Homeಮುಖಪುಟಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

- Advertisement -
- Advertisement -

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಶನಿವಾರ (ಫೆ.21) ಆದೇಶಿಸಿದೆ.

ಶ್ರೀಕೃಷ್ಣ ಜನ್ಮಭೂಮಿ ಮುಕ್ತಿ ನಿರ್ಮಾಣ ಟ್ರಸ್ಟ್‌ನೊಂದಿಗೂ ಗುರುತಿಸಿಕೊಂಡಿರುವ ಶಾಕುಂಭರಿ ಪೀಠಾಧೀಶ್ವರ ಆಶುತೋಷ್ ಬ್ರಹ್ಮಚಾರಿ ಮಹಾರಾಜ್ ಅವರು ಪೊಲೀಸರು ಎಫ್‌ಐಆರ್ ದಾಖಲಿಸಲು ನಿರಾಕರಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ಸಂತ್ರಸ್ತ ಬಾಲಕರ ಪರವಾಗಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ ವಿಶೇಷ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರಾದ ವಿನೋದ್ ಕುಮಾರ್ ಚೌರಾಸಿಯಾ ಅವರು, ಈ ಪ್ರಕರಣವು ಗಂಭೀರ ಸ್ವರೂಪದ್ದಾಗಿದ್ದು ತನಿಖೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು, ಕೂಡಲೇ ಎಫ್‌ಐಆರ್ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ.

ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ಅವರು 14 ಮತ್ತು 17 ವರ್ಷದ ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬುದು ಮುಖ್ಯ ಆರೋಪವಾಗಿದೆ.

ಕಳೆದ ಒಂದು ವರ್ಷದಿಂದ ಅವರ ಆಶ್ರಮದಲ್ಲಿ ಹಾಗೂ ಇತ್ತೀಚೆಗೆ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಾಘ ಮೇಳದ ಸಂದರ್ಭದಲ್ಲಿ, ‘ಗುರು ಸೇವೆ’ ಮತ್ತು ‘ಧಾರ್ಮಿಕ ಮಾರ್ಗದರ್ಶನ’ದ ಹೆಸರಿನಲ್ಲಿ ಈ ದೌರ್ಜನ್ಯ ನಡೆದಿದೆ ಎಂದು ದೂರಲಾಗಿದೆ.

ಅರ್ಜಿದಾರರು ಮೊದಲು ಪ್ರಯಾಗ್‌ರಾಜ್ ಪೊಲೀಸ್ ಕಮಿಷನರ್ ಮತ್ತು ಸ್ಥಳೀಯ ಝುನ್ಸಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು. ಆದರೆ ಪೊಲೀಸರು ಎಫ್‌ಐಆರ್ ದಾಖಲಿಸದ ಕಾರಣ, ಜನವರಿ 28ರಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು ಎಂದು ವರದಿಯಾಗಿದೆ.

ಅರ್ಜಿದಾರರು ನ್ಯಾಯಾಲಯಕ್ಕೆ ಸಾಕ್ಷ್ಯವಾಗಿ ಕೆಲವು ವಿಡಿಯೋಗಳನ್ನೊಳಗೊಂಡ ಸಿಡಿ ಸಲ್ಲಿಸಿದ್ದಾರೆ. ಅಲ್ಲದೆ, ಫೆಬ್ರವರಿ 13ರಂದು ನ್ಯಾಯಾಲಯವು ಇಬ್ಬರು ಸಂತ್ರಸ್ತ ಬಾಲಕರ ಹೇಳಿಕೆಯನ್ನು ವಿಡಿಯೋಗ್ರಫಿ ಮೂಲಕ ದಾಖಲಿಸಿಕೊಂಡಿದೆ.

ಪೋಕ್ಸೊ ಕಾಯ್ದೆಯ ನಿಬಂಧನೆಗಳಿಗೆ ಅನುಸಾರವಾಗಿ ನ್ಯಾಯಯುತ ಮತ್ತು ಸ್ವತಂತ್ರ ತನಿಖೆ ನಡೆಸಬೇಕು ಮತ್ತು ಸಂತ್ರಸ್ತರ ಗುರುತು ಮತ್ತು ಘನತೆಯನ್ನು ರಕ್ಷಿಸಬೇಕು ಎಂದು ನ್ಯಾಯಾಲಯ ನಿರ್ದೇಶಿಸಿದೆ.

ನ್ಯಾಯಾಲಯದ ಆದೇಶಕ್ಕೆ ಪ್ರತಿಕ್ರಿಯಿಸಿರುವ ಅವಿಮುಕ್ತೇಶ್ವರಾನಂದ ಸರಸ್ವತಿ, ತನಿಖೆಯ ನಂತರವೇ ಸತ್ಯ ಹೊರಬರಲಿದೆ ಎಂದು ಹೇಳಿದ್ದಾರೆ.

“ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಸೂಚಿಸಿರುವುದು ಸರಿಯಾಗಿದೆ. ಪ್ರಕರಣ ದಾಖಲಾದಾಗ ಮಾತ್ರ ತನಿಖೆ ಮತ್ತು ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಆಗ ಮಾತ್ರ ನಮ್ಮ ವಿರುದ್ಧ ದಾಖಲಿಸಲಾದ ಸುಳ್ಳು ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ. ಈ ಕೃತ್ಯ ಎಸಗಿದವರಿಗೆ ಶಿಕ್ಷೆಯಾಗಲು ಸಾಧ್ಯವಾಗುತ್ತದೆ. ಆದ್ದರಿಂದ ಇದು ಅಗತ್ಯವಾಗಿದೆ” ಎಂದು ಸುದ್ದಿ ಸಂಸ್ಥೆ ಪಿಟಿಐಗೆ ಅವರು ಪ್ರತಿಕ್ರಿಯಿಸಿದ್ದಾರೆ.

“ನಾನು ಹೇಳುವುದಿಷ್ಟೇ, ಅನೇಕ ಜನರು ಈ ವಿಷಯವನ್ನು ಗಮನಿಸುತ್ತಿರುವುದರಿಂದ ನ್ಯಾಯಾಲಯ ಹೆಚ್ಚು ಸಮಯ ತೆಗೆದುಕೊಳ್ಳದೆ ಈ ಪ್ರಕ್ರಿಯೆಯನ್ನು ವೇಗವಾಗಿ ನಡೆಸಬೇಕು. ಆದಷ್ಟು ಬೇಗ ಸಾಕ್ಷ್ಯಗಳನ್ನು ದಾಖಲಿಸಿ ತೀರ್ಪು ನೀಡಬೇಕು. ತಪ್ಪು ಯಾವಾಗಲೂ ತಪ್ಪಾಗಿಯೇ ಇರುತ್ತದೆ. ನಮ್ಮ ವಿರುದ್ಧ ದಾಖಲಿಸಲಾದ ಸುಳ್ಳು ಪ್ರಕರಣವು ಅಂತಿಮವಾಗಿ ಸುಳ್ಳೆಂದು ಸಾಬೀತಾಗುತ್ತದೆ” ಎಂದು ಹೇಳಿದ್ದಾರೆ.

ಕಳೆದ ಕೆಲ ಸಮಯದಿಂದ ಸ್ವಾಮಿ ಅವಿಮುಕ್ತೇಶ್ವರಾನಂದರು ಉತ್ತರ ಪ್ರದೇಶದ ಆಡಳಿತರೂಢ ಬಿಜೆಪಿ ಜೊತೆ ಸಂರ್ಘದಲ್ಲಿ ತೊಡಗಿದ್ದಾರೆ.

ಕಳೆದ ತಿಂಗಳು, ಅವರು ‘ಶಂಕರಾಚಾರ್ಯ’ ಎಂಬ ಪದನಾಮವನ್ನು ಬಳಸುವುದರ ವಿರುದ್ಧ ಪ್ರಯಾಗ್‌ರಾಜ್ ಆಡಳಿತವು ನೋಟಿಸ್ ಕಳುಹಿಸಿತ್ತು, ಇದು ವಿರೋಧ ಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಜನವರಿ 18ರಂದು ಮೌನಿ ಅಮಾವಾಸ್ಯೆಯ ದಿನ ಸಂಗಮದಲ್ಲಿ ಸ್ನಾನ ಮಾಡುವ ಸ್ಥಳದ ಹತ್ತಿರ ಅವಿಮುಕ್ತೇಶ್ವರಾನಂದರನ್ನು ಪೊಲೀಸರು ತಡೆದಿದ್ದರು. ಅವರ ಅನುಯಾಯಿಗಳನ್ನು ಪೊಲೀಸರು ಒರಟಾಗಿ ನಡೆಸಿಕೊಂಡಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನು ಖಂಡಿಸಿ ಅವಿಮುಕ್ತೇಶ್ವರಾನಂದರು 48 ಗಂಟೆಗಳ ಕಾಲ ಆ ಸ್ಥಳದ ಸಮೀಪವೇ ಪ್ರತಿಭಟನೆ ನಡೆಸಿದ್ದರು.

2024ರ ಜನವರಿಯಲ್ಲಿ, ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಬಗ್ಗೆ ಅವಿಮುಕ್ತೇಶ್ವರಾನಂದರು ನೀಡಿದ ಹೇಳಿಕೆ ವಿವಾದವನ್ನು ಸೃಷ್ಟಿಸಿತ್ತು. “ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯಿಂದ ‘ರಾಜಕೀಯ ಹಿಂದೂಗಳು’ ಸಂತೋಷವಾಗಿದ್ದಾರೆ, ಆದರೆ ಅಸಂಖ್ಯಾತ ‘ಧಾರ್ಮಿಕ ಹಿಂದೂಗಳು’ ಅಲ್ಲ” ಎಂದು ಹೇಳುವ ಮೂಲಕ ಅವರು ಚರ್ಚೆಗೆ ನಾಂದಿ ಹಾಡಿದ್ದರು.

ಬಿಜೆಪಿ ಸರ್ಕಾರದ ವಿರುದ್ದ ತೊಡೆ ತಟ್ಟಿದ್ದ ಅವಿಮುಕ್ತೇಶ್ವರಾನಂದರ ವಿರುದ್ದ ಈಗ ಎಫ್‌ಐಆರ್‌ ದಾಖಲಾಗುತ್ತಿರುವುದು ರಾಜಕೀಯ ತಿರುವು ಪಡೆದುಕೊಂಡಿದೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...