Homeಮುಖಪುಟಕೊರೊನಾ ಆತಂಕ: ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ರದ್ದು

ಕೊರೊನಾ ಆತಂಕ: ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ರದ್ದು

- Advertisement -
- Advertisement -

ಕೊರೊನಾ ಆತಂಕದಿಂದ ಸಿಬಿಎಸ್‌ಇ 12 ನೇ ತರಗತಿಯ ಈ ಸಾಲಿನ ಪರೀಕ್ಷೆ ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಕೊರೊನಾದ ಕಠಿಣ ಪರಿಸ್ಥಿತಿ ಸಮಯದಲ್ಲಿ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳು ಹಿತದೃಷ್ಟಿಯಿಂದ ಸುರಕ್ಷಿತವಲ್ಲ ಹೀಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

“ನಮ್ಮ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಯು ಅತ್ಯಂತ ಮಹತ್ವದ್ದಾಗಿದೆ. ಈ ವಿಷಯದಲ್ಲಿ ಯಾವುದೇ ರಾಜಿ ಆಗುವುದಿಲ್ಲ” ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ. “ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರಲ್ಲಿ ಆತಂಕವನ್ನು ಕೊನೆಗೊಳಿಸಬೇಕು. ಕೊರೊನಾದಂತಹ ಒತ್ತಡದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಹಾಜರಾಗುವಂತೆ ಒತ್ತಾಯಿಸಬಾರದು” ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಪ್ರಭಾರಿಗಳ ಕಾರ್ಯಶೈಲಿ: ಭ್ರಷ್ಟಾಚಾರ, ಅಕ್ರಮ ನೇಮಕಾತಿ ಆರೋಪ

ಸಿಬಿಎಸ್‌ಇ ನಿರ್ಧಾರದ ಕೆಲವೇ ನಿಮಿಷಗಳಲ್ಲಿ, ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಕೂಡ ಈ ವರ್ಷದ 12 ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ ಎಂದು ತಿಳಿಸಿದೆ.

ಈ ಕುರಿತು ಮಂಗಳವಾರ ಪ್ರಧಾನಮಂತ್ರಿ ನೇತೃತ್ವದಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪರಿಸರ ಸಚಿವ ಪ್ರಕಾಶ್ ಜಾವಡೇಕರ್, ಮತ್ತು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ) ಅಧ್ಯಕ್ಷ ಮನೋಜ್ ಅಹುಜಾ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಸಂತಸ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಿದ್ಯಾರ್ಥಿಗಳಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ.

’12 ನೇ ತರಗತಿಯ ವಿದ್ಯಾರ್ಥಿಗಳ ತಮ್ಮ ಧನಿಯನ್ನು ಕೇಳುವಂತೆ ಮಾಡಿದ್ದಕ್ಕೆ ಅಭಿನಂದನೆಗಳು. ಎಲ್ಲಾ ಅನಿಶ್ಚಿತತೆ ಮತ್ತು ಒತ್ತಡದ ನಂತರ, ನೀವು ಇಂದು ವಿಶ್ರಾಂತಿ ಪಡೆಯಲು ಅರ್ಹರಾಗಿದ್ದೀರಿ!
ಮುಂದೆ ಸಂತೋಷದ, ಆರೋಗ್ಯಕರ ಮತ್ತು ಉಜ್ವಲ ಭವಿಷ್ಯಕ್ಕಾಗಿ ಆಲ್ ದಿ ಬೆಸ್ಟ್’ ಎಂದಿದ್ದಾರೆ.


ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ಸರ್ಕಾರ 5ಜಿ ಮೆಗಾ ಹಗರಣವನ್ನು ರೂಪಿಸುತ್ತಿದೆ: ಎಎಪಿ ಮುಖಂಡ ಸಂಜಯ್ ಸಿಂಗ್

0
2ಜಿ ಸ್ಪೆಕ್ಟ್ರಮ್ ಪ್ರಕರಣದಲ್ಲಿ 2012ರ ತೀರ್ಪನ್ನು ಮಾರ್ಪಾಡು ಮಾಡುವಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ ನಂತರ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರು ಪ್ರಧಾನಿ ನರೇಂದ್ರ...