Homeಕೊರೊನಾಕೊರೊನಾ ಪರಿಹಾರ ವಿಳಂಬ: ಬಿಹಾರ, ಆಂಧ್ರ ಪ್ರದೇಶ, ಕೇರಳಕ್ಕೆ ಸುಪ್ರೀಂ ತರಾಟೆ

ಕೊರೊನಾ ಪರಿಹಾರ ವಿಳಂಬ: ಬಿಹಾರ, ಆಂಧ್ರ ಪ್ರದೇಶ, ಕೇರಳಕ್ಕೆ ಸುಪ್ರೀಂ ತರಾಟೆ

- Advertisement -
- Advertisement -

ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ಪರಿಹಾರವನ್ನು ನೀಡುವಲ್ಲಿ ವಿಫಲವಾದ ಮತ್ತು ಪರಿಹಾರ ಪಾವತಿ ಮಾಡುವಲ್ಲಿ ವಿಳಂಬ ಮಾಡಿದ ರಾಜ್ಯಗಳನ್ನು ಸುಪ್ರೀಂ ಕೋರ್ಟ್ ಬುಧವಾರ ತರಾಟೆಗೆ ತೆಗೆದುಕೊಂಡಿದೆ.

ಆಂಧ್ರ ಪ್ರದೇಶ ಮತ್ತು ಬಿಹಾರ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಮಧ್ಯಾಹ್ನ 2 ಗಂಟೆಯ ವಿಚಾರಣೆಗೆ ಹಾಜರಾಗಬೇಕೆಂದು ನ್ಯಾಯಮೂರ್ತಿ ಎಂಆರ್ ಶಾ ನೋಟಿಸ್ ನೀಡಿದ್ದಾರೆ. ಅವರ್‍ಯಾರು ಕಾನೂನಿಗಿಂತ ಮೇಲಲ್ಲ ಎಂದು ನ್ಯಾಯಮೂರ್ತಿಗಳು ಕಿಡಿ ಕಾರಿದ್ದಾರೆ.

ಜೊತೆಗೆ ಕೇರಳ, ಹರಿಯಾಣ, ಗುಜರಾತ್ ಸೇರಿದಂತೆ ಇತರ ರಾಜ್ಯಗಳ ಸಾವಿನ ಲೆಕ್ಕ ಮತ್ತು ಪರಿಹಾರ ಅರ್ಜಿಗಳ ಲೆಕ್ಕದ ಬಗ್ಗೆ ನ್ಯಾಯಾಲಯ ಪ್ರಶ್ನಿಸಿದ್ದು ರಾಜ್ಯ ಸರ್ಕಾರಗಳ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.

ಹಿಂದಿನ ನ್ಯಾಯಾಲಯದ ಆದೇಶದ ನಂತರ ಆಂಧ್ರಪ್ರದೇಶವು ಸುಮಾರು 36,000 ಪರಿಹಾರ ಅರ್ಜಿಗಳನ್ನು ದಾಖಲಿಸಿದೆದೆ, ಅದರಲ್ಲಿ 31,000 ಅರ್ಜಿಗಳು ಪರಿಹಾರಕ್ಕೆ ಅರ್ಹವಾಗಿವೆ. ಆದರೆ, ಇದುವರೆಗೆ 11,000 ಅರ್ಜಿದಾರರಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂಬುದನ್ನು ನ್ಯಾಯಾಲಯ ಗಮನಿಸಿದೆ.

