Homeಮುಖಪುಟ'ಗುಜರಾತಿಗಳು ದರೋಡೆಕೋರರು' ಎಂಬ ಹೇಳಿಕೆಗಾಗಿ, ಮಾನನಷ್ಟ ಮೊಕದ್ದಮೆಯಲ್ಲಿ ತೇಜಸ್ವಿ ಯಾದವ್‌ಗೆ ಕೋರ್ಟ್‌ನಿಂದ ಸಮನ್ಸ್

‘ಗುಜರಾತಿಗಳು ದರೋಡೆಕೋರರು’ ಎಂಬ ಹೇಳಿಕೆಗಾಗಿ, ಮಾನನಷ್ಟ ಮೊಕದ್ದಮೆಯಲ್ಲಿ ತೇಜಸ್ವಿ ಯಾದವ್‌ಗೆ ಕೋರ್ಟ್‌ನಿಂದ ಸಮನ್ಸ್

- Advertisement -
- Advertisement -

”ಗುಜರಾತಿಗಳು ಮಾತ್ರ ದರೋಡೆಕೋರರು (ವಂಚಕ)” ಎಂದು ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಹೇಳಿದ್ದಾರೆ. ಇದೀಗ ಅವರ ವಿರುದ್ಧ ಅಹಮದಾಬಾದ್‌ನ ಮೆಟ್ರೋಪಾಲಿಟನ್ ನ್ಯಾಯಾಲಯವು ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸಮನ್ಸ್ ಜಾರಿ ಮಾಡಿದೆ.

ತೇಜಸ್ವಿ ಯಾದವ್ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟಕ್ಕಾಗಿ IPC ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸೆಪ್ಟೆಂಬರ್ 22 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ DJ ಪರ್ಮಾರ್ ನ್ಯಾಯಾಲಯವು ಸಮನ್ಸ್ ನೀಡಿದೆ.

ಸಾಮಾಜಿಕ ಕಾರ್ಯಕರ್ತ ಮತ್ತು ಉದ್ಯಮಿ ಹರೇಶ್ ಮೆಹ್ತಾ ಅವರು ನೀಡಿದ ದೂರಿನ ಆಧಾರದ ಮೇಲೆ ಯಾದವ್ ಅವರಿಗೆ ಸಮನ್ಸ್ ನೀಡಲಾಗಿದೆ. ನ್ಯಾಯಾಲಯವು ಯಾದವ್ ವಿರುದ್ಧ ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 202ರ ಅಡಿಯಲ್ಲಿ ವಿಚಾರಣೆ ನಡೆಸಿದೆ.

2023ರ ಮಾರ್ಚ್ 21ರಂದು ಬಿಹಾರದ ಪಾಟ್ನಾದಲ್ಲಿ ಯಾದವ್ ಅವರು ಮಾಧ್ಯಮಗಳ ಮುಂದೆ ಮಾತನಾಡುವ ಸಂದರ್ಭದಲ್ಲಿ ಗುಜರಾತಿಗಳು ದರೋಡೆಕೋರರು ಎಂದು ಹೇಳಿಕೆ ನೀಡಿದ್ದಾರೆ ಎಂದು ಪುರಾವೆಯೊಂದಿಗೆ ಮೆಹ್ತಾ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

”ಈಗಿನ ಪರಿಸ್ಥಿತಿಯಲ್ಲಿ ಗುಜರಾತಿಗಳು ಮಾತ್ರ ದರೋಡೆಕೋರರಾಗಬಹುದು ಮತ್ತು ಅವರ ವಂಚನೆಯನ್ನು ಕ್ಷಮಿಸಲಾಗುವುದು. ಅವರು ಎಲ್ಐಸಿ ಮತ್ತು ಬ್ಯಾಂಕ್‌ಗಳ ಹಣವನ್ನು ಪಡೆದು ಪರಾರಿಯಾದರೆ ಯಾರು ಹೊಣೆ?” ಎಂದು ಯಾದವ್ ಪ್ರಶ್ನಿಸಿದ್ದರು.

ಸಾರ್ವಜನಿಕವಾಗಿ ನೀಡಿರುವ ಹೇಳಿಕೆಯು ಗುಜರಾತಿಗಳ ಮಾನಹಾನಿ ಮತ್ತು ಅವಮಾನಕರವಾಗಿದೆ ಎಂದು ಮೆಹ್ತಾ ಅವರು ತಮ್ಮ ದೂರಿನಲ್ಲಿ ಹೇಳಿದ್ದಾರೆ.

“ದರೋಡೆಕೋರ” ಎಂಬ ಪದವು ರಾಕ್ಷಸ, ಮೋಸಗಾರ ಮತ್ತು ಕ್ರಿಮಿನಲ್ ವ್ಯಕ್ತಿಯನ್ನು ಸೂಚಿಸುತ್ತದೆ ಮತ್ತು ಅಂತಹ ಹೋಲಿಕೆಯು ಗುಜರಾತಿಗಳಲ್ಲದವರು ಗುಜರಾತಿಗಳನ್ನು ಅನುಮಾನದಿಂದ ನೋಡುವಂತೆ ಮಾಡುತ್ತದೆ. ಹಾಗಾಗಿ ಯಾದವ್‌ಗೆ ಗರಿಷ್ಠ ಶಿಕ್ಷೆಯನ್ನು ನೀಡಬೇಕು ಎಂದು ಮೆಹ್ತಾ ತಮ್ಮ ದೂರಿನಲ್ಲಿ ಕೋರಿದ್ದಾರೆ.

ಈ ವರ್ಷದ ಮಾರ್ಚ್‌ನಲ್ಲಿ, ಸೂರತ್ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಅವರ ‘ಮೋದಿ ಉಪನಾಮ’ ಹೇಳಿಕೆಗಾಗಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಅದರಿಂದ ಅವರು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡರು. ಕೆಲದಿನಗಳ ನಂತರ ಸುಪ್ರೀಂ ಕೋರ್ಟ್‌ನಿಂದ ದೋಷಾರೋಪಣೆಗೆ ತಡೆ ನೀಡಿತು. ಆಗಸ್ಟ್ 4 ರಂದು ಅವರನ್ನು ವಯನಾಡ್ ಸಂಸದರಾಗಿ ಮರುಸ್ಥಾಪಿಸಲು ಕಾರಣವಾಯಿತು.

ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಕುರಿತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಆಮ್ ಆದ್ಮಿ ಪಕ್ಷದ ಸಹೋದ್ಯೋಗಿ ಸಂಜಯ್ ಸಿಂಗ್ ಹೇಳಿಕೆಗೆ ಸಂಬಂಧಿಸಿದಂತೆ ಅಹಮದಾಬಾದ್‌ನ ನ್ಯಾಯಾಲಯವು ಅವರಿಗೆ ಸಮನ್ಸ್ ಜಾರಿ ಮಾಡಿದೆ. ಈ ಇಬ್ಬರು ಎಎಪಿ ನಾಯಕರಿಗೆ ಆಗಸ್ಟ್ 31 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: ‘ಮೋದಿ’ ಮಾನನಷ್ಟ ಪ್ರಕರಣ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ರಾಹುಲ್ ಅರ್ಜಿ ವಿಚಾರಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...