Homeಕರೋನಾ ತಲ್ಲಣಕೊರೊನಾ ಕರ್ತವ್ಯ: ನೀಟ್ ಪರೀಕ್ಷೆಯಿಂದ ವಂಚಿತರಾಗಲಿದ್ದಾರೆ 5,000 ವೈದ್ಯಕೀಯ ಇಂಟರ್ನ್‌ಗಳು

ಕೊರೊನಾ ಕರ್ತವ್ಯ: ನೀಟ್ ಪರೀಕ್ಷೆಯಿಂದ ವಂಚಿತರಾಗಲಿದ್ದಾರೆ 5,000 ವೈದ್ಯಕೀಯ ಇಂಟರ್ನ್‌ಗಳು

- Advertisement -
- Advertisement -

ಕೇರಳ, ಜಮ್ಮು ಮತ್ತು ಕಾಶ್ಮೀರ, ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದ 5,000ಕ್ಕೂ ಹೆಚ್ಚು ವೈದ್ಯಕೀಯ ಇಂಟರ್ನ್‌ಗಳು ಕೊರೊನಾ ಸಾಂಕ್ರಾಮಿಕದ ತುರ್ತು ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿದ್ದರಿಂದ 2022ರ ನೀಟ್ ಪಿಜಿ ಪರೀಕ್ಷೆ ಬರೆಯಲು ಸಾಧ್ಯವಾಗುತ್ತಿಲ್ಲ.

ವೈದ್ಯಕೀಯ ವಿದ್ಯಾರ್ಥಿಗಳು ನೀಟ್‌-ಪಿಜಿ 2022 ಪರೀಕ್ಷೆ ಬರೆಯಲು ಇಂಟರ್ನ್‌ಶಿಪ್ ಪೂರ್ಣಗೊಳಿಸಿರಬೇಕು. ಆದರೆ, ವೈದ್ಯಕೀಯ ವಿಜ್ಞಾನಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿಯು ಇಂಟರ್ನ್‌ಶಿಪ್ ಪೂರ್ಣಗೊಳಿಸುವ ಕಟ್-ಆಫ್ ದಿನಾಂಕವನ್ನು ಜುಲೈ 31ಕ್ಕೆ ವಿಸ್ತರಿಸಿದೆ. ಹೀಗಾಗಿ, ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿಗಳ ಇಂಟರ್ನ್‌ಶಿಪ್ ಮುಗಿಯುವುದಿಲ್ಲವಾದ್ದರಿಂದ ಈ ಇಂಟರ್ನ್‌ಗಳು ಪರೀಕ್ಷೆ ಬರೆಯಲು ಅನರ್ಹರಾಗುತ್ತಾರೆ.

’ಕೇರಳದಲ್ಲಿ 3,500 ಕ್ಕೂ ಹೆಚ್ಚು ಇಂಟರ್ನಿಗಳು ಕೋವಿಡ್ ವಿರುದ್ಧ ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ನಾವು ಪಿಜೆಗೆ ಪ್ರವೇಶ ಪಡೆಯಲು ನಮ್ಮ ಮೊದಲ ಪ್ರಯತ್ನವನ್ನು ಕಳೆದುಕೊಳ್ಳುತ್ತಿರುವುದು ಕಳವಳಕಾರಿ ಸಂಗತತಿ’ ಎಂದು ಕೇರಳದ ಐಎಂಎ-ಮೆಡಿಕಲ್ ಸ್ಟೂಡೆಂಟ್ಸ್ ನೆಟ್ವರ್ಕ್‌ನ ಸಂಚಾಲಕ ವಿಷ್ಣು ಗೋಪನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“5,000 ಕ್ಕೂ ಹೆಚ್ಚು ಇಂಟರ್ನಿಗಳು ನೀಟ್‌-ಪಿಜಿ 2022 ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುವುದಿಲ್ಲ. ಭಾರತದ ಇತಿಹಾಸದಲ್ಲಿ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಶೂನ್ಯ ವರ್ಷವೇ ಇರಲಿಲ್ಲ” ಎಂದು ಐಎಂಎ – ಜೂನಿಯರ್ ಡಾಕ್ಟರ್ಸ್ ನೆಟ್ವರ್ಕ್‌ನ ರಾಷ್ಟ್ರೀಯ ಕಾರ್ಯದರ್ಶಿ ಡಾ. ಕರಣ್ ಜುನೇಜಾ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸುವ ಮೂಲಕ ದೇಶಾದ್ಯಂತ ಕೊರೊನಾ ಹರಡಿತು: ಪಿಎಂ ಮೋದಿ

ಕೇರಳ ಆರೋಗ್ಯ ಸೇವೆಗಳ ವಿಶ್ವವಿದ್ಯಾಲಯದ ಅಡಿಯಲ್ಲಿ 25 ವೈದ್ಯಕೀಯ ಕಾಲೇಜುಗಳಿವೆ. ಇಂಟರರ್ನ್‌ಶಿಪ್ ಅರ್ಹತೆಯನ್ನು ವಿಸ್ತರಿಸುವ ನಿರ್ಧಾರವನ್ನು ಗುಜರಾತ್ ಇಂಟರ್ನ್ ವೈದ್ಯರ ಸಂಘದ ಅಧ್ಯಕ್ಷ ಡಾ ಮೀತ್‌ ಘೋನಿಯಾ ಅವರು ಸ್ವಾಗತಿಸಿದ್ದಾರೆ.

“ಸಾಂಕ್ರಾಮಿಕ ಸಮಯದಲ್ಲಿ ಸರ್ಕಾರವು ಅವರನ್ನು ಉದ್ಯೋಗಿಗಳಾಗಿ ಬಳಸಿಕೊಂಡಿದೆ ಎಂಬ ಏಕೈಕ ಕಾರಣದಿಂದ ಅವರು ಪರೀಕ್ಷೆಗೆ ಅರ್ಹರಾಗುವುದಿಲ್ಲ. ಅವರು ಕೊರೊನ ವಿರುದ್ದದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಅವರ ಇಂಟರ್ನ್‌ಶಿಪ್ ತಡವಾಗಿ ಪ್ರಾರಂಭವಾಗಿದೆ. ಈಗ ಅವರು ಪರೀಕ್ಷೆಗೆ ಅರ್ಹತೆ ಪಡೆಯುವುದಿಲ್ಲ. ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಸರ್ಕಾರವನ್ನು ವಿನಂತಿಸುತ್ತೇವೆ” ಎಂದು ಘೋನಿಯಾ ಹೇಳಿದ್ದಾರೆ.

ಈ ಇಂಟರ್ನ್‌ಗಳು ತಮ್ಮ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಗದಿದ್ದರೆ, ಅವರು ಒಂದು ವರ್ಷದವರೆಗೆ ಅವಕಾಶಗಳಿಂದ ವಂಚಿತರಾಗುತ್ತಾರೆ. ಜೂನಿಯರ್ ವೈದ್ಯರು ಆರೋಗ್ಯ ಕ್ಷೇತ್ರದಲ್ಲಿ ಬೆನ್ನೆಲುಬಾಗಿದ್ದಾರೆ. ಇಂಟರ್ನ್‌ಗಳು ಪರೀಕ್ಷೆಯನ್ನು ತಪ್ಪಿಸಿಕೊಳ್ಳುವುದು ನಮ್ಮ ಆರೋಗ್ಯ ವ್ಯವಸ್ಥೆಯ ಮೇಲೆ ಹೆಚ್ಚು ಪರಿಣಾಮ ಬೀರುವುದಲ್ಲದೆ, ಜನರಿಗೂ ಸಮಸ್ಯೆಯಾಗಲಿದೆ ಎಂದು ಡಾ.ಕರಣ್ ಜುನೇಜಾ ಹೇಳಿದ್ದಾರೆ.


ಇದನ್ನೂ ಓದಿ: ಅಂಬೇಡ್ಕರ್‌‌‌ ಭಾವಚಿತ್ರಕ್ಕೆ ಅವಮಾನಿಸಿದ ರಾಯಚೂರು ನ್ಯಾಯಾಧೀಶ ವರ್ಗಾವಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...