Homeಕರ್ನಾಟಕಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

ಆಧಾರ ರಹಿತ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟಕ್ಕೆ ಕೋರ್ಟ್ ತಡೆ

- Advertisement -
- Advertisement -

ಆಧಾರ ರಹಿತವಾಗಿ, ಧರ್ಮಗಳ ನಡುವೆ ಕಲಹ ಉಂಟು ಮಾಡುವಂತೆ ರಚನೆಯಾಗಿರುವ ‘ಟಿಪ್ಪು ನಿಜಕನಸುಗಳು’ ಕೃತಿ ಮಾರಾಟ ಮಾಡದಂತೆ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿದೆ.

ಟಿಪ್ಪುವಿನ ಚಿತ್ರವನ್ನು ವಿಕಾರಗೊಳಿಸಿದ ಮುಖಪುಟದೊಂದಿಗೆ ಅಯೋಧ್ಯಾ ಪ್ರಕಾಶನ ಪ್ರಕಟಿಸಿರುವ, ರಾಷ್ಟ್ರೋತ್ಥಾನ ಪರಿಷತ್ ಮುದ್ರಿಸಿರುವ, ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರ ‘ಟಿಪ್ಪು ನಿಜಕನಸುಗಳು’ ಕೃತಿಯ ಮಾರಾಟಕ್ಕೆ ತಡೆ ನೀಡಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ರಫಿವುಲ್ಲಾ ಎಂಬುವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರು ನಗರದ 14ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು, ಮುಂದಿನ ವಿಚಾರಣೆಯವರೆಗೂ ಪುಸ್ತಕವನ್ನು ಅಂಗಡಿಗಳಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿಯೂ ಮಾರಾಟ ಮಾಡದಂತೆ ಸೂಚನೆ ನೀಡಲಾಗಿದೆ.

“ಪುಸ್ತಕದಲ್ಲಿ ಸಂಪೂರ್ಣ ತಪ್ಪು ಮಾಹಿತಿ ನೀಡಲಾಗಿದೆ. ಲೇಖಕರು ದಾಖಲಿಸಿರುವ ಅಂಶಗಳಿಗೆ ಯಾವುದೇ ಪುರಾವೆಗಳಿಲ್ಲ. ತಾನು ಬರೆದಿರುವ ಅಂಶಗಳನ್ನು ಎಲ್ಲಿಂದ ಪಡೆದುಕೊಳ್ಳಲಾಗಿದೆ ಎಂಬುದಕ್ಕೆ ದಾಖಲೆಗಳನ್ನು ಒದಗಿಸಿಲ್ಲ. ಅಝಾನ್ ಅನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದ್ದು, ತುರುಕರು ಎಂಬ ಪದವನ್ನು ಬಳಕೆ ಮಾಡಿದ್ದಾರೆ. ಈ ಪುಸ್ತಕ ಜನರಿಗೆ ತಲುಪಿದಲ್ಲಿ ಸಮಾಜದಲ್ಲಿ ಅಶಾಂತಿ ಉಂಟಾಗಲು ಕಾರಣವಾಗಲಿದೆ. ಈ ನಿಟ್ಟಿನಲ್ಲಿ ತಡೆಯಾಜ್ಞೆ ನೀಡಬೇಕು” ಎಂದು ಅರ್ಜಿದಾರ ಪರ ವಕೀಲರು ಕೋರಿದ್ದರು.

ಪುಸ್ತಕ ಮಾರಾಟಕ್ಕೆ ನಿರ್ಬಂಧ ವಿಧಿಸಿದ ನ್ಯಾಯಾಲಯವು ಪ್ರತಿವಾದಿಗಳಾದ ಲೇಖಕರು, ಪ್ರಕಾಶಕರಿಗೆ ತುರ್ತು ನೋಟಿಸ್‌ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

ಕೃತಿಯಲ್ಲಿ ಏನಿದೆ?