ಇದನ್ನೂ ಓದಿ: ಆಸ್ಕರ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ’ಜೈ ಭೀಮ್’ ದೃಶ್ಯಗಳು: ಅತ್ಯುನ್ನತ ಗೌರವ ಎಂದ ತಂಡ

“ಪರಿಹಾರವನ್ನು ಪಾವತಿಸಲು ಪದೇ ಪದೇ ನಿರ್ದೇಶನಗಳನ್ನು ನೀಡಲಾಗುತ್ತಿದೆ. ಈ ವಿಷಯದಲ್ಲಿ ಆಂಧ್ರಪ್ರದೇಶದ ಭಾಗದಲ್ಲಿ ಸಂಪೂರ್ಣ ನಿರ್ದಯತೆ ಇದೆ. ಈ ನ್ಯಾಯಾಲಯದ ಆದೇಶಗಳನ್ನು ಅನುಸರಿಸುವಲ್ಲಿ ರಾಜ್ಯವು ಗಂಭೀರವಾಗಿಲ್ಲ ಎಂದು ತೋರುತ್ತಿರುವುದು ಅತ್ಯಂತ ದುರದೃಷ್ಟಕರವಾಗಿದೆ. ಪರಿಹಾರ ನೀಡದಿರುವುದಕ್ಕೆ ಯಾವುದೇ ಸಮರ್ಥನೆ ಇಲ್ಲ” ಎಂದು ನ್ಯಾಯಾಲಯ ಕಿಡಿಕಾರಿದೆ.

“ಅರ್ಹ ಹಕ್ಕುದಾರರಿಗೆ ಪರಿಹಾರ ಪಾವತಿ ಮಾಡದಿರುವುದು ನಮ್ಮ ಹಿಂದಿನ ಆದೇಶಕ್ಕೆ ತೋರಿದ ಅವಿಧೇಯತೆಯಾಗಿದೆ. ಇದಕ್ಕೆ ಮುಖ್ಯ ಕಾರ್ಯದರ್ಶಿ ಜವಾಬ್ದಾರರಾಗಿರುತ್ತಾರೆ. ಮುಖ್ಯ ಕಾರ್ಯದರ್ಶಿಯವರು ವಾಸ್ತವಿಕವಾಗಿ ಮಧ್ಯಾಹ್ನ 2 ಗಂಟೆಗೆ ಹಾಜರಾಗಿ, ಸ್ಪಷ್ಟನೆ ನೀಡಲಿ” ಎಂದು ನ್ಯಾಯಮೂರ್ತಿ ಶಾ ಹೇಳಿದ್ದಾರೆ.

ಇನ್ನು, ಬಿಹಾರವು ತೀರಾ ಕಡಿಮೆ ಕೊರೊನಾ ಸಾವುಗಳ ವರದಿ ಮಾಡಿದೆ ಎಂದ ನ್ಯಾಯಾಲಯ, “ನೀವು ಡೇಟಾವನ್ನು ಸಹ ನವೀಕರಿಸುವುದಿಲ್ಲ. ನಿಮ್ಮ ಪ್ರಕಾರ ಕೇವಲ 12,000 ಜನರು ಸಾವನ್ನಪ್ಪಿದ್ದಾರೆ. ನಮಗೆ ನೈಜ ಸಂಗತಿಗಳು ಬೇಕು. ನಮ್ಮ ಹಿಂದಿನ ಆದೇಶದ ನಂತರ ಇತರ ರಾಜ್ಯಗಳಲ್ಲಿ ಸಂಖ್ಯೆಗಳು ಹೆಚ್ಚಿವೆ. ಬಿಹಾರದಲ್ಲಿ ಕೇವಲ 12,000 ಮಂದಿ ಸತ್ತಿದ್ದಾರೆ ಎಂಬುದನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ” ಎಂದು ತರಾಟೆ ತೆಗೆದುಕೊಂಡಿದ್ದಾರೆ.

ಬಿಹಾರದಲ್ಲಿ ಇದುವರೆಗೆ ಸುಮಾರು ಎಂಟು ಲಕ್ಷ ಕೊರೊನಾ ಪ್ರಕರಣಗಳಿಂದ 12,145 ಕೋವಿಡ್ ಸಂಬಂಧಿತ ಸಾವುಗಳು ವರದಿಯಾಗಿವೆ.

