Homeಕರ್ನಾಟಕಶಿಕ್ಷೆ ಘೋಷಿಸಿದ ನ್ಯಾಯಾಲಯ | ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ

ಶಿಕ್ಷೆ ಘೋಷಿಸಿದ ನ್ಯಾಯಾಲಯ | ಜನಾರ್ದನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹ

- Advertisement -
- Advertisement -

ಓಬಳಾಪುರಂ ಮೈನಿಂಗ್ ಕಂಪನಿ (OMC) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಗಣಿ ಉದ್ಯಮಿ ಮತ್ತು ಗಂಗಾವತಿಯ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ರಾಜ್ಯ ವಿಧಾನಸಭೆಯ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ವರದಿಯಾಗಿದೆ. ಶಿಕ್ಷೆ ಘೊಷಿಸಿದ ನ್ಯಾಯಾಲಯ

ರಾಜ್ಯ ವಿಧಾನಸಭೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಅದು ಮೇ 7 ರಂದು  ರೆಡ್ಡಿ ಅವರ ಅನರ್ಹತೆಯನ್ನು ಅಧಿಕೃತಗೊಳಿಸಿತು. ನಂತರ ತಕ್ಷಣವೇ ಭಾರತದ ಚುನಾವಣಾ ಆಯೋಗ ಮತ್ತು ಇತರ ಅಧಿಕಾರಿಗಳಿಗೆ ತಿಳಿಸಿದ್ದು, ಅನರ್ಹತೆ ಮೇ 6 ರಿಂದ ಜಾರಿಗೆ ಬರುತ್ತದೆ ಎಂದು ಹೇಳಿದೆ.

ರೆಡ್ಡಿ ಅವರ ಅಪರಾಧವು ಸಂವಿಧಾನದ 191(1)(e) ವಿಧಿ ಮತ್ತು 1951 ರ ಜನಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8 ರ ಅಡಿಯಲ್ಲಿ ಶಾಸಕ ಸ್ಥಾನದಿಂದ ಅವರನ್ನು ತಕ್ಷಣದ ಅನರ್ಹತೆ ಮಾಡುವಂತೆ ಆಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೈದರಾಬಾದಿನ ವಿಶೇಷ ಸಿಬಿಐ ನ್ಯಾಯಾಲಯವು ರೆಡ್ಡಿ ಮತ್ತು ಇತರ ಮೂವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ವಿಧಾನಸಭೆ ಈ ನಿರ್ಧಾರಕ್ಕೆ ಬಂದಿದೆ.

ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ನಾಲ್ವರು ದೋಷಿಗಳು ಎಂದು ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ ಮಂಗಳವಾರ (ಮೇ.6) ತೀರ್ಪು ನೀಡಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಮೂವರನ್ನು ಖುಲಾಸೆಗೊಳಿಸಿದೆ.

ಶಾಸಕ ಗಾಲಿ ಜನಾರ್ದನ ರೆಡ್ಡಿ, ಓಎಂಸಿಯ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಿ.ವಿ ಶ್ರೀನಿವಾಸ ರೆಡ್ಡಿ, ಆಂಧ್ರ ಪ್ರದೇಶ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಾಜಿ ನಿರ್ದೇಶಕ ವಿ.ಡಿ ರಾಜಗೋಪಾಲ್, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಮಾಜಿ ಉಪ ನಿರ್ದೇಶಕರಾಗಿದ್ದ ಕೆ.ಮೆಫಾಝ್ ಅಲಿ ಖಾನ್ ದೋಷಿಗಳು ಎಂದು ನ್ಯಾಯಾಲಯ ಮೇ 6ರಂದು ಘೋಷಿಸಿತ್ತು.

ಆಂಧ್ರ ಪ್ರದೇಶ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮಾಜಿ ಸಚಿವೆ ಸಬಿತಾ ಇಂದ್ರಾ ರೆಡ್ಡಿ, ಗಣಿ ಇಲಾಖೆಯ ಮಾಜಿ ಅಧಿಕಾರಿ ಕೃಪಾನಂದಂ ಅವರನ್ನು ಖುಲಾಸೆಗೊಳಿಸಲಾಗಿದೆ. ಇನ್ನೊಬ್ಬರು, ಗಣಿ ಇಲಾಖೆ ಮಾಜಿ ಪ್ರಧಾನ ಕಾರ್ಯದರ್ಶಿ ವೈ. ಶ್ರೀಲಕ್ಷ್ಮಿ ಅವರನ್ನು 2022ರಲ್ಲಿ ಪ್ರಕರಣದಿಂದ ಬಿಡುಗಡೆ ಮಾಡಲಾಗಿದೆ. ಇದು 29 ಲಕ್ಷ ಟನ್ ಅದಿರು ಕಳ್ಳತನ ಮಾಡಿದ 13 ವರ್ಷ ಹಳೆಯ ಪ್ರಕರಣವಾಗಿದೆ. ಕರ್ನಾಟಕದಿಂದ ಆಂಧ್ರ ಪ್ರದೇಶಕ್ಕೆ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಲಾಗಿತ್ತು.

2009ರಲ್ಲಿ, ಅಂದಿನ ಆಂಧ್ರಪ್ರದೇಶ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರದ ನಿರ್ದೇಶನದಂತೆ ಸಿಬಿಐ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿತ್ತು. 2011ರಲ್ಲಿ ಮೊದಲ ಚಾರ್ಜ್‌ಶೀಟ್‌ ಸಲ್ಲಿಸಿತ್ತು.

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಆರೋಪಿಗಳ ವಿರುದ್ದ ಆರೋಪಗಳನ್ನು ಹೊರಿಸಲಾಗಿತ್ತು. ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆದ ವಿಚಾರಣೆ ನಡೆದಿತ್ತು. ಮೇ ಅಂತ್ಯದೊಳಗೆ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಗಡುವು ನೀಡಿದ ಹಿನ್ನೆಲೆ, ಸಿಬಿಐ ನ್ಯಾಯಾಲಯ ಕಳೆದ ತಿಂಗಳು ವಿಚಾರಣೆ ಪೂರ್ಣಗೊಳಿಸಿತ್ತು. ಶಿಕ್ಷೆ ಘೊಷಿಸಿದ ನ್ಯಾಯಾಲಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ

ಜನಾರ್ದನ ರೆಡ್ಡಿ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಲಿ: ವಿ.ಎಸ್.ಉಗ್ರಪ್ಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...