Homeಕರೋನಾ ತಲ್ಲಣಕೊರೊನಾ 3ನೇ ಅಲೆಯಲ್ಲಿ ರಾಜ್ಯದಲ್ಲಿ 3.4 ಲಕ್ಷ ಮಕ್ಕಳಿಗೆ ಸೋಂಕು ಸಾಧ್ಯತೆ: ತಜ್ಞರ ಸಮಿತಿ

ಕೊರೊನಾ 3ನೇ ಅಲೆಯಲ್ಲಿ ರಾಜ್ಯದಲ್ಲಿ 3.4 ಲಕ್ಷ ಮಕ್ಕಳಿಗೆ ಸೋಂಕು ಸಾಧ್ಯತೆ: ತಜ್ಞರ ಸಮಿತಿ

- Advertisement -
- Advertisement -

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯು ಇಳಿಕೆಯಾಗುತ್ತಿದ್ದು, ಅನ್‌ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಆದರೆ, 3ನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದ್ದು, ರಾಜ್ಯದಲ್ಲಿ 3.4 ಲಕ್ಷ ಮಕ್ಕಳು ಸೋಂಕಿಗೆ ತುತ್ತಾಗುವ ಸಾಧ್ಯತೆ ಇದೆ ಎಂದು ತಜ್ಞರ ಸಮಿತಿ ಎಚ್ಚರಿಸಿದೆ.

ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದ್ದು, ಇದಕ್ಕಾಗಿ ಮಕ್ಕಳ ಆರೈಕೆಗಾಗಿ ವಿಶೇಷ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೃದ್ರೋಗ ತಜ್ಞ ಡಾ.ದೇವಿ ಪ್ರಸಾದ್‌ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ಎಚ್ಚರಿಸಿದೆ.

ಹೃದ್ರೋಗ ತಜ್ಞ ಡಾ.ದೇವಿ ಪ್ರಸಾದ್‌ ಶೆಟ್ಟಿ ನೇತೃತ್ವದ 16 ಸದಸ್ಯರನ್ನು ಒಳಗೊಂಡ ತಜ್ಞರ ಸಮಿತಿ ಕೊರೊನಾ 3ನೇ ಅಲೆಯ ಬಗ್ಗೆ ಆತಂಕ ವ್ಯಕ್ತಪಡಿಸಿದೆ. 91 ಪುಟಗಳ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುವ ಸಮಿತಿ, ಹಲವಾರು ಶಿಫಾರಸ್ಸುಗಳನ್ನು ಮಾಡಿದೆ.

ರಾಜ್ಯದಲ್ಲಿ ಅಕ್ಟೋಬರ್‌ ಅಥವಾ ನವೆಂಬರ್‌ ತಿಂಗಳಿನಲ್ಲಿ ಕೋವಿಡ್ ಮೂರನೇ ಅಲೆ ಉಲ್ಬಣಿಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ 0-18 ವರ್ಷ ವಯ್ಸಸಿನ 32.21 ಲಕ್ಷ ಮಕ್ಕಳಿದ್ದಾರೆ. ಈ ಪೈಕಿ, 45,958 ಮಕ್ಕಳು ಸೋಂಕಿಗೆ ತುತ್ತಾಗಲಿದ್ದಾರೆ. ರಾಜ್ಯದಾದ್ಯಂತ 0-18 ವರ್ಷ ವಯಸ್ಸಿನ 2.38 ಕೋಟಿ ಜನಸಂಖ್ಯೆಯಲ್ಲಿ 3.4 ಲಕ್ಷ ಮಕ್ಕಳು ಸೋಂಕಿಗೆ ಒಳಗಾಗುವ ಸಾಧ್ಯತೆ ಇದೆ ಎಂದು ಸಮಿತಿ ಅಂದಾಜಿಸಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಅನ್‌ಲಾಕ್‌ 2.0: ಸಾರಿಗೆ ಸಂಚಾರ, ಸಂಜೆ 5 ರವರೆಗೆ ಅಂಗಡಿ, ಬಾರ್‌, ಹೋಟೆಲ್ ಓಪನ್

ಬೆಂಗಳೂರಿನಲ್ಲಿ ಮಕ್ಕಳಿಗೆ 3,677 ಹಾಸಿಗೆಗಳ ಅವಶ್ಯಕತೆಯಿದೆ. ಅದರಲ್ಲಿ 1,838 ಐಸಿಯು ಮತ್ತು ಎಚ್‌ಡಿಯು (ಹೈ ಡಿಪೆಂಡೆನ್ಸಿ ಯುನಿಟ್) ಹಾಸಿಗೆಗಳು ಇರಬೇಕಾಗುತ್ತದೆ. ಅಲ್ಲದೆ, ಹೆಚ್ಚುವರಿಯಾಗಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 7,353 ಹಾಸಿಗೆಗಳು ಬೇಕಾಗುತ್ತವೆ ಎಂದು ಸಮಿತಿ ಅಂದಾಜಿಸಲಾಗಿದೆ.

ಉಳಿದಂತೆ ರಾಜ್ಯಾದ್ಯಂತ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 27,205 ಹಾಸಿಗೆಗಳು, 13,602 ಐಸಿಯು ಹಾಗೂ 54,409 ಎಚ್‌ಡಿಯು ಹಾಸಿಗೆಗಳು ಬೇಕಾಗುತ್ತವೆ ಎಂದು ಸಮಿತಿ ಸೂಚಿಸಿದೆ. ಬಾಲ ಆರೈಕೆ ಸುರಕ್ಷಾ ಕೇಂದ್ರಗಳನ್ನು ಸ್ಥಾಪಿಸಲು ಸಲಹೆ ನೀಡಿದೆ.

ಸಮಿತಿ ವರದಿಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ‘ತಜ್ಞರ ಸಮಿತಿ ಅಂತಿಮ ವರದಿ ಆಧರಿಸಿ 45 ದಿನಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ’ ಎಂದು ಹೇಳಿದ್ದಾರೆ.

ಕೊರೊನಾ ಎರಡನೇ ಅಲೆಯ ಆರಂಭದ ಒಂದು ತಿಂಗಳು ಇಡೀ ದೇಶವೇ ತತ್ತರಿಸಿ ಹೋಗಿತ್ತು. ಆಕ್ಸಿಜನ್‌, ಬೆಡ್ ಕೊರತೆಯಿಂದಾಗಿ ಸಾವಿರಾರು ಜನರು ಪ್ರಾಣ ಕಳೆದುಕೊಂಡರು. ರಾಜ್ಯದಲ್ಲಿಯೂ ಬೆಡ್‌ಗ ಸಮಸ್ಯೆ ವಿಪರಿತವಾಗಿತ್ತು. ರಾಜಕೀಯ ಪಕ್ಷಗಳು ಕೊರೊನಾ ಬಿಕ್ಕಟ್ಟನ್ನು ತಮಗೆ ಅನುಕೂಲವಾಗುವಂತೆ ಮಾಡಿಕೊಳ್ಳಲು ಪ್ರಯತ್ನಿಸಿದ್ದು ವಿಪರ್ಯಾಸ. ಸದ್ಯ ಮಕ್ಕಳ ಬಗ್ಗೆ ಜಾಗ್ರತೆ ವಹಿಸಿ ಎಂದು ತಜ್ಷರ ಸಮಿತಿ ಎಚ್ಚರಿಸಿದೆ. ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆಯೇ ಕಾದು ನೋಡಬೇಕಿದೆ.


ಇದನ್ನೂ ಓದಿ: ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...