ಇದನ್ನೂ ಓದಿ: ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಕೊರೊನಾ ಪರಿಹಾರಕ್ಕಾಗಿ ಸ್ವೀಕರಿಸಿದ ಅರ್ಜಿಗಳ ಸಂಖ್ಯೆ ಮತ್ತು ರಾಜ್ಯಗಳಲ್ಲಿ ದಾಖಲಾದ ಸಾವುಗಳ ನಡುವಿನ “ಅತ್ಯಂತ ಗಂಭೀರ” ಅಂತರದ ಬಗ್ಗೆ ಉನ್ನತ ನ್ಯಾಯಾಲಯವು ಕೇರಳ ಸೇರಿದಂತೆ ಇತರ ರಾಜ್ಯಗಳನ್ನು ಸಹ ತರಾಟೆಗೆ ತೆಗೆದುಕೊಂಡಿದೆ.

ಗುಜರಾತ್‌ನಲ್ಲಿ 10,174 ಸಾವುಗಳು ವರದಿಯಾಗಿವೆ. ಆದರೆ ಸುಮಾರು 91,000 ಪರಿಹಾರ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ನ್ಯಾಯಾಲಯವು ತೋರಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ, ಕೇರಳವು 51,000 ಕ್ಕೂ ಹೆಚ್ಚು ಸಾವುಗಳನ್ನು ವರದಿ ಮಾಡಿದೆ. ಆದರೆ 27,000 ಅರ್ಜಿಗಳು ಮಾತ್ರ ಸಲ್ಲಿಕೆಯಾಗಿವೆ. ಹರಿಯಣದಲ್ಲಿ 10,000 ಕ್ಕೂ ಹೆಚ್ಚು ಸಾವುಗಳಾಗಿದ್ದು, 7,360 ಅರ್ಜಿಗಳನ್ನು ಸ್ವೀಕರಿಸಿದೆ ಎಂದು ಹರಿಯಾಣ ನ್ಯಾಯಾಲಯಕ್ಕೆ ತಿಳಿಸಿದೆ.

“ಕೇರಳ ಕೇವಲ 27,000 ಅರ್ಜಿಗಳನ್ನು ಹೇಗೆ ಸ್ವೀಕರಿಸಿದೆ..? ಇತರ ರಾಜ್ಯಗಳಲ್ಲಿ ಸಾವುಗಳಿಗಿಂತ ಹೆಚ್ಚು ಅರ್ಜಿಗಳು ದಾಖಲಾಗಿವೆ. ಇಲ್ಲಿ ಏಕೆ ವಿರುದ್ಧ ಪ್ರವೃತ್ತಿ ಇದೆ..? ನೀವು ಈಗಾಗಲೇ ಮೃತರ ವಿವರಗಳನ್ನು ಹೊಂದಿದ್ದೀರಿ. ನಿಮ್ಮ ಅಧಿಕಾರಿಗಳು ಹೋಗಿ ಪರಿಹಾರದ ಬಗ್ಗೆ ಸಂತ್ರಸ್ತ ಕುಟುಂಬಗಳಿಗೆ ಹೇಳಬೇಕು. ಅವರಿಗೆ ಪರಿಹಾರವನ್ನು ನೀಡಲೇಬೇಕು,” ಎಂದು ನ್ಯಾಯಾಲಯ ಆದೇಶಿಸಿದೆ.

ಅಕ್ಟೋಬರ್‌ನಲ್ಲಿ ನ್ಯಾಯಾಲಯವು ಯಾವುದೇ ರಾಜ್ಯವು ಕೊರೊನಾ ಪರಿಹಾರವನ್ನು ನಿರಾಕರಿಸುವಂತಿಲ್ಲ. ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಹಣವನ್ನು ವಿತರಿಸಬೇಕು ಎಂದು ಆದೇಶಿಸಿತ್ತು.


ಇದನ್ನೂ ಓದಿ: ಕೊರೊನಾ ಸಾಂಕ್ರಾಮಿಕದಿಂದ ಮಾರಾಟದಲ್ಲಿ ದಾಖಲೆ ಬರೆದ ಡೋಲೊ-650

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...