Homeಕೊರೊನಾ7 ತಿಂಗಳಲ್ಲಿ ಮೊದಲ ಬಾರಿಗೆ ದೇಶದಲ್ಲಿ ಲಕ್ಷ ಗಡಿ ದಾಟಿದ ಕೊರೊನಾ ಪ್ರಕರಣಗಳು

7 ತಿಂಗಳಲ್ಲಿ ಮೊದಲ ಬಾರಿಗೆ ದೇಶದಲ್ಲಿ ಲಕ್ಷ ಗಡಿ ದಾಟಿದ ಕೊರೊನಾ ಪ್ರಕರಣಗಳು

- Advertisement -
- Advertisement -

ಕಳೆದ ಏಳು ತಿಂಗಳಲ್ಲಿ ದೇಶದಲ್ಲಿ ಮೊದಲ ಬಾರಿಗೆ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದೆ. ಜೂನ್ 6, 2021 ರಂದು, ದೇಶದಲ್ಲಿ 1,14,460 ಹೊಸ ಪ್ರಕರಣಗಳು ವರದಿಯಾಗಿದ್ದವು. ಕಳೆದ 24 ಗಂಟೆಗಳಲ್ಲಿ (ಗುರುವಾರ) 1,17,100 ಹೊಸ ಪ್ರಕರಣಗಳು ವರದಿಯಾಗಿವೆ. ಬುಧವಾರ ದಾಖಲಾಗಿದ್ದ ಪ್ರಕರಣಗಳಿಗೆ ಹೋಲಿಸಿದರೆ ಇದು ಶೇಕಡಾ 28 ರಷ್ಟು ಏರಿಕೆಯಾಗಿದೆ.

ಓಮಿಕ್ರಾನ್ ಆತಂಣಕದೊಂದಿಗೆ ಕೊರೊನಾ ಪ್ರಕರಣಗಳು ವೇಗವಾಗಿ ಹರಡುತ್ತಿದ್ದು, ದೇಶದ 27 ರಾಜ್ಯಗಳಲ್ಲಿ ಓಮಿಕ್ರಾನ್ ರೂಪಾಂತರ ವರದಿಯಾಗಿದೆ.

ಕಳೆದ 24 ಗಂಟೆಗಳಲ್ಲಿ 377 ಓಮಿಕ್ರಾನ್ ಪ್ರಕರಣಗಳು ದಾಖಲಾಗಿವೆ. ಇದೊಂದಿಗೆ ಸೋಂಕಿತರ ಸಂಖ್ಯೆ 3,007ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ 876 ಪ್ರಕರಣಗಳು, ದೆಹಲಿಯಲ್ಲಿ 465 ಓಮಿಕ್ರಾನ್ ರೂಪಾಂತರದ ಪ್ರಕರಣಗಳಿವೆ.

ಇದನ್ನೂ ಓದಿ: ಯುಪಿ ಚುನಾವಣೆ: ಎಲ್ಲಾ ಚುನಾವಣಾ ರ್‍ಯಾಲಿಗಳನ್ನು ರದ್ದುಗೊಳಿಸಿದ ಕಾಂಗ್ರೆಸ್

ಕೋವಿಡ್ ಸಾಂಕ್ರಾಮಿಕ ರೋಗದಿಂದ ಹೆಚ್ಚು ಹಾನಿಗೊಳಗಾಗಿರುವ ರಾಜ್ಯಗಳಲ್ಲಿ ಒಂದಾದ ಮಹಾರಾಷ್ಟ್ರದಲ್ಲಿ 36,265 ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಮುಂಬೈ ಒಂದರಲ್ಲೇ 20,181 ಕೇಸ್ ವರದಿಯಾಗಿದೆ. ಮುಂಬೈನಲ್ಲಿ ಲಾಕ್‌ಡೌನ್ ಹೇರುವ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 5,031 ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಬೆಂಗಳೂರು ಒಂದರಲ್ಲೇ 4,324 ಪ್ರಕರಣಗಳಿವೆ.

ಇತ್ತ, ಚುನಾವಣಾ ಆಯೋಗವು ಚುನಾವಣೆ ನಡೆಯಲಿರುವ ಪಂಚ ರಾಜ್ಯಗಳಲ್ಲಿ ಕೊರೊನಾ ಪರಿಸ್ಥಿತಿ ಮತ್ತು ’ಕಾನೂನು ಮತ್ತು ಸುವ್ಯವಸ್ಥೆ’ ಕುರಿತು ಗುರುವಾರ ಕೇಂದ್ರ ಆರೋಗ್ಯ ಮತ್ತು ಗೃಹ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದೆ. ಈ ಐದು ರಾಜ್ಯಗಳಲ್ಲಿ ಮತ ಜಾಲಾಯಿಸಲಿರುವ ಎಲ್ಲಾ ಅರ್ಹ ವ್ಯಕ್ತಿಗಳು ಶೇಕಡಾ 100 ರಷ್ಟು ಲಸಿಕೆ ಪಡೆದಿರಬೇಕು ಎಂದು ಒತ್ತಿ ಹೇಳಿದೆ.


ಇದನ್ನೂ ಓದಿ: RSS-BJP ರ್‍ಯಾಲಿ: ಕೇರಳ ಸಿಎಂ ಪಿಣರಾಯಿ ವಿರುದ್ಧ ಕೊಲೆ ಬೆದರಿಕೆ ಘೋಷಣೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...