“ಟಿಪ್ಪು ಸುಲ್ತಾನ್‌ ತನ್ನ ಜೀವತಾವಧಿಯಲ್ಲಿ ಮತಾಂತರವನ್ನಲ್ಲದೆ ಬೇರೆನನ್ನೂ ಮಾಡಲಿಲ್ಲ. ಇಸ್ಲಾಮಿಕ್ ಸ್ಟೇಟ್‌ ಸ್ಥಾಪಿಸುವುದೇ ಆತನ ಗುರಿಯಾಗಿತ್ತು. ಆತ ಕನ್ನಡ ವಿರೋಧಿಯಾಗಿದ್ದ ಎಂಬಂತೆ ಚಿತ್ರಿಸಲಾಗಿದೆ. ಉರಿಗೌಡ, ದೊಡ್ಡ ನಂಜೇಗೌಡ ಎಂಬವರು ಟಿಪ್ಪುವನ್ನು ಗುಂಡಿಕ್ಕಿ ಕೊಂದರು” ಎಂಬ ಕಾಲ್ಪನಿಕ ಸಂಗತಿಗಳನ್ನೆಲ್ಲ ಅಡ್ಡಂಡ ಕಾರ್ಯಪ್ಪ ಅವರು ತಮ್ಮ ಕೃತಿಯಲ್ಲಿ ಬರೆದಿದ್ದಾರೆ.

ಟಿಪ್ಪುವನ್ನು ಸೋಲಿಸಲು ಕೊಡವರು, ಮರಾಠರು, ಕೇರಳದ ನಾಯರ್‌ಗಳು, ಹೈದ್ರಾಬಾದ್‌ ನಿಜಾಮರೆಲ್ಲರೂ ಬ್ರಿಟಿಷರಿಗೆ ಬೆಂಬಲ ನೀಡಿದರು. ಇದಕ್ಕೆ ಟಿಪ್ಪುವಿನ ಹಿಂದೂ ವಿರೋಧಿ ನೀತಿಯೇ ಕಾರಣವಾಗಿತ್ತು ಎಂಬಂತೆ ಬರೆಯಲಾಗಿದೆ. ಇದನ್ನೂ ಇತಿಹಾಸತಜ್ಞರು ಅಲ್ಲಗಳೆದಿದ್ದಾರೆ.

ಆ ಕಾಲದಲ್ಲಿ ಎಲ್ಲ ರಾಜರು ಪರ್ಷಿಯನ್ ಭಾಷೆಯನ್ನು ಆಡಳಿತ ಭಾಷೆಯಾಗಿ ಬಳಸುತ್ತಿದ್ದರು. ಆದರೂ ಟಿಪ್ಪು ಮಾತ್ರವೇ ಅದನ್ನು ಆಡಳಿತ ಭಾಷೆಯನ್ನಾಗಿ ಮಾಡಿಕೊಂಡು ಕನ್ನಡಕ್ಕೆ ದ್ರೋಹ ಬಗೆದ ಎಂಬಂತೆ ನಿರೂಪಿಸಲಾಗಿದೆ. ಸಹಜವಾಗಿ ಸಾವನ್ನಪ್ಪಿದ ಕೊಡಗು ರಾಜರನ್ನು ಟಿಪ್ಪುವೇ ಕೊಂದನೆಂಬಂತೆ ಚಿತ್ರಿಸಲಾಗಿದೆ ಎಂದು ಇತಿಹಾಸತಜ್ಞರು ಹೇಳುತ್ತಿದ್ದಾರೆ.

ಬ್ರಿಟಿಷರಿಗೆ ಗೂಢಾಚಾರಿಕೆ ಮಾಡಿದ ಅಯ್ಯಂಗಾರಿ ಬ್ರಾಹ್ಮಣರನ್ನು ಕೊಲ್ಲಲಾಯಿತು. ಆದರೆ ಏಕೆ ಕೊಲ್ಲಲಾಯಿತು ಎಂಬುದನ್ನು ಮುಚ್ಚಿಟ್ಟು ಕೃತಿಯನ್ನು ರಚಿಸಲಾಗಿದೆ. ಶೃಂಗೇರಿ ಮಠಕ್ಕೆ ಟಿಪ್ಪು ಬರೆದ ಪತ್ರಗಳ ಕಾಲಘಟ್ಟವನ್ನೇ ತಿರುಚಿ ಉಲ್ಲೇಖಿಸಲಾಗಿದೆ ಎಂಬ ಆರೋಪಗಳು ಬಂದಿವೆ.

