Homeಕರ್ನಾಟಕಜಾತಿ ನಿಂದನೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

ಜಾತಿ ನಿಂದನೆ ಪ್ರಕರಣ : ಬಿಜೆಪಿ ಶಾಸಕ ಮುನಿರತ್ನ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ನ್ಯಾಯಾಲಯ

- Advertisement -
- Advertisement -

ದಲಿತ ಕುಟುಂಬಗಳ ಶೆಡ್‌ಗಳನ್ನು ನಾಶಪಡಿಸಿ, ಅವರ ಮೇಲೆ ಹಲ್ಲೆ ಮಾಡಿ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ (ಜ.30) ಕಾಯ್ದಿರಿಸಿದೆ.

ಮಾದಿಗ ಸಮುದಾಯದ 20 ವರ್ಷದ ಮಹಿಳೆ ಮೇಲೆ ದೌರ್ಜನ್ಯ ನಡೆಸಿ, ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಶಾಸಕ ಮುನಿರತ್ನ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಅವರು ನಡೆಸಿದ್ದಾರೆ.

ವಿಚಾರಣೆ ವೇಳೆ ಸಂತ್ರಸ್ತೆ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ಹೆಚ್‌ ಹನುಮಂತರಾಯ ಅವರು “ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ಚರಿತ್ರೆಯ ತುಂಬಾ ಆಘಾತಕಾರಿ ಅಧ್ಯಾಯಗಳಿವೆ. ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿ ಪ್ರದೇಶವನ್ನು ಮುನಿರತ್ನ ಮತ್ತು ಅವರ ಬೆಂಬಲಿಗರು ಬಲವಂತದಿಂದ ತೆರವುಗೊಳಿಸಿ ಪುನರ್ವಸತಿ ಕೇಳಿದವರ ವಿರುದ್ಧ ಅಮಾನವೀಯವಾಗಿ ವರ್ತಿಸಿದ್ದಾರೆ. ಮುನಿರತ್ನ ಎಂಥವರು ಎಂಬುವುದು ಎಲ್ಲರಿಗೂ ಗೊತ್ತಿದೆ. ಅವರು ತಾವೊಬ್ಬ ಸಾಚಾ ಎಂದು ಪ್ರತಿಬಿಂಬಿಸಿಕೊಂಡರೆ ಅದನ್ನೆಲ್ಲಾ ನಂಬಲಾಗದು” ಎಂದಿದ್ದಾರೆ.

“ಮುನಿರತ್ನ ಮತ್ತು ಅವರ ಬೆಂಬಲಿಗರು ಬಡವರನ್ನು, ಹೆಣ್ಣು ಮಕ್ಕಳನ್ನು ಗುಡಿಸಲುಗಳಿಂದ ರಾತ್ರೋರಾತ್ರಿ ಹೊರ ಹಾಕಿದ್ದಾರೆ. ಇಂತಹ ಕುಕೃತ್ಯಗಳನ್ನು ಮುನಿರತ್ನ ಮಾಡಿಕೊಂಡೇ ಬಂದವರು. ತಮ್ಮ ಮೇಲೆ ಆಪಾದನೆಗಳು ಬಂದಾಗಲೆಲ್ಲಾ ಅವುಗಳಿಂದ ಹೊರ ಬರುವುದು ಹೇಗೆ ಎಂಬುವುದು ಅವರಿಗೆ ಚೆನ್ನಾಗಿ ಗೊತ್ತಿದೆ. ಪ್ರತಿ ಘಟನೆಯಲ್ಲೂ ಹಿಂದಿನ ಅನುಭವಗಳ ಆಧಾರದಲ್ಲಿ ತುಂಬಾ ಹುಷಾರಾಗಿ ವರ್ತಿಸುತ್ತಾರೆ” ಎಂದು ವಕೀಲರು ದೂರಿದ್ದಾರೆ.

