Homeಮುಖಪುಟಹಸು ಕಳ್ಳಸಾಗಣೆ ಆರೋಪ: 60 ವರ್ಷದ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ, ಬೈಕ್‌ಗೆ ಕಟ್ಟಿ ಎಳೆದೊಯ್ದು ಚಿತ್ರಹಿಂಸೆ

ಹಸು ಕಳ್ಳಸಾಗಣೆ ಆರೋಪ: 60 ವರ್ಷದ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ, ಬೈಕ್‌ಗೆ ಕಟ್ಟಿ ಎಳೆದೊಯ್ದು ಚಿತ್ರಹಿಂಸೆ

- Advertisement -
- Advertisement -

ಜಾರ್ಖಂಡ್‌ನ ಗರ್ಹ್ವಾ ಜಿಲ್ಲೆಯಲ್ಲಿ ಹಸು ಕಳ್ಳಸಾಗಣೆ ಆರೋಪದ ಮೇಲೆ ಮೂವರು ವ್ಯಕ್ತಿಗಳು 60 ವರ್ಷದ ವೃದ್ದನನ್ನು ಮೋಟರ್‌ಸೈಕಲ್‌ಗೆ ಕಟ್ಟಿಹಾಕಿದ ನಂತರ, ವಿವಸ್ತ್ರಗೊಳಿಸಿ ಎಳೆದೊಯ್ದಿರುವ ಅಮಾನವೀಯ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಜಾರ್ಖಂಡ್‌ನ ರಾಜಧಾನಿ ರಾಂಚಿಯಿಂದ ಸುಮಾರು 275 ಕಿಮೀ ದೂರದಲ್ಲಿರುವ ಅಮ್ರೋರಾ ಗ್ರಾಮದ ಬಳಿ ಈ ಘಟನೆ ಸಂಭವಿಸಿದ್ದು, ಸುರ್ಸ್ವತಿ ರಾಮ್ ಎಂದು ಗುರುತಿಸಲಾದ ವ್ಯಕ್ತಿ ಶುಕ್ರವಾರ ಮಧ್ಯಾಹ್ನ ತನ್ನ ಜಾನುವಾರುಗಳೊಂದಿಗೆ ಬನ್ಶಿಧರ್ ನಗರ್ ಉಂಟಾರಿಗೆ ತೆರಳುತ್ತಿದ್ದರು ಎನ್ನಲಾಗಿದೆ.

ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಬನ್ಶಿಧರ್ ನಗರ ಉಂಟಾರಿ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಸತ್ಯೇಂದ್ರ ನಾರಾಯಣ್ ಸಿಂಗ್ ಹೇಳಿದ್ದಾರೆ.

ಎಫ್‌ಐಆರ್‌ನ ಪ್ರಕಾರ, ರಾಹುಲ್ ದುಬೆ, ರಾಜೇಶ್ ದುಬೆ ಮತ್ತು ಕಾಶಿನಾಥ್ ಭುಯಾನ್ ಎಂದು ಗುರುತಿಸಲಾದ ಮೂವರು ವ್ಯಕ್ತಿಗಳು ಮೋಟಾರ್‌ಸೈಕಲ್‌ನಲ್ಲಿದ್ದರು. ಅವರು ವೃದ್ಧನನ್ನು ತಡೆದು, ಹಸು ಕಳ್ಳಸಾಗಣೆಯಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಹಿಂದೆ ನೀಡಿದ್ದಾರೆ ಎಂದು ಸಿಂಗ್ ಹೇಳಿದ್ದಾರೆ.

ಅವರು ವೃದ್ಧನನ್ನು ವಿವಸ್ತ್ರಗೊಳಿಸಿ ತಮ್ಮ ಮೋಟಾರ್‌ಸೈಕಲ್‌ಗೆ ಕಟ್ಟಿದರು. “ಅವರು ನನ್ನನ್ನು ಸ್ವಲ್ಪ ದೂರದವರೆಗೆ ಎಳೆದೊಯ್ದರು; ನಂತರ, ನನ್ನನ್ನು ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ” ಎಂದು ರಾಮ್ ಎಫ್‌ಐಆರ್‌ನಲ್ಲಿ ತಿಳಿಸಿದ್ದಾರೆ.

ವೃದ್ಧನನ್ನು ಚಿಕಿತ್ಸೆಗಾಗಿ ಬನ್ಶಿಧರ್ ನಗರ ಉಂಟಾರಿ ಉಪವಿಭಾಗೀಯ ಆಸ್ಪತ್ರೆಗೆ ಕರೆತರಲಾಗಿತ್ತು. ಉಳಿದ ಆರೋಪಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಕಾಶಿನಾಥ್ ಭುಯಾನ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ; ಪೂಂಚ್‌ನ ನ್ಯಾಷನಲ್ ಕಾನ್ಫರೆನ್ಸ್‌ ರ‍್ಯಾಲಿಯಲ್ಲಿ ಚಾಕುವಿನಿಂದ ದಾಳಿ; 3 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...