Homeಕೊರೊನಾಬಲವಂತವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ: ಸುಪ್ರೀಂಗೆ ಕೇಂದ್ರದ ಹೇಳಿಕೆ

ಬಲವಂತವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ: ಸುಪ್ರೀಂಗೆ ಕೇಂದ್ರದ ಹೇಳಿಕೆ

- Advertisement -
- Advertisement -

ದೇಶದ ಯಾವುದೇ ವ್ಯಕ್ತಿಯ ಒಪ್ಪಿಗೆ ಪಡೆಯದೆ ಬಲವಂತವಾಗಿ ಲಸಿಕೆ ನೀಡುವ ಕೊರೊನಾ ಮಾರ್ಗಸೂಚಿಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿಲ್ಲ ಎಂದು ಒಕ್ಕೂಟ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

ಅಂಗವಿಕಲ ವ್ಯಕ್ತಿಗಳ ಮನೆ-ಮನೆಗೆ ಹೋಗಿ, ಆದ್ಯತೆಯ ಕೊರೊನಾ ಲಸಿಕೆಯನ್ನು ಹಾಕಬೇಕು ಎಂದು ಕೋರಿ ಎನ್‌ಜಿಒ ಎವಾರಾ ಫೌಂಡೇಶನ್ ಮಾಡಿದ ಮನವಿಗೆ ಪ್ರತಿಕ್ರಿಯೆಯಾಗಿ ಒಕ್ಕೂಟ ಸರ್ಕಾರ ಸಲ್ಲಿಸಿದ ಅಫಿಡವಿಟ್‌ನಲ್ಲಿ, ವ್ಯಕ್ತಿಯ ಒಪ್ಪಿಗೆ ಪಡೆಯದೇ ಲಸಿಕೆ ನೀಡುವುದಿಲ್ಲ ಎಂಬುದನ್ನು ಹೇಳಿದೆ.

ಕೊರೊನಾ ಲಸಿಕೆ ಪ್ರಮಾಣಪತ್ರಗಳನ್ನು ಪಡೆಯುವುದರಿಂದ ಅಂಗವಿಕಲ ವ್ಯಕ್ತಿಗಳಿಗೆ ವಿನಾಯಿತಿ ನೀಡುವ ವಿಷಯದ ಕುರಿತು ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯಿಸಿದ್ದು, ಯಾವುದೇ ಉದ್ದೇಶಕ್ಕಾಗಿ ಲಸಿಕೆ ಪ್ರಮಾಣಪತ್ರವನ್ನು ಕೊಂಡೊಯ್ಯುವುದನ್ನು ಕಡ್ಡಾಯಗೊಳಿಸುವ ಯಾವುದೇ ಮಾರ್ಗಸೂಚಿಯನ್ನು ಆರೋಗ್ಯ ಸಚಿವಾಲಯ ನೀಡಿಲ್ಲ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿದೆ.

ಇದನ್ನೂ ಓದಿ: ಮಕ್ಕಳಿಗೆ ಲಸಿಕೆ: ‘ಅವೈಜ್ಞಾನಿಕ’ ಎಂದ ಕೊವಾಕ್ಸಿನ್‌ ಪ್ರಯೋಗಗಳ ತನಿಖಾಧಿಕಾರಿ!

“ಭಾರತ ಸರ್ಕಾರ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಬಿಡುಗಡೆ ಮಾಡಿರುವ ನಿರ್ದೇಶನ ಮತ್ತು ಮಾರ್ಗಸೂಚಿಗಳಲ್ಲಿ ಸಂಬಂಧಪಟ್ಟ ವ್ಯಕ್ತಿಯ ಒಪ್ಪಿಗೆಯನ್ನು ಪಡೆಯದೆ ಯಾವುದೇ ಬಲವಂತದ ಲಸಿಕೆಯನ್ನು ನೀಡುವುದಿಲ್ಲ ಎಂದಿದೆ” ಎಂದು ತಿಳಿಸಲಾಗಿದೆ.

“ಹೆಚ್ಚುತ್ತಿರುವ ಸಾಂಕ್ರಾಮಿಕದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವ್ಯಾಕ್ಸಿನೇಷನ್ ಒಂದು ದೊಡ್ಡ ಸಾರ್ವಜನಿಕ ಹಿತಾಸಕ್ತಿಯಾಗಿದೆ” ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

“ದೇಶದ ಎಲ್ಲಾ ನಾಗರಿಕರು ಲಸಿಕೆಯನ್ನು ಪಡೆಯಬೇಕು ಎಂದು ಅದಕ್ಕೆ ಅನುಕೂಲವಾಗುವಂತೆ ವ್ಯವಸ್ಥೆಗಳು ಮತ್ತು ಪ್ರಕ್ರಿಯೆಗಳನ್ನು ವಿನ್ಯಾಸಗೊಳಿಸಲಾಗಿದೆ. ಈ ಬಗ್ಗೆ ವಿವಿಧ ಮುದ್ರಣ ಮತ್ತು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳ ಮೂಲಕ ಸಲಹೆ, ಜಾಹೀರಾತು ಮತ್ತು ಸಂವಹನ ನಡೆಸಲಾಗಿದೆ. ಆದರೂ ಯಾವುದೇ ವ್ಯಕ್ತಿಯನ್ನು ಅವರ ಇಚ್ಛೆಗೆ ವಿರುದ್ಧವಾಗಿ ಲಸಿಕೆ ಹಾಕಿಸಿಕೊಳ್ಳುವಂತೆ ಒತ್ತಾಯಿಸುವುದಿಲ್ಲ” ಎಂದು ಸಚಿವಾಲಯ ಹೇಳಿದೆ.


ಇದನ್ನೂ ಓದಿ: ಲಸಿಕೆ ಪಡೆದ ಮೂರು ತಿಂಗಳ ನಂತರ ಕೋವಿಶೀಲ್ಡ್ ರಕ್ಷಣೆ ಕ್ಷೀಣಿಸುತ್ತದೆ- ದಿ ಲ್ಯಾನ್ಸೆಟ್ ಅಧ್ಯಯನದ ವರದಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...