Homeಮುಖಪುಟಗೋವಿನ ಸೆಗಣಿ, ಮೂತ್ರ ಕೊರೊನಾಗೆ ಮದ್ದಲ್ಲ ಎಂದ ಪತ್ರಕರ್ತರ ವಿರುದ್ದ NSA ಅಡಿ ಪ್ರಕರಣ ದಾಖಲು!

ಗೋವಿನ ಸೆಗಣಿ, ಮೂತ್ರ ಕೊರೊನಾಗೆ ಮದ್ದಲ್ಲ ಎಂದ ಪತ್ರಕರ್ತರ ವಿರುದ್ದ NSA ಅಡಿ ಪ್ರಕರಣ ದಾಖಲು!

- Advertisement -
- Advertisement -

ಕಳೆದ ವಾರ ಮಣಿಪುರದ ಬಿಜೆಪಿ ಮುಖ್ಯಸ್ಥ ಎಸ್.ಟಿಕೇಂದ್ರ ಸಿಂಗ್ ಕೊರೊನಾದಿಂದ ನಿಧನರಾಗಿದ್ದರು. ಅವರ ನಿಧನಕ್ಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಹಾಸ್ಯ ಮಾಡಿದ್ದಾರೆ ಎಂದು ಆರೋಪಿಸಿ ಪತ್ರಕರ್ತ ಕಿಶೋರ್‌ಚಂದ್ರ ವಾಂಗ್ಖೇಮ್ ಮತ್ತು ಸಾಮಾಜಿಕ ಹೋರಾಟಗಾರ ಎರೆಂಡ್ರೊ ಲೈಚೋಂಬಮ್ ವಿರುದ್ಧ ಮಣಿಪುರ ಪೊಲೀಸರು ರಾಷ್ಟ್ರೀಯ ಭದ್ರತಾ ಕಾಯ್ದೆ(NSA) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಇಬ್ಬರು ಟೀಕೇಂದ್ರ ಅವರ ಸಾವಿಗೆ ಸಂತಾಪ ಸೂಚಿಸುವ ಫೇಸ್‌ಬುಕ್‌ ಪೋಸ್ಟ್‌‌ನಲ್ಲಿ, ‘ಗೋವಿನ ಸೆಗಣಿ ಅಥವಾ ಮೂತ್ರ ಕೊರೊನಾ ಸೋಂಕಿಗೆ ಪರಿಹಾರವಲ್ಲ’ ಎಂದು ಬರೆದಿದ್ದರು. ಇದರ ನಂತರ ಈ ಇಬ್ಬರನ್ನು ಗುರುವಾರ ಬಂಧಿಸಲಾಗಿತ್ತು.

ಇದನ್ನೂ ಓದಿ: ದೆಹಲಿಯಲ್ಲಿ ಕೋವಿಡ್‌ನಿಂದ ಅನಾಥರಾದ ಮಕ್ಕಳಿಗೆ ಉಚಿತ ಶಿಕ್ಷಣ: ಅರವಿಂದ್ ಕೇಜ್ರಿವಾಲ್

ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಉಷಮ್ ದೇಬನ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಪಿ. ಪ್ರೇಮಾನಂದ ಮೀಟೆಯವರು ವಾಂಗ್ಖೇಮ್ ಮತ್ತು ಲೈಚೋಂಬಮ್ ವಿರುದ್ಧ ದೂರು ದಾಖಲಿಸಿದ್ದು, ಇದರ ನಂತರ ಪೊಲೀಸರು ಅವರನ್ನು ಅವರ ನಿವಾಸಗಳಿಂದ ಬಂಧಿಸಿ ಕರೆದೊಯ್ದಿದ್ದಾರೆ.

ಈ ಬಂಧನದ ನಂತರ ಅವರಿಗೆ ಸೋಮವಾರ ಜಾಮೀನು ನೀಡಲಾಗಿತ್ತು. ಆದರೆ ಇದರ ನಂತರ ಸರ್ಕಾರವು ಅವರ ವಿರುದ್ದ NSA ಅಡಿಯಲ್ಲಿ ಪ್ರಕರಣ ದಾಖಲಿಸಿದೆ.

ಇಂಫಾಲ್ ಪಶ್ಚಿಮ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಿರಣಕುಮಾರ್ ಅವರು ಸೋಮವಾರ ಹೊರಡಿಸಿದ ಆದೇಶದಲ್ಲಿ, “ಮುಂದಿನ ಆದೇಶದವರೆಗೆ ಮತ್ತು ಜಾಮೀನಿನ ಮೇಲೆ ಬಿಡುಗಡೆ ಆಗುವರೆಗೆ ವಾಂಗ್ಖೇಮ್ ಅವರನ್ನು ‘ರಾಷ್ಟ್ರೀಯ ಭದ್ರತಾ ಕಾಯ್ದೆ 1980’ ರ ಸೆಕ್ಷನ್ 3 (2) ರ ಅಡಿಯಲ್ಲಿ ಬಂಧಿಸಲಾಗುವುದು” ಎಂದು ಹೇಳಿದ್ದಾರೆ.

ಎರೆಂಡ್ರೊ ಲೈಚೋಂಬಮ್ ಅವರ ಮೇಲೆ NSA ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಇಂಫಾಲ್ ವೆಸ್ಟ್ ಪೊಲೀಸ್ ವರಿಷ್ಠಾಧಿಕಾರಿ ಎಲ್. ಮೇಘಚಂದ್ರ ಸಿಂಗ್ ಹೇಳಿದ್ದಾರೆ. ಲೈಚೋಂಬಮ್‌ ರಾಜಕೀಯ ಸಂಘಟನೆಯಾದ ‘ಪೀಪಲ್ಸ್ ರಿಸರ್ಜೆನ್ಸ್‌‌ ಆಂಡ್‌‌ ಜಸ್ಟಿಸ್‌ ಅಲೈಯನ್ಸ್‌ (ಪಿಆರ್‌‌ಜೆಎ) ಕನ್ವೀನರ್ ಆಗಿದ್ದಾರೆ.

ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ವಾಂಗ್ಖೇಮ್‌ ಮತ್ತು ಲೈಚೋಂಬಮ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ಈ ಹಿಂದೆ ಕೂಡಾ ಎರಡು ಬಾರಿ ಬಂಧಿಸಲಾಗಿತ್ತು.

ಇದನ್ನೂ ಓದಿ: ಪಿಣರಾಯಿ 2.0 – ಸಿಪಿಐ(ಎಂ)ನಿಂದ ಹೊಸ ಮುಖಗಳಿಗೆ ಮಂತ್ರಿ ಸ್ಥಾನ; ಕೆ.ಕೆ. ಶೈಲಜಾ ಔಟ್‌!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ: ಪ್ರಿಯಾಂಕ ಗಾಂಧಿ

0
'ನನ್ನ ತಾಯಿ ದೇಶಕ್ಕಾಗಿ ಮಂಗಳಸೂತ್ರವನ್ನು ತ್ಯಾಗ ಮಾಡಿದ್ದಾರೆ' ಮತ್ತು 'ನನ್ನ ಅಜ್ಜಿ ಆಡಳಿತದಲ್ಲಿ ದೇಶದ ಯುದ್ಧಕ್ಕಾಗಿ ತಮ್ಮ ಚಿನ್ನವನ್ನು ದಾನ ಮಾಡಿದ್ದಾರೆ' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದು, ಪ್ರಧಾನಿ...