Homeಮುಖಪುಟವಂಚನೆ ಪ್ರಕರಣ: ಬಿಜೆಪಿ ಮುಖಂಡನ ವಿರುದ್ಧದ ಪ್ರಕರಣ ಕೈಬಿಡುವಂತೆ ಆಗ್ರಹಿಸಿದ ಸಿಬಿಐ ವರದಿ ತಿರಸ್ಕರಿಸಿದ ಕೋರ್ಟ್

ವಂಚನೆ ಪ್ರಕರಣ: ಬಿಜೆಪಿ ಮುಖಂಡನ ವಿರುದ್ಧದ ಪ್ರಕರಣ ಕೈಬಿಡುವಂತೆ ಆಗ್ರಹಿಸಿದ ಸಿಬಿಐ ವರದಿ ತಿರಸ್ಕರಿಸಿದ ಕೋರ್ಟ್

- Advertisement -
- Advertisement -

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗೆ ವಂಚನೆ ಮಾಡಿ 103 ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕ ಮೋಹಿತ್ ಕಾಂಬೋಜ್ ಮತ್ತು ಇತರ ಹಲವರ ವಿರುದ್ಧದ ಪ್ರಕರಣವನ್ನು ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಕೇಂದ್ರೀಯ ತನಿಖಾ ದಳದ (ಸಿಬಿಐ) ವರದಿಯನ್ನು  ನ್ಯಾಯಾಲಯ ತಿರಸ್ಕರಿಸಿದೆ.

ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜಯವಂತ್ ಯಾದವ್, ಅ. 23ರ ಆದೇಶದಲ್ಲಿ  ಸಿಬಿಐ ಮನವಿಯನ್ನು ತಿರಸ್ಕರಿಸಿದ್ದು, ಪ್ರಾಥಮಿಕವಾಗಿ ಕ್ರಿಮಿನಲ್ ಪಿತೂರಿ, ವಂಚನೆ ಮಾಡಿರುವುದನ್ನು ಕೋರ್ಟ್‌ ಗಮನಿಸಿದೆ. ಪ್ರಕರಣದ ನಿಷ್ಪಕ್ಷಪಾತ ತನಿಖೆಯ ಬಗ್ಗೆ ಕೂಡ ಕೋರ್ಟ್‌ ಪ್ರಶ್ನಿಸಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120 (ಬಿ), 417, 420, 467, 468 ಮತ್ತು 471ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳು ನಡೆದಿದೆ ಎಂದು ನಾನು ಭಾವಿಸುತ್ತೇನೆ, ಆದರೆ ಈ ತನಿಖೆಯು ಸಾಕಾಗುವುದಿಲ್ಲ. ಇದು ಅಪೂರ್ಣ ಎಂದು ನ್ಯಾಯಾಲಯ ಹೇಳಿದೆ.

ನಕಲಿ ದಾಖಲೆಗಳನ್ನು ಸೃಷ್ಟಿಸಿ ರಾಷ್ಟ್ರೀಕೃತ ಬ್ಯಾಂಕ್‌ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡುವ ಮೂಲಕ ಸಾರ್ವಜನಿಕ ಹಣವನ್ನು ದುರುಪಯೋಗಪಡಿಸಿಕೊಂಡಿರುವುದರಿಂದ ಆರೋಪಿಗಳ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ಹೂಡುವ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ.

ಬಿಜೆಪಿ ನಾಯಕ ಮತ್ತು ಟೆನೆಟ್ ಎಕ್ಸಿಂ ಪ್ರೈವೇಟ್‌ ಲಿಮಿಟೆಡ್‌ ಸಂಸ್ಥೆಯ ಅಧ್ಯಕ್ಷ ಮೋಹಿತ್ ಕಂಬೋಜ್ ಹಾಗೂ ಇತರರು ನಕಲಿ ದಾಖಲೆಗಳನ್ನು ಸಲ್ಲಿಸಿ, ಸಾಲ ಪಡೆದು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗೆ 103 ಕೋಟಿ ವಂಚಿಸಿದ್ದರು ಎಂದು ಆರೋಪಿಸಲಾಗಿದೆ.

ಆದರೆ ಈ ಬಗ್ಗೆ ತನಿಖೆ ನಡೆಸಿದ ಸಿಬಿಐ ಆರೋಪಿಗಳಿಗೆ ಶಿಕ್ಷೆ ವಿಧಿಸಲು ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗುತ್ತಿಲ್ಲ. ಹೀಗಾಗಿ ಈ ಪ್ರಕರಣವನ್ನು ಕೈಬಿಡಲು ಅವಕಾಶ ನೀಡಬೇಕು ಎಂದು ಸಿಬಿಐ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ನ್ಯಾಯಾಲಯವು ತನ್ನ ಆದೇಶದಲ್ಲಿ ಸಾಕ್ಷಿಗಳ ಹೇಳಿಕೆಗಳನ್ನು ಉಲ್ಲೇಖಿಸಿದ್ದು, ಆರೋಪಿಗಳು ಬ್ಯಾಂಕ್‌ನಿಂದ ಸಾಲ ಪಡೆಯುವ ಉದ್ದೇಶದಿಂದ ಸುಳ್ಳು ಮಾರಾಟ ಮತ್ತು ಖರೀದಿಯ ದಾಖಲೆಗಳನ್ನು ಬ್ಯಾಂಕ್‌ಗೆ ಸಲ್ಲಿಸಿದ್ದಾರೆ ಎಂದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಹೇಳಿದೆ.

ಇದನ್ನು ಓದಿ: ತಮಿಳುನಾಡು: ವಿದ್ಯಾರ್ಥಿಗಳಿಗೆ ನಿಂದನೆ, ಹಲ್ಲೆ ಆರೋಪ: ಬಿಜೆಪಿ ನಾಯಕಿ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read