನ್ನು ಡಿಲೀಟ್ ಮಾಡಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ. ಬುಧವಾರ (ಸೆ.30) ಸಾಮಾಜಿಕ...

ಉಜ್ಜಯಿನಿ ಶಾಹಿ ಮಸೀದಿ ಧ್ವಂಸ ಮೂರನೇ ದಿನಕ್ಕೆ: 14 ಮುಸ್ಲಿಮರ ಬಂಧನ, 30ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯ ಐತಿಹಾಸಿಕ ಶಾಹಿ ಮಸೀದಿ ಧ್ವಂಸ ಪ್ರಕರಣ ಮೂರನೇ ದಿನಕ್ಕೂ ಮುಂದುವರಿದಿದ್ದು, ಮಸೀದಿಯ ಸುತ್ತಮುತ್ತ ಭಾರೀ ಪೊಲೀಸ್ ಬಂದೋಬಸ್ತ್ ಮತ್ತು ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ. ಸೋಮವಾರ ಮಸೀದಿಯ ನೇತಾಡುವ ಚಪ್ಪಡಿಯ ಒಂದು...

ಹೈದರಾಬಾದ್ ವಿವಿ ಚುನಾವಣೆ: ABVPಗೆ ಮುಖಭಂಗ, ಅಧ್ಯಕ್ಷೆಯಾಗಿ SFIನ ದಿಲ್ಶಾದಾ ರೈಹಾನ್ ಭರ್ಜರಿ ಜಯ

ದೇಶದ ಪ್ರಮುಖ ಉನ್ನತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ (HCU) ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಬಲಪಂಥೀಯ ವಿದ್ಯಾರ್ಥಿ ಸಂಘಟನೆ ಎಬಿವಿಪಿಗೆ ಭಾರಿ ಹಿನ್ನಡೆಯಾಗಿದೆ. ಎಡಪಂಥೀಯ ಹಾಗೂ ದಲಿತ-ಬಹುಜನ ವಿದ್ಯಾರ್ಥಿ ಸಂಘಟನೆಗಳನ್ನೊಳಗೊಂಡ ಐಸಾ-ಎಎಸ್‌ಎ-ಡಿಎಸ್‌ಯು-ಎಸ್‌ಎಫ್‌ಐ-ಟಿಎಸ್‌ಎಫ್...

ಗ್ಯಾನೇಶ್ ಕುಮಾರ್ ನಿವಾಸದ ಬಳಿ ಪ್ರತಿಭಟನೆ: 6 ಕಾಂಗ್ರೆಸ್ ನಾಯಕರ ಬಂಧನ, 20 ಕಾರ್ಯಕರ್ತರ ವಿರುದ್ಧ ಕೊಲೆ ಯತ್ನದ ಆರೋಪ

ಆಗ್ರಾ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಆಗ್ರಾದಲ್ಲಿರುವ ಪೋಷಕರ ಪೈತೃಕ ನಿವಾಸದ ಹೊರಗೆ ನಡೆದ ಕಾಂಗ್ರೆಸ್ ಪ್ರತಿಭಟನೆ ಇದೀಗ ಗಂಭೀರ ಕಾನೂನು ಸಂಘರ್ಷಕ್ಕೆ ತಿರುಗಿದೆ. ಮತದಾರರ ಪಟ್ಟಿಯ ಪರಿಷ್ಕರಣೆ...

₹92,000 ಕೋಟಿ ವೆಚ್ಚದ ಗ್ರೇಟ್ ನಿಕೋಬಾರ್ ಯೋಜನೆ: ಕಲ್ಕತ್ತಾ ಹೈಕೋರ್ಟ್ ವಿಚಾರಣೆಗೆ ತಡೆ ಕೋರಿದ ಕೇಂದ್ರ ಸರ್ಕಾರ!

ಅಂದಾಜು ₹92,000 ಕೋಟಿ ವೆಚ್ಚದ ವಿವಾದಾತ್ಮಕ 'ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ'ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಕಾನೂನಾತ್ಮಕವಾಗಿ ಅತ್ಯಂತ ಅಚ್ಚರಿಯ ಉಲ್ಟಾ ನಿಲುವು ತಳೆದಿದೆ. ಈ ಯೋಜನೆಯಲ್ಲಿ ಅರಣ್ಯ ಹಕ್ಕುಗಳ ಕಾಯಿದೆ...

SIR | ಫಾರಂ-8ರ ಬದಲು ಫಾರಂ-6 ಸಲ್ಲಿಸುವಂತೆ ಒತ್ತಡ : ಒಂದೇ ಕುಟುಂಬದ 6 ಜನರ ವೋಟ್ ಡಿಲೀಟ್; ಚುನಾವಣಾ ಆಯೋಗಕ್ಕೆ ಬಾಂಬೆ ಹೈಕೋರ್ಟ್ ತಪರಾಕಿ

ಗೋವಾದ ಸಾಂತಾ ಕ್ರೂಝ್ ಮತಕ್ಷೇತ್ರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ, ಒಂದು ಕುಟುಂಬದ ಆರು ಸದಸ್ಯರು ತಮ್ಮ ವಿಳಾಸ ಬದಲಾವಣೆಯನ್ನು ತಿಳಿಸಲು 'ಫಾರ್ಮ್ 8' ಸಲ್ಲಿಸಿದ್ದರೂ ಸಹ, ಮತದಾರರ ಪಟ್ಟಿಯಿಂದ...