ಇದನ್ನೂ ಓದಿರಿ: ಕ್ರಿಶ್ಚಿಯನ್, ಇಸ್ಲಾಂಗೆ ಮತಾಂತರವಾದ ದಲಿತರಿಗೆ ಎಸ್‌ಸಿ ಮಾನ್ಯತೆ ಚರ್ಚೆಯ ಸುತ್ತ..

ದಿವಾನ್‌ ಪೂರ್ಣಯ್ಯ ಕೊನೆಗಳಿಗೆಯಲ್ಲಿ ಹಿಂದೂವಾದಿಯಾಗಿ ಇತಿಹಾಸಕಾರ ಹುಸೇನ್‌ ಆಲಿ ಕೀರ್ಮಾನಿಗೆ ಬೋಧನೆ ಮಾಡಿದ. ದಿವಾನ್ ಪೂರ್ಣಯ್ಯನ ಆಶಯಗಳಿಗೆ ವಿರುದ್ಧವಾಗಿ ಹುಸೇನ್‌ ಆಲಿ ಕೀರ್ಮಾನಿ ಇತಿಹಾಸದಲ್ಲಿ ಸುಳ್ಳುಗಳನ್ನು ದಾಖಲಿಸಿದ. ಅದಕ್ಕೆ ದಿವಾನ್‌ ಪೂರ್ಣಯ್ಯ ತಕರಾರು ತೆಗೆದಿದ್ದರು ಎಂಬಂತೆ ಚಿತ್ರಿಸಲಾಗಿದೆ. ಆದರೆ ಇದಕ್ಕೂ ಪುರಾವೆ ಇಲ್ಲ ಎನ್ನಲಾಗುತ್ತಿದೆ.

ಟಿಪ್ಪು ತನ್ನ ಅಧಿಕಾರವಧಿಯ ಪೂರ್ತಿ ಮತಾಂತರ ಮಾಡುತ್ತಲೇ ಇದ್ದ. ಆತನಿಗೆ ಬೇರೆ ಕೆಲಸ ಇರಲಿಲ್ಲ. ಸಿಂಹಾಸನಕ್ಕೆ ಏರಿದ ಕೂಡಲೇ ಊರಿನ ಹೆಸರುಗಳನ್ನು ಬದಲಿಸಲು ಆಜ್ಞೆ ಮಾಡಿದ. ಹೆದ್ದೆಯ ಹೆಸರುಗಳನ್ನು ಪರ್ಷಿಯನ್‌ ಹೆಸರುಗಳಿಂದ ನಮೂದಿಸಲು ಸೂಚಿಸಿದ. ಹಿಂದೂಗಳಿಗೆ ಹೆದರಿ ದೇವರಾಜಮ್ಮಣ್ಣಿಯವರನ್ನು ಕೊಲ್ಲದೆ ಬಿಟ್ಟ. ಟಿಪ್ಪು ಹತನಾದಾಗ ದೇವರಾಜಮ್ಮಣ್ಣಿ ಖುಷಿಪಟ್ಟರು ಎಂಬಿತ್ಯಾದಿ ಕಪೋಲಕಲ್ಪಿತ ಸಂಗತಿಗಳನ್ನು ಕೃತಿಯೊಳಗೆ ಸೇರಿಸಲಾಗಿದೆ ಎಂದು ಆಕ್ಷೇಪಗಳು ಬಂದಿವೆ.

(ಈ ವಾರದ ‘ನ್ಯಾಯಪಥ’ದಲ್ಲಿ ‘ಟಿಪ್ಪು ನಿಜಕನಸುಗಳು’ ಕೃತಿ ಕುರಿತ ವಿಮರ್ಶೆಗಳನ್ನು ಓದಬಹುದು. ಚಂದಾದಾರರಾಗಲು ಸಂಪರ್ಕಿಸಿ- 98454 35790)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...