Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಿ ಅಪ್ಪಳಿಸಲಿರುವ ಕೋವಿಡ್ ಮೂರನೇ ಅಲೆ: ಹೆಚ್ಚಿನ ಪ್ರಕರಣಗಳ ಸಾಧ್ಯತೆ

ಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಿ ಅಪ್ಪಳಿಸಲಿರುವ ಕೋವಿಡ್ ಮೂರನೇ ಅಲೆ: ಹೆಚ್ಚಿನ ಪ್ರಕರಣಗಳ ಸಾಧ್ಯತೆ

ಆಗಸ್ಟ್ - ಸೆಪ್ಟಂಬರ್‌ ತಿಂಗಳಿನಲ್ಲಿ ಕರ್ನಾಟಕ ರಾಜ್ಯಕ್ಕೆ ಮೂರನೇ ಅಲೆ ಅಪ್ಪಳಿಸಬಹುದೆಂದು ಅಂದಾಜಿಸಲಾಗಿದೆ.

- Advertisement -
- Advertisement -

ಇಡೀ ರಾಷ್ಟ್ರ ಕೋವಿಡ್ ಎರಡನೇ ಅಲೆಯಿಂದ ಚೇತರಿಸಿಕೊಳ್ಳುತ್ತಿದೆ. ಪ್ರಕರಣಗಳ ಸಂಖ್ಯೆ ಇಳಿಯುತ್ತಿರುವುದರಿಂದ ನಿಟ್ಟುಸಿರು ಬಿಡುವಂತಾಗಿರುವ ಸಮಯದಲ್ಲಿಯೇ ಮಹಾರಾಷ್ಟ್ರದಲ್ಲಿ 2-4 ವಾರಗಳಲ್ಲಯೇ ಕೋವಿಡ್ ಮೂರನೇ ಅಲೆ ಅಪ್ಪಳಿಸಲಿದ್ದು ಡೆಲ್ಟಾ ಪ್ಲಸ್ ಎಂಬ ಭಿನ್ನರೂಪದ ವೈರಸ್ ಹೆಚ್ಚಿನ ಪ್ರಕರಣಗಳನ್ನು ಹರಡುವ ಸಾಧ್ಯತೆಯಿದೆ ಎಂದು ಮಹಾರಾಷ್ಟ್ರ ಸರ್ಕಾರ ರಚಿಸಿದ ಟಾಸ್ಕ್‌ ಫೋರ್ಸ್‌ ಅಭಿಪ್ರಾಯಪಟ್ಟಿದೆ.

ಈ ಕುರಿತು ಹೆಚ್ಚಿನ ಮಾಹಿತಿ ಪಡೆದುಕೊಂಡಿರುವ ಸಿಎಂ ಉದ್ಧವ್ ಠಾಕ್ರೆ ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳೆರಡರಲ್ಲೂ ಅಗತ್ಯ ಔಷಧಿಗಳು ಮತ್ತು ಆರೋಗ್ಯ ಸಲಕರಣೆಗಳ ಲಭ್ಯತೆಯನ್ನು ಖಾತ್ರಿಪಡಿಸಿಕೊಳ್ಳುವಂತೆ ಹಿರಿಯ ವೈದ್ಯರಿಗೆ ನಿರ್ದೇಶನ ನೀಡಿದ್ದಾರೆ.

ಡೆಲ್ಟಾ ವೇರಿಯೆಂಟ್‌ನಿಂದಾಗಿ ಕೋವಿಡ್ ಎರಡನೇ ಅಲೆಯು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚಿನ ಪ್ರಕರಣಗಳು ಕಂಡಬಂದಿದ್ದವು. ಹಾಗಾಗಿ ಈಗ ಮೂರನೇ ಅಲೆಯ ‘ಡೆಲ್ಟಾ ಪ್ಲಸ್ ವೇರಿಯೆಂಟ್’ ಇನ್ನು ಹೆಚ್ಚಿನ ಪ್ರಕರಣಗಳನ್ನು ದಾಖಲಿಸುವ ಸಾಧ್ಯತೆಯಿದೆಯೆಂದು ರಾಜ್ಯ ಆರೋಗ್ಯ ಇಲಾಖೆ ಅಂದಾಜಿಸಿದೆ. ಆಗಸ್ಟ್ ಸೆಪ್ಟಂಬರ್ ವೇಳೆಗೆ ಮೂರನೇ ಅಲೆ ಸಾಧ್ಯತೆಯನ್ನು ಊಹಿಸಲಾಗಿತ್ತು. ಆದರೆ ಅದಕ್ಕೂ 2- 4 ವಾರಗಳ ಮುಂಚೆಯೇ ಅದು ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.

ಎರಡನೆ ಅಲೆಗೆ ಹೋಲಿಸಿದರೆ ಮೂರನೇ ಅಲೆಯಲ್ಲಿ ಪ್ರಕರಣಗಳ ಸಂಖ್ಯೆ ದ್ವಿಗುಣವಾಗುವ ಸಾಧ್ಯತೆಯಿದೆ. ರಾಜ್ಯ 8 ಲಕ್ಷ ಸಕ್ರಿಯ ಪ್ರಕರಣಗಳನ್ನು ಎದುರಿಸಬೇಕಾಗಬಹುದು ಮತ್ತು ಅದರಲ್ಲಿ ಶೇ.10 ರಷ್ಟು ಮಕ್ಕಳು ಸೇರಿರುತ್ತಾರೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಮಹರಾಷ್ಟ್ರವು ಕೋವಿಡ್ ಮೊದಲ ಅಲೆಯಲ್ಲಿ 19 ಲಕ್ಷ ಪ್ರಕರಣಗಳನ್ನು ದಾಖಲಿಸಿದ್ದರೆ ಎರಡನೇ ಅಲೆಯಲ್ಲಿ 40 ಲಕ್ಷಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿತ್ತು.