“ಈ ಪ್ರಕರಣದಲ್ಲಿ ಪ್ರಾಥಮಿಕ ವಿಚಾರಣೆಯ ಅವಶ್ಯಕತೆಯೇ ಇಲ್ಲ. ಒಕ್ಕಲೆಬ್ಬಿಸಿದವರಿಗೆ ಪೂರ್ವಭಾವಿಯಾಗಿ ನೋಟಿಸ್‌ ನೀಡಿಲ್ಲ. ಸೂಕ್ತ ಪುನರ್ವಸತಿ ಕಲ್ಪಿಸಿಲ್ಲ. ವಾಸ್ತವದಲ್ಲಿ ಇದು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಡೆಸಿರುವ ಕಾರ್ಯಾಚರಣೆಯೇ ಅಲ್ಲ. ಮುನಿರತ್ನ ಸುತ್ತಮುತ್ತ ಇರುವ ಮಾಜಿ ಕಾರ್ಪೊರೇಟರ್‌ಗಳು ಮತ್ತು ಟಿಕೆಟ್‌ ಆಕಾಂಕ್ಷಿಗಳ ತಂಡದಿಂದ ಮುನಿರತ್ನ ನಡೆಸಿರುವ ದುಷ್ಕತ್ಯವಿದು. ಆದಾಗ್ಯೂ, ಸತ್ಯ ಹೊರಗೆಳೆಯುತ್ತೇನೆ ಎಂದು ಈ ಹೆಣ್ಣು ಮಗಳು ಧೈರ್ಯ ಮಾಡಿ ದೂರು ಕೊಟ್ಟಿದ್ದಾರೆ. ಹೀಗಾಗಿ, ಮುನಿರತ್ನಗೆ ನಿರೀಕ್ಷಣಾ ಜಾಮೀನು ನೀಡಬಾರದು” ಎಂದು ವಕೀಲರು ಮನವಿ ಮಾಡಿದ್ದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಮುನಿರತ್ನ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಅಶೋಕ ಹಾರನಹಳ್ಳಿ “ಇದರಲ್ಲಿ ಮುನಿರತ್ನ ಪಾತ್ರವೇ ಇಲ್ಲ. ಇದೆಲ್ಲಾ ಬಿಬಿಎಂಪಿ ಕಾನೂನುಬದ್ಧವಾಗಿ ನಡೆಸಿರುವ ಕಾರ್ಯಾಚರಣೆ. ಇದಕ್ಕೆ ಪತ್ರಿಕಾ ವರದಿಗಳೇ ಸಾಕ್ಷಿ. ಸದ್ಯ ಪಾಲಿಕೆಯಲ್ಲಿ ಕಾರ್ಪೋರೇಟರ್‌ಗಳು ಇಲ್ಲ. ಅಧಿಕಾರಿಗಳೇ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಮುನಿರತ್ನ ವಿರುದ್ಧ ರೂಪಿಸಿರುವ ರಾಜಕೀಯ ಪ್ರೇರಿತ ದೂರಿದು. ಆದ್ದರಿಂದ, ನಿರೀಕ್ಷಣಾ ಜಾಮೀನು ನೀಡಬೇಕು” ಎಂದು ಕೋರಿದ್ದಾರೆ.

ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶರು ಆದೇಶ ಕಾಯ್ದಿರಿಸಿದ್ದಾರೆ. ಮುನಿರತ್ನ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂಬ ಆದೇಶವನ್ನು ವಿಸ್ತರಿಸಿದ್ದಾರೆ. ಸಿಐಡಿ ಪರ ಪ್ರಾಸಿಕ್ಯೂಟರ್ ಝೈದಾ ಬಾನು ಖಾಜಿ ಆಕ್ಷೇಪಣೆ ಸಲ್ಲಿಸಿದ್ದಾರೆ ಎಂದು ಬಾರ್ & ಬೆಂಚ್ ತಿಳಿಸಿದೆ.

ಪ್ರಕರಣದ ಹಿನ್ನೆಲೆ : ಬೆಂಗಳೂರಿನ ಪೀಣ್ಯ ಪ್ರಥಮ ದರ್ಜೆ ಕಾಲೇಜು ಪಕ್ಕದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್‌ ಪ್ರದೇಶದಲ್ಲಿ ಶೆಡ್‌ಗಳನ್ನು ನಿರ್ಮಿಸಿಕೊಂಡಿದ್ದ 60ರಿಂದ 70ರಷ್ಟು ಉತ್ತರ ಕರ್ನಾಟಕದ ದಲಿತ ಕುಟುಂಬಗಳನ್ನು ಜನವರಿ 20ರಂದು ಶಾಸಕ ಮುನಿರತ್ನ ಮತ್ತು ಬೆಂಬಲಿಗರಾದ ವಸಂತಕುಮಾರ್, ಚನ್ನಕೇಶವ, ಗೊರಗುಂಟೆಪಾಳ್ಯದ ನವೀನ, ಶ್ರೀರಾಮ, ಪೀಣ್ಯದ ಕಿಟ್ಟಿ, ಗಂಗಾ ಮತ್ತು ಇತರರು ಕಾನೂನು ಬಾಹಿರವಾಗಿ ಜೆಸಿಬಿ ತಂದು ತೆರವುಗೊಳಿಸಿದ್ದಾರೆ. ಅಲ್ಲದೆ, ನನಗೆ ಜಾತಿನಿಂದನೆ ಮಾಡಿ ಅಲ್ಲಿದ್ದ ಕೆಲ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರ ಎದೆಗೆ ಮುನಿರತ್ನ ಒದ್ದಿದ್ದಾರೆ ಎಂದು ಸಂತ್ರಸ್ತೆಯೊಬ್ಬರು ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ಜನವರಿ 20ರಂದು ದೂರು ನೀಡಿದ್ದರು.

ಈ ದೂರು ಆಧರಿಸಿ ಪೊಲೀಸರು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ-2023ರ ಸೆಕ್ಷನ್‌ಗಳಾದ 324(2),74,351(2), 351(3) ಮತ್ತು 190 ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ–2014ರ ಸೆಕ್ಷನ್‌ 3(1), ಆರ್‌(ಎಸ್‌) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.

