Homeಕರ್ನಾಟಕಪ್ರತಾಪ್‌ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್‌ಗೆ ನಿರ್ಬಂಧ

ಪ್ರತಾಪ್‌ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸದಂತೆ ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್‌ಗೆ ನಿರ್ಬಂಧ

- Advertisement -
- Advertisement -

ಸಂಸದ ಪ್ರತಾಪ್‌ ಸಿಂಹ ವಿರುದ್ಧ ಸುದ್ದಿಗೋಷ್ಠಿ ನಡೆಸಬಾರದು ಮತ್ತು ಅವರ ವಿರುದ್ಧ ಯಾವುದೇ ಮಾನಹಾನಿಕಾರಕ ಮಾಹಿತಿ ಹಂಚಿಕೊಳ್ಳಬಾರದು ಎಂದು ಕಾಂಗ್ರೆಸ್‌ ವಕ್ತಾರ ಎಂ. ಲಕ್ಷ್ಮಣ್‌ ಅವರಿಗೆ ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯ ತಾತ್ಕಾಲಿಕ ಪ್ರತಿಬಂಧಕಾದೇಶ ನೀಡಿದೆ ಎಂದು ಬಾರ್‌ ಅಂಡ್‌ ಬೆಂಚ್ ವರದಿ ಮಾಡಿದೆ.

ಪ್ರತಾಪ್‌ ಸಿಂಹ ದಾಖಲಿಸಿದ್ದ ಮೊಕದ್ದಮೆಯ ವಿಚಾರಣೆ ನಡೆಸಿದ 9ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎ ಹರೀಶ ಅವರು ಈ ಆದೇಶ ನೀಡಿದ್ದಾರೆ.

ಸಂಸದ ಪ್ರತಾಪ್‌ ಸಿಂಹ ವಿರುದ್ಧ ಯಾವುದೇ ಸುದ್ದಿಗೋಷ್ಠಿ ನಡೆಸಬಾರದು. ಆಡಿಯೋ, ಪತ್ರಿಕೆ, ಟಿವಿ, ಇಂಟರ್‌ನೆಟ್‌, ವೆಬ್‌ಸೈಟ್‌, ರೇಡಿಯೊ ಚಾನೆಲ್‌, ಸಾಮಾಜಿಕ ಮಾಧ್ಯಮ ಇತ್ಯಾದಿಗಳಲ್ಲಿ ಸುಳ್ಳು, ದುರುದ್ದೇಶಪೂರಿತ, ಮಾನಹಾನಿಯಾಗುವ ಮಾಹಿತಿಗಳನ್ನು ಮುಂದಿನ ವಿಚಾರಣೆಯವರೆಗೆ ಹಂಚಿಕೊಳ್ಳಬಾರದು ಎಂದು ನ್ಯಾಯಾಲಯ ಲಕ್ಷ್ಮಣ್‌ ಅವರಿಗೆ ಸೂಚಿಸಿದೆ. ಅಲ್ಲದೆ, ಫೆ.13ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಿದೆ. ಪ್ರತಾಪ್‌ ಸಿಂಹ ಪರವಾಗಿ ವಕೀಲ ಎಂ ಸುದರ್ಶನ್‌ ಸುರೇಶ್‌ ಅವರು ವಾದ ಮಂಡಿಸಿದ್ದಾರೆ.

ಕಾಂಗ್ರೆಸ್‌ ವಕ್ತಾರ ಎಂ ಲಕ್ಷ್ಮಣ್‌ ಅವರು ಪದೇ ಪದೇ ಸುದ್ದಿಗೋಷ್ಠಿ ನಡೆಸಿ ಪ್ರತಾಪ್ ಸಿಂಹ ವಿರುದ್ದ ವಾಗ್ದಾಳಿ ನಡೆಸುತ್ತಿದ್ದರು. ಇದರ ವಿರುದ್ದ ಪ್ರತಾಪ್‌ ಸಿಂಹ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದರು ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಮಲ ಹೊರುವ ಪದ್ದತಿ: 47 ಪ್ರಕರಣಗಳು ದಾಖಲು, ಒಂದರಲ್ಲಿ ಮಾತ್ರ ಶಿಕ್ಷೆ; ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ: ರೇವಣ್ಣ ನಿವಾಸದಲ್ಲಿ ಎಸ್‌ಐಟಿ ತಂಡದಿಂದ ಸ್ಥಳ ಮಹಜರು

0
ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಹಿಳೆಯೊಬ್ಬರು ದಾಖಲಿಸಿರುವ ಲೈಂಗಿಕ ದೌರ್ಜನ್ಯ ದೂರಿಗೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಎಸ್‌ಐಟಿ ತಂಡ, ಇಂದು (ಮೇ 4) ಹಾಸನದ ಹೆಚ್‌.ಡಿ ರೇವಣ್ಣ ಅವರ ನಿವಾಸದಲ್ಲಿ ಮಹಜರು ನಡೆಸಿದೆ. ಡಿವೈಎಸ್‌ಪಿ...