Homeಮುಖಪುಟ'ಆಪರೇಶನ್‌ ಸಿಂಧೂರ' ಕುರಿತು ಪೋಸ್ಟ್:‌ ಅಶೋಕ ವಿವಿ ಪ್ರಾಧ್ಯಾಪಕಗೆ 14 ದಿನಗಳ ನ್ಯಾಯಾಂಗ ಬಂಧನ

‘ಆಪರೇಶನ್‌ ಸಿಂಧೂರ’ ಕುರಿತು ಪೋಸ್ಟ್:‌ ಅಶೋಕ ವಿವಿ ಪ್ರಾಧ್ಯಾಪಕಗೆ 14 ದಿನಗಳ ನ್ಯಾಯಾಂಗ ಬಂಧನ

- Advertisement -
- Advertisement -

‘ಆಪರೇಷನ್ ಸಿಂಧೂರ’ ಕುರಿತ ಫೇಸ್‌ಬುಕ್ ಪೋಸ್ಟ್‌ಗೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮುದಾಬಾದ್ ಅವರನ್ನು ಸೋನೆಪತ್ ನ್ಯಾಯಾಲಯ ಮಂಗಳವಾರ (ಮೇ.20) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಅಲಿ ಖಾನ್ ಅವರನ್ನು ಭಾನುವಾರ ದೆಹಲಿಯಲ್ಲಿ ಬಂಧಿಸಿ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು.

ಇಂದು ಅವರನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆಝಾದ್ ಸಿಂಗ್ ಅವರ ಮುಂದೆ ಹಾಜರುಪಡಿಸಲಾಗಿತ್ತು. ಪೊಲೀಸರು ಇನ್ನೂ ಏಳು ದಿನಗಳ ಕಾಲ ಅಲಿ ಖಾನ್ ಅವರನ್ನು ಕಸ್ಟಡಿಗೆ ಕೇಳಿದ್ದರು. ಆದರೆ, ನ್ಯಾಯಾಧೀಶರು ಪೊಲೀಸರ ಮನವಿಯನ್ನು ತಿರಸ್ಕರಿಸಿ, ಖಾನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

ಅಲಿ ಖಾನ್ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ಈ ವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಅಲಿ ಖಾನ್ ಅವರ ಬಂಧನವು ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಪೊಲೀಸರ ಕ್ರಮವನ್ನು ‘ವಾಕ್ ಸ್ವಾತಂತ್ರ್ಯದ ಮೇಲಿನ ದಾಳಿ’ ಎಂದು ಹಲವರು ಬಣ್ಣಿಸಿದ್ದಾರೆ.

ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ನಡೆಸಿದ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ’ ಎಂದು ಹೆಸರಿಡಲಾಗಿತ್ತು.

ಫೇಸ್‌ಬುಕ್ ಪೋಸ್ಟ್‌ನಲ್ಲಿ ಅಲಿ ಖಾನ್ ಅವರು “ಆಪರೇಷನ್ ಸಿಂಧೂರ ಮೂಲಕ ಭಾರತವು ಪಾಕಿಸ್ತಾನಕ್ಕೆ ‘ನೀವು ನಿಮ್ಮ ಭಯೋತ್ಪಾದನೆ ಸಮಸ್ಯೆಯನ್ನು ನಿಭಾಯಿಸದಿದ್ದರೆ ನಾವು ಮಾಡುತ್ತೇವೆ!” ಎಂಬ ಸಂದೇಶವನ್ನು ಕಳುಹಿಸಿದೆ” ಎಂದು ಬರೆದುಕೊಂಡಿದ್ದರು.

ಯುದ್ಧವನ್ನು ಕುರುಡಾಗಿ ಪ್ರತಿಪಾದಿಸುವವರನ್ನು ಅವರು ಟೀಕಿಸಿದ್ದರು

ಆಪರೇಷನ್ ಸಿಂಧೂರ ಕುರಿತ ಮಾಧ್ಯಮಗೋಷ್ಠಿಯ ನೇತೃತ್ವ ವಹಿಸಿದ್ದ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಹೊಗಳುವ ಬಲಪಂಥೀಯರು ಗುಂಪು ಹಲ್ಲೆ ಮತ್ತು ಆಸ್ತಿಗಳ ಅನಿಯಂತ್ರಿತ ಧ್ವಂಸಕ್ಕೆ ಬಲಿಯಾದವರ ಪರವಾಗಿ ಮಾತನಾಡುವಂತೆ ಅವರು ಕೇಳಿಕೊಂಡಿದ್ದರು.

