Homeಕರ್ನಾಟಕಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ'ಕುನ್ಹಾ ಆಯೋಗ ಶಿಫಾರಸು

ಕೋವಿಡ್ ಹಗರಣ : ಯಡಿಯೂರಪ್ಪ, ಶ್ರೀರಾಮುಲು ವಿರುದ್ದ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

- Advertisement -
- Advertisement -

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ ಕೋವಿಡ್ ಹಗರಣಕ್ಕೆ ಸಂಬಂಧಪಟ್ಟಂತೆ ಪಿಪಿಇ ಕಿಟ್ ಹಾಗೂ ಇತರೆ ಸಾಮಾಗ್ರಿಗಳ ಖರೀದಿಯಲ್ಲಿ ಅಕ್ರಮ ನಡೆದಿರುವುದು ದೃಢಪಟ್ಟಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗ ಹೇಳಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಮಾಜಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ವಿರುದ್ಧ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿದೆ ಎಂದು ವರದಿಯಾಗಿದೆ.

2020ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಸೋಂಕು ನಿಭಾಯಿಸುವಲ್ಲಿ 7 ಸಾವಿರ ಕೋಟಿ ರೂಪಾಯಿಗೂ ಅಧಿಕ ಅಕ್ರಮ ನಡೆದಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗ 2024ರ ಆಗಸ್ಟ್ 31ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ತಿಳಿಸಿತ್ತು.

ಚೀನಾದ ಸಂಸ್ಥೆಗಳಿಂದ 3 ಲಕ್ಷ ಪಿಪಿಇ ಕಿಟ್‌ಗಳನ್ನು ನೇರವಾಗಿ ಖರೀದಿಸುವ ಕುರಿತು ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆದೇಶಿಸಿದ್ದರು. ಎರಡು ಚೀನಾ ಸಂಸ್ಥೆಗಳಿಂದ ಪಿಪಿಇ ಕಿಟ್‌ಗಳನ್ನು ದುಬಾರಿ ದರದಲ್ಲಿ ಕೊಂಡುಕೊಳ್ಳಲಾಗಿದೆ ಎಂಬುವುದು ಬಯಲಾಗಿದೆ. ಆದ್ದರಿಂದ ಯಡಿಯೂರಪ್ಪ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ ಶ್ರೀರಾಮುಲು ವಿರುದ್ದ ಕಾನೂನು ಜರುಗಿಸಲು ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗ ಶಿಫಾರಸು ಮಾಡಿದೆ ಎಂದು ಈದಿನ.ಕಾಂ ವರದಿ ಮಾಡಿದೆ.

ಇದನ್ನೂ ಓದಿ : ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ರೈತರು 3 ತಿಂಗಳು ದುಡಿದು, 9 ತಿಂಗಳು ಮದ್ಯ ಕುಡಿದು-ಜೂಜಾಟದಲ್ಲಿ ಮುಳುಗಿರುತ್ತಾರೆ”: ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ ವಿವಾದಿತ ಹೇಳಿಕೆ!

ತಮ್ಮ ಅಸಂಸದೀಯ ಹಾಗೂ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಪದೇಪದೇ ಸುದ್ದಿಯಾಗುವ ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ, ದೇಶದ ಅನ್ನದಾತರ ವಿರುದ್ಧ ನಾಲಿಗೆ ಹರಿಬಿಟ್ಟು ಮತ್ತೆ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದಾರೆ....

ತಪ್ಪದ ದೋಷಾರೋಪ ಭೀತಿ : ಎರಡು ಯುದ್ಧಗಳ ದಾಳ ಉರುಳಿಸಿದರೂ ಹೆಗ್ಸೆತ್‌ ರಕ್ಷಿಸಲು ಟ್ರಂಪ್‌ ವಿಫಲ

'ಎರಡು ಯುದ್ಧಗಳನ್ನು ಗೆದ್ದಿದ್ದಾರೆ' ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಾದವು, ಯುಎಸ್ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ವಿರುದ್ಧ ತೀವ್ರಗೊಳ್ಳುತ್ತಿರುವ ದೋಷಾರೋಪ ಪ್ರಕ್ರಿಯೆಯ ಒತ್ತಡವನ್ನು ಕಡಿಮೆ ಮಾಡುವಲ್ಲಿ ವಿಫಲವಾಗಿದೆ ಎಂದು ವರದಿಯಾಗಿದೆ....

ಶಿವಮೊಗ್ಗ: ರೈಲು ಶೌಚಾಲಯದಲ್ಲಿ ನೀರಿಲ್ಲದೆ ಪರದಾಡಿದ್ದ ಕುಟುಂಬ, ಇಬ್ಬರು ಸ್ಟೇಷನ್ ಮಾಸ್ಟರ್‌ಗಳಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ!

ರೈಲಿನ ಶೌಚಾಲಯಗಳಲ್ಲಿ ನೀರಿನ ಸೌಲಭ್ಯವಿಲ್ಲದೆ ಪ್ರಯಾಣಿಕರು ಅರ್ಧದಲ್ಲೇ ಪ್ರಯಾಣ ಮೊಟಕುಗೊಳಿಸಿದ ಘಟನೆಯನ್ನು 'ಸೇವೆಯಲ್ಲಾದ ನ್ಯೂನತೆ' ಎಂದು ಪರಿಗಣಿಸಿರುವ ಶಿವಮೊಗ್ಗ ಜಿಲ್ಲಾ ಗ್ರಾಹಕರ ಆಯೋಗವು ರೈಲ್ವೆ ಇಲಾಖೆಗೆ ದಂಡ ವಿಧಿಸಿದೆ. ಯಶವಂತಪುರ ಮತ್ತು ತುಮಕೂರು...

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶಕ್ಕೆ ಮರಳಿದರೆ ಗಲ್ಲಿಗೇರಿಸುವುದು ಖಚಿತ: ಪ್ರಾಸಿಕ್ಯೂಟರ್ ಎಚ್ಚರಿಕೆ; ಮೇಲ್ಮನವಿಗೂ ಅವಕಾಶ ಮುಕ್ತಾಯ

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ದೇಶಕ್ಕೆ ಮರಳಿದರೆ ಮರಣದಂಡನೆ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಭಾರತದಲ್ಲಿ ಸ್ವಯಂ ದೇಶಭ್ರಷ್ಟರಾಗಿ ನೆಲೆಸಿರುವ ಹಸೀನಾ ಅವರಿಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸುವ...

ವಯನಾಡ್‌: ಹಿಂದೂ ವೃದ್ದೆಯ ಅಂತ್ಯಕ್ರಿಯೆ ನೆರವೇರಿಸಿದ ಮುಸ್ಲಿಂ ಸಹೋದರರು

ಧಾರ್ಮಿಕ ಗಡಿಗಳನ್ನು ಮೀರಿ, ಕೇರಳದ ಬೆಟ್ಟ ಪ್ರದೇಶದಲ್ಲಿ ಇಬ್ಬರು ಮುಸ್ಲಿಂ ಸಹೋದರರು, ತಾವು ಸುಮಾರು ಐದು ದಶಕಗಳ ಕಾಲ ತಾಯಿಯಂತೆ ಪ್ರೀತಿಸಿ ಆರೈಕೆ ಮಾಡಿದ್ದ 85 ವರ್ಷದ ಹಿಂದೂ ಮಹಿಳೆಯೊಬ್ಬರ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ. ಮುಪ್ಪೈನಾದ್...

ಆರು ವರ್ಷಗಳ ಜೈಲು ವಾಸದ ಬಳಿಕ ಇಬ್ಬರು ಮುಸ್ಲಿಂ ಯುವಕರು ಖುಲಾಸೆ: ಯುಎಪಿಎ ಪ್ರಕರಣದಲ್ಲಿನ ಲೋಪದೋಷಗಳನ್ನು ಎತ್ತಿ ತೋರಿಸಿದ ಕೋರ್ಟ್

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿ ಬಂಧಿತರಾಗಿ ಆರು ವರ್ಷಗಳಿಂದ ಜೈಲಿನಲ್ಲಿ ನರಳುತ್ತಿದ್ದ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಇಬ್ಬರು ಯುವಕರನ್ನು ವಿಶೇಷ ನ್ಯಾಯಾಲಯ 2026ರ ನವೆಂಬರ್ 5ರಂದು ದೋಷಮುಕ್ತಗೊಳಿಸಿದೆ ಎಂದು...

ಉತ್ತರ ಪ್ರದೇಶದ ಜೈಲುಗಳಲ್ಲಿ ಮಿತಿಮೀರಿದ ಜನಸಂದಣಿ: ಡಿಜಿ ಪ್ರಿಸನ್ಸ್‌ಗೆ ವಿವರವಾದ ಅಫಿಡವಿಟ್ ಸಲ್ಲಿಸಲು ಅಲಹಾಬಾದ್ ಹೈಕೋರ್ಟ್‌ ಆದೇಶ!

ಉತ್ತರ ಪ್ರದೇಶದಾದ್ಯಂತ ಇರುವ ಜೈಲುಗಳಲ್ಲಿ ನಿಗದಿತ ಸಾಮರ್ಥ್ಯಕ್ಕಿಂತ ಮಿತಿಮೀರಿ ಕೈದಿಗಳನ್ನು ಬಂದೀಖಾನೆಯಲ್ಲಿಡಲಾಗಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ರಾಜ್ಯದ ಜೈಲುಗಳ ಅತಿಯಾದ ಜನಸಂದಣಿ ಮತ್ತು ನೈಜ ಸ್ಥಿತಿಗತಿ...

ಕರ್ನಾಟಕ ಸರ್ಕಾರದ ಇ30 ಆರೋಪಕ್ಕೆ ಅಂಕಿ-ಅಂಶಗಳ ಮೂಲಕ ಭಾರತ್ ಪೆಟ್ರೋಲಿಯಂ ತಿರುಗೇಟು; ಬಳಿಕ ಟ್ವೀಟ್ ಅಳಿಸಿದ ಕಂಪನಿ!

ಕರ್ನಾಟಕ ಸರ್ಕಾರದ ಇ20 ಪೆಟ್ರೋಲ್ ಕುರಿತ ಗಂಭೀರ ಆರೋಪಗಳಿಗೆ ತಿರುಗೇಟು ನೀಡಲು ಭಾರತ್ ಪೆಟ್ರೋಲಿಯಂ (ಬಿಪಿಸಿಎಲ್‌) ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ‘MythVsFact’ (ಮಿಥ್ಯೆ ಮತ್ತು ವಾಸ್ತವ) ಅಭಿಯಾನ ನಡೆಸುತ್ತಿದೆ. ಆದರೆ, ಈ ಅಭಿಯಾನದ...

ಖಾಸಗಿ ಶಾಲೆಗಳ ಅನುಮೋದನೆಗೆ ಹಣ ವಸೂಲಿ ಹಗರಣ: ಡಿಎಂಕೆ ಮಾಜಿ ಸಚಿವ ಅನ್ಬಿಲ್ ಮಹೇಶ್‌ಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಚೆನ್ನೈ: ತಮಿಳುನಾಡಿನಲ್ಲಿ ಖಾಸಗಿ ಶಾಲೆಗಳಿಗೆ ಅನುಮೋದನೆ ನೀಡುವ ಪ್ರಕ್ರಿಯೆಯಲ್ಲಿ ಹಣ ವಸೂಲಿ ಮತ್ತು ಅಕ್ರಮ ಹಣ ವರ್ಗಾವಣೆ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಡಿಎಂಕೆ ಮಾಜಿ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೋಳಿ ಅವರಿಗೆ...

ಸಾಮಾಜಿಕ ಜಾಲತಾಣದಲ್ಲಿ ದಲಿತ ವಿರೋಧಿ ಪೋಸ್ಟ್: ಐಐಟಿ ಪಾಟ್ನಾ ರಿಜಿಸ್ಟ್ರಾರ್ ವಿರುದ್ಧ ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಎಫ್‌ಐಆರ್

ದಲಿತ ಸಮುದಾಯದ ಕುರಿತು ಅವಹೇಳನಕಾರಿ ಸಾಮಾಜಿಕ ಜಾಲತಾಣ ಪೋಸ್ಟ್ ಹಂಚಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಐಐಟಿ ಪಟ್ನಾದ ರಿಜಿಸ್ಟ್ರಾರ್ ಅವಲೇಂದರ್ ಕುಮಾರ್ ಠಾಕೂರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಕೆಲವು ವಾರಗಳ...