ಮುನಿರತ್ನ ವಿರುದ್ದ ದೋಷಾರೋಪ ಪಟ್ಟಿ ಸಲ್ಲಿಕೆ

ಮುನಿರತ್ನ ವಿರುದ್ದದ ಅತ್ಯಾಚಾರ, ಹನಿಟ್ರ್ಯಾಪ್ ಮತ್ತು ಹೆಚ್‌ಐವಿ ಸೋಂಕು ಹರಡಲು ಯತ್ನಿಸಿದ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ) ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದೆ.

ವರದಿಗಳ ಪ್ರಕಾರ, ಡಿಸೆಂಬರ್ 17, 2024ರಂದು 2,481 ಪುಟಗಳ ದೋಷಾರೋಪ ಪಟ್ಟಿಯನ್ನು ಜನಪ್ರತಿನಿಧಿಗಳ ವಿರುದ್ದದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಎಸ್‌ಐಟಿ ಸಲ್ಲಿಕೆ ಮಾಡಿದೆ.

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಎಂಟು ಮಂದಿ ಆರೋಪಿಗಳಲ್ಲಿ ಶಾಸಕ ಮುನಿರತ್ನ, ಪೊಲೀಸ್ ಇನ್ಸ್‌ಪೆಕ್ಟರ್ ಐಯ್ಯನ ರೆಡ್ಡಿ ಮತ್ತು ಮುನಿರತ್ನ ಅವರ ಇಬ್ಬರು ಸಹಚರರಾದ ಶ್ರೀನಿವಾಸ್ ಪಿ. ಮತ್ತು ಸುಧಾಕರ್ ಆರ್ ವಿರುದ್ಧ ಎಸ್‌ಐಟಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದೆ.

ಆರೋಪಿಗಳ ವಿರುದ್ದ ಒಂದೇ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಕ್ಕಾಗಿ ಸೆಕ್ಷನ್ 376 (2)(n), ಜೀವಕ್ಕೆ ಅಪಾಯಕಾರಿಯಾದ ಕಾಯಿಲೆಯ ಸೋಂಕನ್ನು ಹರಡಿದ್ದಕ್ಕಾಗಿ ಸೆಕ್ಷನ್‌ 270 ಮತ್ತು ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ ಖಾಸಗಿ ಭಾಗದ ಚಿತ್ರವನ್ನು ಸೆರೆಹಿಡಿದಿದ್ದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಸಿ, ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಅಡಿ ಆರೋಪ ಹೊರಿಸಲಾಗಿದೆ ಎಂದು ವರದಿಯಾಗಿದೆ.

ಹೆಚ್‌ಡಿಕೆ ವಿರುದ್ಧದ ಭೂ ಒತ್ತುವರಿ ಆರೋಪ | ಫೆ.21ರ ಒಳಗೆ ವರದಿ ಸಲ್ಲಿಕೆ : ಸಚಿವ ಕೃಷ್ಣ ಬೈರೇಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...

ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್

ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ...

ಕದನ ವಿರಾಮ | ಟ್ರಂಪ್ ನಿರ್ಧಾರಕ್ಕೆ ಇಸ್ರೇಲ್ ಬೆಂಬಲ; ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದ ನೆತನ್ಯಾಹು!

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿರುವ ಎರಡು ವಾರಗಳ ಕದನ ವಿರಾಮಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಕದನ ವಿರಾಮವು ಕೇವಲ ಇರಾನ್‌ಗೆ ಮಾತ್ರ ಸೀಮಿತವಾಗಿದ್ದು, ಲೆಬನಾನ್‌ಗೆ ಅನ್ವಯಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇರಾನ್ ತಕ್ಷಣವೇ ಹಾರ್ಮುಝ್...

ಹಾರ್ಮುಝ್ ಜಲಸಂಧಿಯ ಮೂಲಕ ಎರಡು ವಾರಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ : ಇರಾನ್ ಭರವಸೆ

ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮದ ಹಿನ್ನೆಲೆ, ಹಾರ್ಮುಝ್ ಜಲಸಂಧಿ  ಮೂಲಕ ಹಡಗುಗಳ ಸುರಕ್ಷಿತ ಸಂಚಾರಕ್ಕೆ ಅವಕಾಶ ನೀಡುವುದಾಗಿ ಇರಾನ್ ಭರವಸೆ ನೀಡಿದೆ. ವಿಶ್ವದ ಒಟ್ಟು ಪೆಟ್ರೋಲಿಯಂ ರಫ್ತಿನ...

ಇರಾನ್ ಮೇಲಿನ ದಾಳಿ ಸ್ಥಗಿತ : ಎರಡು ವಾರಗಳ ಕದನ ವಿರಾಮ ಘೋಷಿಸಿದ ಟ್ರಂಪ್

ಇರಾನ್ ಮೇಲೆ ನಡೆಸುತ್ತಿರುವ ಬಾಂಬ್ ದಾಳಿ ಹಾಗೂ ಮಿಲಿಟರಿ ಕಾರ್ಯಾಚರಣೆಯನ್ನು ಎರಡು ವಾರಗಳ ಕಾಲ ಸ್ಥಗಿತಗೊಳಿಸುವ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಭಾರತೀಯ ಕಾಲಮಾನ ಏ.8) ಹೇಳಿದ್ದಾರೆ. ಪಾಕಿಸ್ತಾನ...

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...