Homeಮುಖಪುಟಇಡಿ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದ ನ್ಯಾಯಾಲಯ; ಅರವಿಂದ್ ಕೇಜ್ರಿವಾಲ್‌ಗೆ ಹಿನ್ನಡೆ

ಇಡಿ ಬಂಧನದಿಂದ ರಕ್ಷಣೆ ನೀಡಲು ನಿರಾಕರಿಸಿದ ನ್ಯಾಯಾಲಯ; ಅರವಿಂದ್ ಕೇಜ್ರಿವಾಲ್‌ಗೆ ಹಿನ್ನಡೆ

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಸಮನ್ಸ್‌ಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬಲವಂತದ ಕ್ರಮದಿಂದ ಯಾವುದೇ ಮಧ್ಯಂತರ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್ ಇಂದು ನಿರಾಕರಿಸಿದೆ.

“ನಾವು ಎರಡೂ ಕಡೆಯ ವಾದ ಆಲಿಸಿದ್ದೇವೆ; ಈ ಹಂತದಲ್ಲಿ ರಕ್ಷಣೆ ನೀಡಲು ನಾವು ಒಲವು ತೋರುತ್ತಿಲ್ಲ. ಪ್ರತಿವಾದಿಯು ಉತ್ತರವನ್ನು ಸಲ್ಲಿಸಲು ಸ್ವತಂತ್ರರು” ಎಂದು ನ್ಯಾಯಮೂರ್ತಿಗಳಾದ ಸುರೇಶ್ ಕುಮಾರ್ ಕೈಟ್ ಮತ್ತು ಮನೋಜ್ ಜೈನ್ ಅವರ ಪೀಠ ಹೇಳಿದೆ.

ಏಪ್ರಿಲ್ 22 ರಂದು ಸಮನ್ಸ್ ಅನ್ನು ಪ್ರಶ್ನಿಸಿ ಅವರ ಮುಖ್ಯ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಿದಾಗ ಹೆಚ್ಚಿನ ಪರಿಗಣನೆಗೆ ರಕ್ಷಣೆ ಕೋರಿ ಮುಖ್ಯಮಂತ್ರಿ ಮಾಡಿದ ಅರ್ಜಿಯನ್ನು ನ್ಯಾಯಾಲಯ ಪಟ್ಟಿ ಮಾಡಿದೆ.

ಅರವಿಂದ್ ಕೇಜ್ರಿವಾಲ್ ಅವರು ಇಂದು ಮುಂಜಾನೆ ಹೊಸ ಮನವಿಯನ್ನು ಸಲ್ಲಿಸಿದರು, ಅವರು ಅನೇಕ ಸಮನ್ಸ್‌ಗಳನ್ನು ಸ್ವೀಖರಿಸದ ಕಾರಣಕ್ಕೆ ಯಾವುದೇ ಬಂಧನವನ್ನು ಮಾಡಲಾಗುವುದಿಲ್ಲ ಎಂದು ಜಾರಿ ನಿರ್ದೇಶನಾಲಯದಿಂದ ಭರವಸೆ ನೀಡಬೇಕೆಂದು ಒತ್ತಾಯಿಸಿದರು.

“ನಾನು ಸಮನ್ಸ್ ಅನ್ನು ಅನುಸರಿಸಿದರೆ, ನನ್ನ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳುವುದಿಲ್ಲ ಎಂದು ಜಾರಿ ನಿರ್ದೇಶನಾಲಯವು ನ್ಯಾಯಾಲಯದ ಮುಂದೆ ಭರವಸೆ ನೀಡಬೇಕು” ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ತಿಳಿಸಿದ್ದಾರೆ.

ಇಡಿ ನೀಡಿದ ಒಂಬತ್ತನೇ ಸಮನ್ಸ್‌ನ ಹಿನ್ನೆಲೆಯಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ದೆಹಲಿ ಮುಖ್ಯಮಂತ್ರಿ ಪದೇ ಪದೇ ತನಿಖಾ ಸಂಸ್ಥೆಯ ಮುಂದೆ ಹಾಜರಾಗಲು ನಿರಾಕರಿಸಿದ್ದಾರೆ, ಸಮನ್ಸ್ ಕಾನೂನುಬಾಹಿರ ಎಂದು ಕರೆದಿದ್ದಾರೆ.

ಈ ಬೆಳವಣಿಗೆಗಳ ನಡುವೆ, ಜಾರಿ ನಿರ್ದೇಶನಾಲಯವು ರೋಸ್ ಅವೆನ್ಯೂ ಕೋರ್ಟ್‌ಗೆ ಎರಡು ದೂರುಗಳನ್ನು ಸಲ್ಲಿಸಿದ್ದು, ಕೇಜ್ರಿವಾಲ್ ಅವರಿಗೆ ನೀಡಲಾದ ಅನೇಕ ಸಮನ್ಸ್‌ಗಳನ್ನು ತಿರಸ್ಕರಿಸಿದ್ದಕ್ಕಾಗು ಅವರ ಪ್ರಾಸಿಕ್ಯೂಷನ್ ಅನ್ನು ಕೋರಿತ್ತು.

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಾಗ ಮತ್ತು ಕಾರ್ಯಗತಗೊಳಿಸುವಾಗ ಭ್ರಷ್ಟಾಚಾರ, ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ವಿವಾದದ ನಂತರ ಅಬಕಾರಿ ನೀತಿಯನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ; ಪೊನ್ಮುಡಿ ಸಂಪುಟ ಮರು ಸೇರ್ಪಡೆಗೆ ನಿರಾಕರಣೆ; ತಮಿಳುನಾಡು ರಾಜ್ಯಪಾಲರ ವಿರುದ್ಧ ಸುಪ್ರೀಂ ಕಿಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರಿಗೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು: ಸುರ್ಜೇವಾಲ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ...