Homeಕರ್ನಾಟಕಸೌಜನ್ಯ ಪ್ರಕರಣ: ಧರ್ಮಾಧಿಕಾರಿಯ ಮಂಪರು ಪರೀಕ್ಷೆಗೆ ಮಾಡೋದ್ರಲ್ಲಿ ತಪ್ಪೇನಿದೆ?; ಪ್ರಕಾಶ್ ರಾಜ್ ಪ್ರಶ್ನೆ

ಸೌಜನ್ಯ ಪ್ರಕರಣ: ಧರ್ಮಾಧಿಕಾರಿಯ ಮಂಪರು ಪರೀಕ್ಷೆಗೆ ಮಾಡೋದ್ರಲ್ಲಿ ತಪ್ಪೇನಿದೆ?; ಪ್ರಕಾಶ್ ರಾಜ್ ಪ್ರಶ್ನೆ

- Advertisement -
- Advertisement -

11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ಸಿಗಬೇಕು ಎನ್ನುವ ಕೂಗು ರಾಜ್ಯದೆಲ್ಲೆಡೆ ಜೋರಾಗಿದೆ. ಈ ಪ್ರಕರಣ ನಡೆದು ದಶಕಗಳೇ ಉರುಳಿದರೂ ನೊಂದ ಕುಟುಂಬಕ್ಕೆ ನ್ಯಾಯ ಸಿಕ್ಕಿಲ್ಲ. ಸೌಜನ್ಯ ಕುಟುಂಬಸ್ಥರು ಸತತ ಹೋರಾಟ ನಡೆಸುತ್ತಿದ್ದಾರೆ. ಇತ್ತೀಚೆಗೆ ಸಿಬಿಐ ಕೋರ್ಟ್ ತೀರ್ಪಿನ ಬಳಿಕ ಮತ್ತೆ ಹೋರಾಟಗಳು ಆರಂಭವಾಗಿವೆ. ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.

ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಮತ್ತೆ ಹೋರಾಟಗಳು ಆರಂಭವಾಗಿವೆ. ಈ ಪ್ರಕರಣ ಸಂಬಂಧ 11 ವರ್ಷಗಳ ಹಿಂದೆ ಬಂಧಿತನಾಗಿದ್ದ ಸಂತೋಷ್‌ ರಾವ್‌, ದೋಷಮುಕ್ತ ಎಂದು ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆ ಮತ್ತೆ ಸೌಜನ್ಯ ಪ್ರಕರಣ ಮುನ್ನೆಲೆಗೆ ಬಂದಿದೆ.‌

ಶಿವಮೊಗ್ಗ ನಗರದಲ್ಲಿ ಪತ್ರಕರ್ತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ”ಧರ್ಮದ ಸೋಗಿನವರು ತಪ್ಪು ಮಾಡಿದರೆ ಅದನ್ನು ತನಿಖೆ ಮಾಡುವುದು ಸರಿಯಾಗಿಯೇ ಇದೆ” ಎಂದು  ಹೇಳಿದ್ದಾರೆ.

”ಗುಪ್ತಚರ ಇಲಾಖೆಗೆ ಅನುಮಾನಗಳಿದ್ದರೆ ಧರ್ಮಾಧಿಕಾರಿಗಳನ್ನೂ ಮಂಪರು ಪರೀಕ್ಷೆಗೆ ಒಳಪಡಿಸುವುದರಲ್ಲಿ ತಪ್ಪೇನಿದೆ? ಪೊಲೀಸರು ಇದನ್ನು ನೋಡಿಕೊಳ್ಳುತ್ತಾರೆ. ಸತ್ಯ ಹೊರಗೆ ಬಂದೇ ಬರುತ್ತದೆ” ಎಂದು ಹೇಳಿದ್ದಾರೆ.

ಧರ್ಮಾಧಿಕಾರಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕೆಂದು ಆಗ್ರಹ ಕೇಳಿ ಬರುತ್ತಿದೆ. ಇದು ತನಿಖೆಯ ಭಾಗವಾಗಿದ್ದರೆ, ನಿಜಾಂಶ ತಿಳಿಯುವ ಅವಶ್ಯಕತೆ ಇದ್ದರೆ ಮಾಡಲಿ.  ಈ ಬಗ್ಗೆ ನನ್ನ ಆಕ್ಷೇಪವೇನೂ ಇಲ್ಲ. ಧರ್ಮಸ್ಥಳ, ಧರ್ಮ ಬಿಡಿ ಎಂದು ನಾನು ಹೇಳಲು ಬರುವುದಿಲ್ಲ. ಆದರೆ, ಕೊನೆಯದಾಗಿ ಧರ್ಮ ಉಳಿಯಬೇಕು” ಎಂದಿದ್ದಾರೆ.

ಇತ್ತೀಚೆಗೆ ಕನ್ನಡ ಚಿತ್ರರಂಗದ ಕೆಲವು ನಟರು ಕೂಡ ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಒತ್ತಾಯ ಮಾಡಿದ್ದಾರೆ. ದುನಿಯಾ ವಿಜಯ್ ಹಾಗೂ ಕನ್ನಡ ಖ್ಯಾತ ನಟ ದಿವಂಗತ ಟೈಗರ್​ ಪ್ರಭಾಕಾರ್ ಅವರ​ ಮಗ ನಟ ವಿನೋದ್​ ಟೈಗರ್​ ಪ್ರಭಾಕರ್​ ​ಅವರು ಸೌಜನ್ಯ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ನಾವು ಧರ್ಮಸ್ಥಳಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೌಜನ್ಯ ಸಾವಿಗೆ ನ್ಯಾಯ ಸಿಗುವವರೆಗೂ ಧರ್ಮಸ್ಥಳಕ್ಕೆ ಹೋಗುವುದಿಲ್ಲ: ನಟ ವಿನೋದ್​ ಟೈಗರ್​ ಪ್ರಭಾಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...