ಕೋವಿಡ್ ಮೂರನೇ ಅಲೆ ಎದುರಿಸಲು ಆರೋಗ್ಯ ಇಲಾಖೆ ಮತ್ತು ಮುಖ್ಯಮಂತ್ರಿಗಳು ಸಭೆ ನಡೆಸಿದ್ದಾರೆ. ಸಾಮಾಜಿಕ ಅಂತರದ ನಿಯಮಗಳನ್ನು ಪಾಲಿಸುವುದು, ಆರ್‌ಪಿಸಿಆರ್ ಟೆಸ್ಟ್‌ಗಳನ್ನು ಮಾಡಿಸಿಕೊಳ್ಳುವುದನ್ನು ಜನರು ಪಾಲಿಸಬೇಕು. ಆಗಸ್ಟ್ ಸೆಪ್ಟಂಬರ್‌ ವೇಳೆಗೆ ರಾಜ್ಯಕ್ಕೆ ಹೆಚ್ಚಿನ ಲಸಿಕೆಗಳು ಲಭ್ಯವಾಗಲಿದ್ದು ಸಾಧ್ಯವಾದಷ್ಟು ಜನರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಉದ್ಧವ್‌ ಠಾಕ್ರೆ ಮನವಿ ಮಾಡಿದ್ದಾರೆ.

ಕರ್ನಾಟಕದ ಪರಿಸ್ಥಿತಿ

ಕೋವಿಡ್ ಎರಡನೇ ಅಲೆ ಮಹಾರಾಷ್ಟ್ರಕ್ಕೆ ಅಪ್ಪಳಿಸಿದ ಕೆಲ ದಿನಗಳ ನಂತರವಷ್ಟೇ ಕರ್ನಾಟಕವನ್ನು ಆಕ್ರಮಿಸಿತ್ತು. ಈ ಬಾರಿ ಆಗಸ್ಟ್ – ಸೆಪ್ಟಂಬರ್‌ ತಿಂಗಳಿನಲ್ಲಿ ರಾಜ್ಯಕ್ಕೆ ಮೂರನೇ ಅಲೆಯನ್ನು ನಿರೀಕ್ಷಿಸಲಾಗಿದ್ದು, ಅಕ್ಟೋಬರ್ – ನವೆಂಬರ್ ವೇಳೆಗೆ ಅದು ಇಳಿಮುಖವಾಗಲಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರ ನೇಮಿಸಿರುವ ಕಾರ್ಯಪಡೆಯ ಸದಸ್ಯರು ತಿಳಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಟಾಸ್ಕ್‌ ಫೋರ್ಸ್‌ನ ಸದಸ್ಯರಾದ ಡಾ. ಪ್ರದೀಪ್‌ರವರು “ರಾಜ್ಯದಲ್ಲಿ ಡೆಲ್ಟಾ ವೇರಿಯೆಂಟ್ ಕುರಿತು ಕಣ್ಗಾವಲು ಇಡಲು ಆರು ಕಡೆ ಕಾರ್ಯನಿರತರಾಗಿದ್ದೇವೆ. ಆಗಸ್ಟ್-ಸೆಪ್ಟಂಬರ್ ವೇಳೆಗೆ ಮೂರನೇ ಅಲೆ ಅಪ್ಪಳಿಸಬಹುದು ಎಂದು ಅಂದಾಜಿಸಿದ್ದೇವೆ. ಆದರೆ ಡೆಲ್ಟಾ ವೇರಿಯೆಂಟ್‌ ಬರುತ್ತಾ ಅಥವಾ ಬೇರೆಯದು ಬರುತ್ತಾ ಗೊತ್ತಿಲ್ಲ. ಹಳೆ ಸ್ಟ್ರೈನ್ ಅಂತೂ ಬರುವ ಸಾಧ್ಯತೆಯಿದೆ. ನಮ್ಮಲ್ಲಿ ಬೇರೆ ವೇರಿಯೆಂಟ್‌ಗಳು ಇರುವುದರಿಂದ ಎಲ್ಲದರ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ” ಎಂದರು.

ಮೂರನೇ ಅಲೆ ಬರುವುದು ಖಚಿತ. ಅದಕ್ಕಾಗಿ ಈಗಿನಿಂದಲೇ ಸಿದ್ದತೆ ನಡೆಸಬೇಕಿದೆ. ಎರಡನೇ ಅಲೆಯಲ್ಲಿ ಮಾಡಿದ ತಪ್ಪುಗಳಿಂದ ಎಲ್ಲಾ ರಾಜ್ಯಗಳು ಮತ್ತು ಸರ್ಕಾರಗಳು ಪಾಠ ಕಲಿಯಬೇಕಿದೆ. ಬೆಡ್‌ಗಳು, ಆಮ್ಲಜನಕ ಮತ್ತು ಔಷಧಿಗಳಿಗಾಗಿ ಜನ ಪರದಾಡದೇ ವೈಜ್ಞಾನಿಕವಾಗಿ ಮೂರನೇ ಅಲೆಯನ್ನು ಹೆಚ್ಚಿನ ಸಾವು-ನೋವುಗಳಿಲ್ಲದೆ ಎದುರಿಸಬೇಕಾದ ಅನಿವಾರ್ಯತೆ ಇದೆ.


ಇದನ್ನೂ ಓದಿ: ಕೊರೊನಾ 3ನೇ ಅಲೆ ಎದುರಿಸಲು ದೆಹಲಿ ಸಿದ್ಧತೆ: 5,000 ಯುವಜನರಿಗೆ ವೈದ್ಯಕೀಯ ತರಬೇತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...