Homeಮುಖಪುಟಕೋವಿಡ್ -19 ರೂಪಾಂತರಿ 'ಜೆಎನ್ 1' ಕೇರಳದಲ್ಲಿ ಪತ್ತೆ; ಎಷ್ಟು ಅಪಾಯಕಾರಿ?

ಕೋವಿಡ್ -19 ರೂಪಾಂತರಿ ‘ಜೆಎನ್ 1’ ಕೇರಳದಲ್ಲಿ ಪತ್ತೆ; ಎಷ್ಟು ಅಪಾಯಕಾರಿ?

- Advertisement -
- Advertisement -

ಕೇರಳದ ಮಹಿಳೆಯೊಬ್ಬರಲ್ಲಿ ಕೋವಿಡ್ -19 ಉಪ ರೂಪಾಂತರಿ ಜೆಎನ್ 1 (JN-1) ವೈರಾಣು ಡಿಸೆಂಬರ್ 8 ರಂದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 79 ವರ್ಷದ ಮಹಿಳೆಗೆ ನ.18 ರಂದು ನಡೆಸಿದ ಆರ್‌ಟಿ-ಪಿಸಿಆರ್ ಪರೀಕ್ಷೆಯಲ್ಲಿ ರೂಪಾಂತರಿ ಜೆಎನ್ 1 ಪತ್ತೆಯಾಗಿದ್ದು, ಅವರಲ್ಲಿ ಇನ್ಫ್ಲುಯೆನ್ಜಾ ಮಾದರಿಯ ರೋಗ ಲಕ್ಷಣಗಳು ಕಂಡುಬಂದಿತ್ತು. ಚಿಕಿತ್ಸೆ ನಂತರ ಅವರು ಕೋವಿಡ್ -19ನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಪ್ರಸ್ತುತ ಪತ್ತೆಯಾಗುತ್ತಿರುವ ಕೋವಿಡ್ -19 ಪ್ರಕರಣಗಳಲ್ಲಿ 90% ಕ್ಕಿಂತ ಹೆಚ್ಚು ಪ್ರಕರಣಗಳನ್ನು ಸೌಮ್ಯ ಎಂದು ವರ್ಗೀಕರಿಸಲಾಗಿದೆ. ಬಹುತೇಕ ಸೋಂಕಿತರು ತಮ್ಮ ಮನೆಗಳಲ್ಲೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆದುಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸುತ್ತಿದೆ.

ಕೆಲವು ದಿನಗಳ ಹಿಂದೆ ಸಿಂಗಾಪುರದಿಂದ ತಮಿಳುನಾಡಿನ ತಿರುಚಿರಾಪಳ್ಳಿಗೆ ಪ್ರಯಾಣಿಸಿದ್ದ ವ್ಯಕ್ತಿಯೊಬ್ಬರಲ್ಲಿ ಜೆಎನ್ 1 ರೂಪಾಂತರಿ ಕಾಣಿಸಿಕೊಂಡಿತ್ತು. ಅವರು ಗುಣಮುಖರಾದ ನಂತರ ತಮಿಳುನಾಡಿನ ಇತರೆ ಪ್ರದೇಶಗಳಲ್ಲಿ ಈ ರೂಪಾಂತರಿ ವೈರಸ್ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿಲ್ಲ.

ಚೀನಾದಲ್ಲಿ ಏಳು ಪ್ರಕರಣ ಪತ್ತೆ:

ಕೋವಿಡ್-19 ರೂಪಾಂತರಿ ಜೆಎನ್ 1ರ ಏಳು ಪಾಸಿಟಿವ್ ಪ್ರಕರಣಗಳು ಚೀನಾದಲ್ಲಿ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ. ಆದರೆ, ರೂಪಾಂತರಿ ವೈರಾಣು ಹರಡುವಿಕೆ ಮಟ್ಟವು ಮಾತ್ರ ತುಂಬಾ ಕಡಿಮೆ ಇದೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ವಿದೇಶದಿಂದ ಬಂದಿರುವ ವೈರಾಣುಗಳು ಚೀನಾದಲ್ಲಿ ಪ್ರಬಲವಾಗುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜೆಎನ್ 1 ಎಂದರೇನು?

‘ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್’ (ಸಿಡಿಸಿ) ಪ್ರಕಾರ, ಕೋವಿಡ್-19 ಜ್ವರಕ್ಕೆ ಕಾರಣವಾಗುವ ವೈರಸ್‌ನ ರೂಪಾಂತರವಾದ ಜೆಎನ್ 1, ಬಿಎ.2.86ರ ರೂಪಾಂತರದ ಮಾದರಿಯಾಗಿದೆ. ಸಿಡಿಸಿ ಪ್ರಕಾರ, ಸ್ಪೈಕ್ ಪ್ರೊಟೀನ್‌ನಲ್ಲಿ JN.1 ಮತ್ತು BA.2.86 ನಡುವೆ ಒಂದೇ ಒಂದು ಬದಲಾವಣೆ ಮಾತ್ರ ಇದೆ ಎನ್ನಲಾಗಿದೆ.

ವೈರಾಣು ಪತ್ತೆಯಾಯಾಗಿದ್ದು ಯಾವಾಗ?

ಈ ವೈರಾಣುವನ್ನು ಮೊದಲ ಬಾರಿಗೆ ಅಮೆರಿಕಾದಲ್ಲಿ ಸೆಪ್ಟೆಂಬರ್ 2023 ರಂದು ಪತ್ತೆ ಮಾಡಲಾಯಿತು. ಡಿಸೆಂಬರ್ 8 ರ ಹೊತ್ತಿಗೆ, ಅಮೆರಿಕಾದ ಸಾರ್ವಜನಿಕ ಆರೋಗ್ಯ ಸಂಸ್ಥೆಯು JN.1 ರೂಪಾಂತರವು ದೇಶದ ಒಟ್ಟು ಪ್ರಕರಣಗಳಲ್ಲಿ ಶೇ.15-29ರ ನಡುವೆ ಇರುತ್ತದೆ ಎಂದು ಅಂದಾಜಿಸಿದೆ.

ಭಾರತದಲ್ಲಿದೆಯಾ ಜೆಎನ್ 1?

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ಹೊಸ ಕೊರೋನ ವೈರಸ್ ರೂಪಾಂತರವನ್ನು ಮೊದಲು ಡಿಸೆಂಬರ್ 13 ರಂದು ಕೇರಳದಲ್ಲಿ ಕಂಡುಹಿಡಿಯಲಾಗಿದೆ. ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG) ಯ ಇತ್ತೀಚಿನ ಮಾಹಿತಿಯು ಕೇರಳದಲ್ಲಿ ಪತ್ತೆಯಾಗಿರುವ ಬಗ್ಗೆ ದೃಢಪಡಿಸಿದೆ.

ನ್ಯಾಶನಲ್ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಕೋವಿಡ್ ಟಾಸ್ಕ್ ಫೋರ್ಸ್‌ನ ಸಹ-ಅಧ್ಯಕ್ಷ ಡಾ. ರಾಜೀವ್ ಜಯದೇವನ್ ಮಾತನಾಡಿ, ಪ್ರಸ್ತುತ 1,296 ರಷ್ಟಿರುವ ಭಾರತದ ಕೋವಿಡ್ ಪ್ರಕರಣಗಳ ಇತ್ತೀಚಿಗೆ ಉಲ್ಬಣಿಸುತ್ತಿರುವುದಕ್ಕೆ ಜೆಎನ್.1 ಕಾರಣವಾಗಿರಬಹುದು’ ಎಂದು ಹೇಳಿದ್ದಾರೆ.

ರೂಪಾಂತರದ ಲಕ್ಷಣಗಳೇನು?

ಸಿಡಿಸಿಯ ಪ್ರಕಾರ, ಕೊರೊನಾ ವೈರಸ್‌ನ ಜೆಎನ್.1 ರೂಪಾಂತರವು ಇತರ ರೂಪಾಂತರಗಳಿಗಿಂತ ವಿಭಿನ್ನ ರೋಗಲಕ್ಷಣಗಳನ್ನು ಉಂಟುಮಾಡುತ್ತದೆಯಾ ಎಂಬ ಬಗ್ಗೆ ಇನ್ನೂ ತಿಳಿದುಬಂದಿಲ್ಲ. ರೋಗ ಲಕ್ಷಣಗಳ ಪ್ರಕಾರಗಳು ಮತ್ತು ಅವು ಎಷ್ಟು ತೀವ್ರವಾಗಿರುತ್ತವೆ ಎಂಬುದು ಸಾಮಾನ್ಯವಾಗಿ ವ್ಯಕ್ತಿಯ ರೋಗನಿರೋಧಕ ಶಕ್ತಿ ಮತ್ತು ಒಟ್ಟಾರೆ ಆರೋಗ್ಯದ ಮೇಲೆ ಹೆಚ್ಚು ಅವಲಂಬಿತವಾಗಿರುತ್ತದೆ ಎಂದು ಹೇಳಿದೆ.

ಇದನ್ನೂ ಓದಿ; ಬೆಂಕಿ ಹಚ್ಚಿಕೊಳ್ಳಲು ಯೋಚಿಸಿದ್ದರಾ ಲೋಕಸಭೆ ಭದ್ರತೆ ಉಲ್ಲಂಘಿಸಿದ ಆರೋಪಿಗಳು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....