Homeಕರ್ನಾಟಕಸೌಜನ್ಯ ಪ್ರಕರಣ: ವೀರೇಂದ್ರ ಹೆಗ್ಗಡೆ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ನಿರ್ಬಂಧ

ಸೌಜನ್ಯ ಪ್ರಕರಣ: ವೀರೇಂದ್ರ ಹೆಗ್ಗಡೆ ವಿರುದ್ಧ ಸುದ್ದಿ ಪ್ರಕಟಿಸದಂತೆ ಕೋರ್ಟ್‌ ನಿರ್ಬಂಧ

- Advertisement -
- Advertisement -

ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಯಾವುದೇ ಮಾಧ್ಯಮದಗಳಿಂದ ಅವಹೇಳನಕಾರಿ ವರದಿ ಮಾಡದಂತೆ ಮತ್ತು ಈಗಾಗಲೇ ಸಾಮಾಜಿಕ ಮಾಧ್ಯಮಗಳೂ ಸೇರಿದಂತೆ ಇನ್ನಿತರೆ ಮಾಧ್ಯಮಗಳು ಮಾಡಿರುವ ಅವಹೇಳನಕಾರಿ ವರದಿಗಳನ್ನು ಅಳಿಸಿ ಹಾಕುವಂತೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

ಈ ಸಂಬಂಧ ಶೀನಪ್ಪ ಮತ್ತಿತರರು ಸಲ್ಲಿಸಿರುವ ಅಸಲು ದಾವೆಯನ್ನು ಸಿಸಿಎಚ್ 11ನೇ ನ್ಯಾಯಾಲಯ ವಿಚಾರಣೆ ನಡೆಸಿ ಇದೇ 19ರಂದು ಈ ಕುರಿತಂತೆ ಆದೇಶಿಸಿದೆ. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಧರ್ಮಸ್ಥಳ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡ ನಡೆಸುತ್ತಿರುವ ಸಂಸ್ಥೆಗಳು ಹಾಗೂ ಅವರ ಕುಟುಂಬಸ್ಥರ ವಿರುದ್ಧ ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಆಪ್, ಫೇಸ್ ಬುಕ್, ಇನ್ಸಾ ಗ್ರಾಮ್, ಯೂ ಟ್ಯೂಬ್, ಟಿ.ವಿ.ಚಾನೆಲ್ ಹಾಗೂ ಇತರೆ ಯಾವುದೇ ರೀತಿಯ ಮಾಧ್ಯಮ ಪ್ರಕಾರಗಳಲ್ಲಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅವಹೇಳನಕಾರಿ ವರದಿ ಅಥವಾ ಮಾತನಾಡಬಾರದು ಎಂದು ನಿರ್ಬಂಧಿಸಿ ಆದೇಶಿಸಿದೆ.

”ಈಗಾಗಲೇ ಈ ಸಂಬಂಧ ಪ್ರಕಟಿಸಲಾಗಿರುವ ವರದಿಗಳನ್ನ ಅಳಿಸಿ ಹಾಕಬೇಕು” ಎಂದು ನ್ಯಾಯಾಧೀಶರು ಆದೇಶ ನೀಡಿದ್ದಾರೆ. 61 ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿದ್ದು ವಿಚಾರಣೆ ಮುಂದೂಡಿದ್ದಾರೆ. ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ರಾಜಶೇಖರ ಎಸ್.ಹಿಲ್ಯಾರು ಮತ್ತು ಮಂಗಳೂರಿನ ಮಯೂರ ಕೀರ್ತಿ ವಾದ ಮಂಡಿಸಿದರು.

ಇದನ್ನೂ ಓದಿ: ಸೌಜನ್ಯ ಕೇಸ್: ‘ಅಭಿಮಾನಿಗಳನ್ನು ನಾನೇ ತಡೆದಿರುವೆ, ಏನನ್ನಾದರೂ ಮಾಡಲು ಸಿದ್ದ’: ಹೋರಾಟಗಾರರಿಗೆ ಹೆಗ್ಗಡೆ ಪರೋಕ್ಷ ಬೆದರಿಕೆ?

”ಬೆಳ್ತಂಗಡಿ ತಾಲ್ಲೂಕು ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ 2012ರಲ್ಲಿ ನಡೆದಿದ್ದ ಸೌಜನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯರಾದ ಮಹೇಶ್ ಶೆಟ್ಟಿ ತಿಮರೋಪಿ, ಜಗದೀಶ್‌, ಪ್ರಭಾ ಬೆಳಹೊಂಗಲ, ಸೋಮನಾಥ್‌ ನಾಯಕ್‌, ಬಿ.ಎಂ.ಭಟ್, ವಿಠಲ ಗೌಡ ಅವರಲ್ಲೆರೂ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬಸರ ವಿರುದ್ಧ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಸಂಬಂಧ ಕೆಲ ಮಾಧ್ಯಮಗಳು ಕ್ಷೇತ್ರದ ವಿರುದ್ಧ ಮತ್ತು ಕ್ಷೇತ್ರಾಧಿಕಾರಿ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಅವಹೇಳನಕಾರಿಯಾಗಿ ವರದಿ ಮಾಡುತ್ತಿವೆ” ಎಂದು ದಾವದಾರರು ಅರ್ಜಿಯಲ್ಲಿ ವಿವರಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನಾಡಾ’ದಿಂದ ಕುಸ್ತಿಪಟು ಬಜರಂಗ್ ಪುನಿಯಾ ಅಮಾನತು: ವರದಿ

0
ಡೋಪಿಂಗ್ ಪರೀಕ್ಷೆ (ಮಾದಕವಸ್ತು ಪತ್ತೆ ಪರೀಕ್ಷೆ)ಗೆ ಸರಿಯಾದ ಸಮಯಕ್ಕೆ ಮೂತ್ರದ ಮಾದರಿಯನ್ನು ನೀಡದ ಆರೋಪದ ಮೇಲೆ ಒಲಿಂಪಿಕ್ ಕಂಚಿನ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ...