Homeಮುಖಪುಟದಂತ ಸಂಗ್ರಹ ಪ್ರಕರಣ: ಮೋಹನ್‌ಲಾಲ್‌ ವಿರುದ್ಧದ ಆರೋಪ ಕೈಬಿಡಲು ಕೋರ್ಟ್ ನಕಾರ!

ದಂತ ಸಂಗ್ರಹ ಪ್ರಕರಣ: ಮೋಹನ್‌ಲಾಲ್‌ ವಿರುದ್ಧದ ಆರೋಪ ಕೈಬಿಡಲು ಕೋರ್ಟ್ ನಕಾರ!

- Advertisement -
- Advertisement -

ಎರಡು ಜೋಡಿ ದಂತಗಳನ್ನು ಅಕ್ರಮವಾಗಿ ಇರಿಸಿಕೊಂಡಿದ್ದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣದಲ್ಲಿ ನಟ ಮೋಹನ್ ಲಾಲ್ ವಿರುದ್ಧದ ಕಾನೂನು ಪ್ರಕ್ರಿಯೆಗಳನ್ನು ಹಿಂಪಡೆಯುವಂತೆ ಕೇರಳ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಕೊಚ್ಚಿಯ ವಿಚಾರಣಾ ನ್ಯಾಯಾಲಯ ವಜಾಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್ ಲಾಲ್ ವಿಚಾರಣೆ ಎದುರಿಸಬೇಕಾಗಿರುವುದು ಸ್ಪಷ್ಟವಾಗಿದೆ. ಮೋಹನ್‌ ಲಾಲ್ ಅಕ್ರಮವಾಗಿ ದಂತದ ಕಲಾಕೃತಿಗಳನ್ನು ಇರಿಸಿಕೊಂಡಿದ್ದರು ಎಂದು 2012ರಲ್ಲಿ ಪ್ರಕರಣ ದಾಖಲಾಗಿದ್ದು, ಥೇವರದಲ್ಲಿನ ಅವರ ಮನೆಯಿಂದ ಕಲಾಕೃತಿಗಳನ್ನು ವಶಕ್ಕೆ ಪಡೆಯಲಾಗಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಪ್ರಕರಣವನ್ನು ಮುಂದುವರಿಸುವುದು ವ್ಯರ್ಥ ಕಸರತ್ತಾಗಿದೆ. ನ್ಯಾಯಾಲಯದ ಸಮಯವೂ ವ್ಯರ್ಥವಾಗುತ್ತದೆ” ಎಂದು ರಾಜ್ಯ ಸರ್ಕಾರ ಪ್ರತಿಪಾದಿಸಿದೆ. ಆದರೆ ಕೋರ್ಟ್, “ಮೊದಲ ಆರೋಪಿಯಾಗಿ ಗುರುತಿಸಲಾಗಿರುವ ಮೋಹನ್‌ಲಾಲ್ ಅವರಿಗೆ ನೀಡಲಾದ ಮಾಲೀಕತ್ವ ಪ್ರಮಾಣಪತ್ರದ ಕಾನೂನುಬದ್ಧತೆಯ ಬಗ್ಗೆ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿರುವ ಸವಾಲುಗಳನ್ನು ಬಗೆಹರಿಸದೆ ಅರ್ಜಿಯನ್ನು ತರಾತುರಿಯಲ್ಲಿ ಸಲ್ಲಿಸಲಾಗಿದೆ” ಎಂದು ಅಭಿಪ್ರಾಯಪಟ್ಟಿದೆ.

“ವಿಚಾರಣೆಯನ್ನು ಹಿಂಪಡೆಯಲು ಸಲ್ಲಿಸಿರುವ ಅರ್ಜಿಯನ್ನು ಅನುಮತಿಸಲು ನಾನು ಒಲವು ತೋರುತ್ತಿಲ್ಲ” ಎಂದು ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಅಂಜು ಕ್ಲೀಟಸ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿರಿ: Film Review| ಜನ ಗಣ ಮನ: ಸಮೂಹ ಸನ್ನಿಗೊಂದು ಮದ್ದು

ಈ ಪ್ರಕರಣದಲ್ಲಿ ಕಾನೂನು ಪ್ರಕ್ರಿಯೆಯಿಂದ ಹಿಂದೆ ಸರಿಯಲು ಫೆಬ್ರವರಿ 7, 2020ರಂದು ರಾಜ್ಯ ಸರ್ಕಾರ ಒಪ್ಪಿಗೆ ವಿಸ್ತರಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಆದರೆ ನ್ಯಾಯಾಲಯ ತನ್ನ ಆದೇಶದಲ್ಲಿ, “ಈ ಪ್ರಕರಣದಲ್ಲಿ ಯಾವುದೇ ಗೆಜೆಟ್ ನೋಟಿಫಿಕೇಶನ್ ಇರುವುದಿಲ್ಲ. ದಂತಗಳಿಗೆ ಸಂಬಂಧಿಸಿದ ಮಾಲೀಕತ್ವವು ಅನೂರ್ಜಿತವಾಗಿದೆ” ಎಂದು ತಿಳಿಸಿದೆ.

ಜೂನ್ 2012ರಲ್ಲಿ ಆದಾಯ ತೆರಿಗೆ ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ಮೋಹನ್‌ ಲಾಲ್‌ ಮನೆಯಿಂದ ನಾಲ್ಕು ಆನೆ ದಂತಗಳನ್ನು ವಶಪಡಿಸಿಕೊಳ್ಳಲಾಯಿತು. ನಂತರ ಅವರ ವಿರುದ್ಧ ಪ್ರಕರಣ ದಾಖಲಿಸಲಾಯಿತು. ಯಾವುದೇ ಹೆಚ್ಚಿನ ತನಿಖೆ ನಡೆಯದಂತೆ ಪ್ರಕರಣವನ್ನು ಮುಚ್ಚಿ ಹಾಕಲು ತನ್ನ ಪ್ರಭಾವವನ್ನು ಮೋಹನ್‌ ಬಳಸಿದ್ದಾರೆಂದು ದೂರುದಾರರು ವಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...