Homeಮುಖಪುಟಕೇಜ್ರಿವಾಲ್‌ನ್ನು ಸಿಎಂ ಹುದ್ದೆಯಿಂದ ಪದಚ್ಯುತಿಗೊಳಿಸಲು ನಿರಾಕರಿಸಿದ ಹೈಕೋರ್ಟ್‌

ಕೇಜ್ರಿವಾಲ್‌ನ್ನು ಸಿಎಂ ಹುದ್ದೆಯಿಂದ ಪದಚ್ಯುತಿಗೊಳಿಸಲು ನಿರಾಕರಿಸಿದ ಹೈಕೋರ್ಟ್‌

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಎಂ ಹುದ್ದೆಯಿಂದ ಪದಚ್ಯುತಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ.

ಈ ಕುರಿತ ಅರ್ಜಿಯನ್ನು ತಳ್ಳಿಹಾಕಿದ ದೆಹಲಿ ನ್ಯಾಯಾಲಯ, ಈ ವಿಚಾರದಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ಹೇಳಿದೆ.

ರೈತ ಮತ್ತು ಸಾಮಾಜಿಕ ಕಾರ್ಯಕರ್ತ ಎಂದು ಹೇಳಿಕೊಂಡಿದ್ದ ದೆಹಲಿ ನಿವಾಸಿ ಸುರ್ಜಿತ್ ಸಿಂಗ್ ಯಾದವ್ ಈ ಬಗ್ಗೆ ಕೋರ್ಟ್‌ ಮೊರೆ ಹೋಗಿದ್ದರು. ಹಣಕಾಸು ಅವ್ಯವಹಾರದ ಆರೋಪ ಹೊತ್ತಿರುವ ಮುಖ್ಯಮಂತ್ರಿಯೊಬ್ಬರು ಸಾರ್ವಜನಿಕ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ನೀಡಬಾರದು ಎಂದು ಯಾದವ್ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.

ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್, ಇದರಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿದೆಯೇ? ನಾವು ಇಂದಿನ ಪತ್ರಿಕೆಯನ್ನು ಓದಿದ್ದೇವೆ. ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಈ ಸಮಸ್ಯೆಯನ್ನು ಪರಿಶೀಲಿಸುತ್ತಿದ್ದಾರೆ. ಅದು ರಾಷ್ಟ್ರಪತಿಗಳ ಬಳಿಗೆ ಹೋಗಲಿದೆ. ಲೆಫ್ಟಿನೆಂಟ್ ಗವರ್ನರ್ ಈ ಬಗ್ಗೆ ಪರಿಗಣಿಸಬೇಕು, ರಾಷ್ಟ್ರಪತಿಗಳು ಪರಿಗಣಿಸಬೇಕು. ನಾವು ಏಕೆ ಪರಿಗಣಿಸಬೇಕು, ಅವರು ಪರಿಗಣಿಸುತ್ತಾರೆ. ನಾವು ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವುದಿಲ್ಲ. ಯಾವುದೇ ಹೈಕೋರ್ಟ್ ಅದನ್ನು ಮಾಡುವುದಿಲ್ಲ. ಅವರು ತೀರ್ಮಾನಕ್ಕೆ ಬರುತ್ತಾರೆ. ಅವರು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಇದರಲ್ಲಿ ನ್ಯಾಯಾಂಗ ಹಸ್ತಕ್ಷೇಪಕ್ಕೆ ಯಾವುದೇ ಅವಕಾಶವಿಲ್ಲ ಎಂದು ನ್ಯಾಯಮೂರ್ತಿ ಮನಮೋಹನ್ ಅವರು ಹೇಳಿದ್ದಾರೆ.

ಕೇಜ್ರಿವಾಲ್ ಅವರನ್ನು ಈ ಹುದ್ದೆಯಲ್ಲಿ ಮುಂದುವರಿಸುವುದರಿಂದ ಕಾನೂನು ಪ್ರಕ್ರಿಯೆಗೆ ಅಡ್ಡಿಯುಂಟಾಗುವುದು ಮತ್ತು ನ್ಯಾಯಾಂಗದ ಹಾದಿಗೆ ಅಡ್ಡಿಯಾಗುವುದಲ್ಲದೆ, ರಾಜ್ಯದಲ್ಲಿ ಸಾಂವಿಧಾನಿಕ ಯಂತ್ರಗಳ ಸ್ಥಗಿತಕ್ಕೆ ಕಾರಣವಾಗಬಹುದು ಎಂದು ಅರ್ಜಿದಾರರು ಕೋರ್ಟ್‌ ಗಮನಕ್ಕೆ ತಂದಿದ್ದರು.

ಕಾರಾಗೃಹದಲ್ಲಿರುವ ಮುಖ್ಯಮಂತ್ರಿಗಳು ಸರಕಾರಕ್ಕೆ ಸಂಬಂಧಿಸಿದ ಯಾವುದೇ ವ್ಯವಹಾರವನ್ನು ನಡೆಸಲು ಅಸಮರ್ಥರಾಗಿರುತ್ತಾರೆ ಮತ್ತು ಒಂದು ವೇಳೆ ಮಾಡಿದರೂ, ಸಂವಿಧಾನದ ಮೂರನೇ ಶೆಡ್ಯೂಲ್ ಅಡಿಯಲ್ಲಿ ಮುಖ್ಯಮಂತ್ರಿಗೆ ಬೋಧಿಸಲಾದ ಗೌಪ್ಯತೆಯ ಪ್ರಮಾಣ ವಚನವನ್ನು ನೇರವಾಗಿ ಉಲ್ಲಂಘಿಸುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಮತ್ತು ನ್ಯಾಯಮೂರ್ತಿ ಮನ್ಮೀತ್ ಪ್ರೀತಮ್ ಸಿಂಗ್ ಅರೋರಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಅರ್ಜಿಯನ್ನು ವಜಾಗೊಳಿಸಿದೆ.

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಬಂಧಿಸಲಾಗಿದೆ ಮತ್ತು ನಂತರ ದೆಹಲಿ ನ್ಯಾಯಾಲಯವು ಮಾರ್ಚ್ 28ರವರೆಗೆ ಅವರನ್ನು ಜಾರಿ ನಿರ್ದೇಶನಾಲಯದ ಕಸ್ಟಡಿಗೆ ಒಪ್ಪಿಸಿದೆ.

ಇದನ್ನು ಓದಿ: ಎಎಪಿ ಪ್ರತಿಭಟನೆ ವೇಳೆ ಪತ್ರಕರ್ತರ ಮೇಲೆ ಪೊಲೀಸರಿಂದ ಹಲ್ಲೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...