ಅಲಿ ಖಾನ್ ಮಹ್ಮುದಾಬಾದ್ ಅವರ ಫೇಸ್‌ಬುಕ್ ಪೋಸ್ಟ್‌  PC: barandbench.com

ಫೇಸ್‌ಬುಕ್ ಪೋಸ್ಟ್‌ ಸಂಬಂಧ ಅಲಿ ಖಾನ್ ಅವರಿಗೆ ಹರಿಯಾಣ ರಾಜ್ಯ ಮಹಿಳಾ ಆಯೋಗವು ಸಮನ್ಸ್ ಜಾರಿ ಮಾಡಿತ್ತು.

ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ಅವರು, ಅಲಿ ಖಾನ್ ಹೇಳಿಕೆಗಳು ಕರ್ನಲ್ ಸೋಫಿಯಾ ಖುರೇಷಿ ಮತ್ತು ವಿಂಗ್ ಕಮಾಂಡರ್ ಸಿಂಗ್ ಸೇರಿದಂತೆ ಸಮವಸ್ತ್ರದಲ್ಲಿರುವ ಮಹಿಳೆಯರನ್ನು ಅವಹೇಳನ ಮಾಡಿದಂತೆ ಮತ್ತು ಭಾರತೀಯ ಸಶಸ್ತ್ರ ಪಡೆಗಳಲ್ಲಿ ವೃತ್ತಿಪರ ಅಧಿಕಾರಿಗಳಾಗಿರುವ ಅವರ ಪಾತ್ರವನ್ನು ದುರ್ಬಲಗೊಳಿಸಿದಂತೆ ಎಂದು ಆರೋಪಿಸಿದ್ದರು.

ತನ್ನ ಪೋಸ್ಟ್‌ ವಿವಾದಕ್ಕೀಡಾದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದ ಅಲಿ ಖಾನ್ ಅವರು, ‘ನನ್ನ ಪೋಸ್ಟ್‌ನಲ್ಲಿ ಸ್ವಲ್ಪವೂ ಸ್ತ್ರೀದ್ವೇಷವಿಲ್ಲ’ ಎಂದು ಸ್ಪಷ್ಟನೆ ಕೊಟ್ಟಿದ್ದರು.

ಆದಾಗ್ಯೂ, ಭಾಟಿಯಾ ಅವರ ಹೇಳಿಕೆಯು ಅಲಿ ಖಾನ್ ವಿರುದ್ಧ ಎಫ್‌ಐಆರ್ ದಾಖಲಾಗಲು ಕಾರಣವಾಯಿತು. ನಂತರ ಅವರ ಬಂಧನವಾಯಿತು.

ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಪ್ರಧಾನ ಕಾರ್ಯದರ್ಶಿ ಮತ್ತು ಜಥೇರಿ ಗ್ರಾಮದ ಸರಪಂಚ್ ಯೋಗೇಶ್ ಜಥೇರಿ ನೀಡಿದ ದೂರಿನ ಮೇರೆಗೆ ಅಲಿ ಖಾಬ್ ವಿರುದ್ಧ ಎರಡನೇ ಎಫ್‌ಐಆರ್ ದಾಖಲಾಗಿದೆ. ಎರಡನೇ ಪ್ರಕರಣದಲ್ಲಿ ಅಲಿಖಾನ್ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಸ್ಥಳವನ್ನು ‘ಶಹೀದ್ ಹಿಂದೂ ಪ್ರವಾಸಿ ತಾಣ’ವೆಂದು ಘೋಷಿಸಲು ಕೋರಿ ಪಿಐಎಲ್: ತಿರಸ್ಕರಿಸಿದ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...