Homeಮುಖಪುಟಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು

ಗೋ ಕಳ್ಳಸಾಗಣೆ ಆರೋಪ: ಎರಡು ವಾರಗಳ ಹಿಂದೆ ಹಲ್ಲೆಗೊಳಗಾಗಿದ್ದ ಜುನೈದ್ ಸಾವು

- Advertisement -
- Advertisement -

ಭೋಪಾಲ್: ಸುಮಾರು ಎರಡು ವಾರಗಳ ಹಿಂದೆ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ಜುನೈದ್ ಶಹಜಾದ್ (21) ಮಂಗಳವಾರ ಸಾವನ್ನಪ್ಪಿದ್ದಾನೆ.  ಇದೇ ಸಂದರ್ಭದಲ್ಲಿ ಹಲ್ಲೆಗೊಳಗಾಗಿದ್ದ ಅರ್ಮಾನ್ ಕೂಡ ಭೋಪಾಲ್‌ನ ಹಮೀದಿಯಾ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.

ಇದೇ ಜೂನ್ 5ರಂದು ಜುನೈದ್ ಮತ್ತು ಅರ್ಮಾನ್ ಅವರು ರಾಯ್ಸೇನ್ ಜಿಲ್ಲೆಯ ಸਾਂಚಿಯ ಮೆಹ್‌ಗಾವ್ ಗ್ರಾಮದ ಬಳಿ ಗೋ ಕಳ್ಳಸಾಗಣೆ ಆರೋಪದಡಿ ಗೋ ರಕ್ಷಕರಿಗೆ ಸಿಕ್ಕಿಬಿದ್ದಿದ್ದರು. ಆಗ ಇವರಿಂದ ಥಳಿಸಲ್ಪಟ್ಟರು ಎಂದು ರಾಯ್ಸೇನ್ ಪೊಲೀಸ್ ವರಿಷ್ಠಾಧಿಕಾರಿ ಪಂಕಜ್ ಪಾಂಡೆ ಹೇಳಿದ್ದಾರೆ.

ನಾವು ಜುನೈದ್ ಮತ್ತು ಹಮೀದಿಯಾ ವಿರುದ್ಧ ಗೋ ಕಳ್ಳಸಾಗಣೆ ಪ್ರಕರಣ ದಾಖಲಿಸಿದ್ದೇವೆ. ಹಾಗೆಯೇ ಇವರನ್ನು ಥಳಿಸಿದ ಮೂರು ವ್ಯಕ್ತಿಗಳ ವಿರುದ್ಧ ಜೂನ್ 9ರಂದು ಕೊಲೆ ಯತ್ನ ಪ್ರಕರಣ ದಾಖಲಿಸಿದ್ದೇವೆ. ಇದುವರೆಗಿನ ನಮ್ಮ ತನಿಖೆಯಲ್ಲಿ ಬಂಧಿತ ಮೂವರು ಬಜರಂಗದಳದೊಂದಿಗೆ ಯಾವುದೇ ಸಂಬಂಧ ಹೊಂದಿದ್ದಾರೆ ಎಂದು ಬೆಳಕಿಗೆ ಬಂದಿಲ್ಲ ಎಂದು ಪಾಂಡೆ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ನಾವು ಈಗ ಸಾವನ್ನಪ್ಪಿರುವ ಜುನೈದ್‌ನ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದೇವೆ. ಅದು ದೊರೆತ ಕೂಡಲೇ ಕೊಲೆ ಆರೋಪಗಳನ್ನು ಅನ್ವಯಿಸಲಾಗುವುದು. ಈಗ ಸಾವನ್ನಪ್ಪಿರುವ ಜುನೈದ್ ವಿರುದ್ಧ ಈ ಹಿಂದೆ ಗೋ ಕಳ್ಳಸಾಗಣೆಯ ಎರಡು ಪ್ರಕರಣಗಳು ದಾಖಲಾಗಿದ್ದವು ಎಂದು ಪಾಂಡೆ ಹೇಳಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅರ್ಮಾನ್ ಡೈರಿ ನಡೆಸುತ್ತಿದ್ದಾನೆ. ನನ್ನ ಮಗ ಜುನೈದ್ ಪೊಲೀಸರು ಆರೋಪಿಸಿರುವಂತೆ ಗೋ ಕಳ್ಳಸಾಗಣೆ ಮಾಡುತ್ತಿರಲಿಲ್ಲ. ಬದಲಾಗಿ ಜಾನುವಾರು ವ್ಯಾಪಾರ ಮಾಡುತ್ತಿದ್ದನು ಎಂದು ಅರ್ಮಾನ್ ತಂದೆ ಜಾಫರುದ್ದೀನ್ ಹೇಳಿದ್ದಾರೆ.

ಜೂನ್ 5ರಂದು ಸುಮಾರು 2:30 ಕ್ಕೆ ಅರ್ಮಾನ್ ಮತ್ತು ನಾನು ವಿದಿಶಾದ ಧನೋರಾ ಗ್ರಾಮದಲ್ಲಿದ್ದೆವು. ಅಲ್ಲಿ ನಾವು ಅವನ ವ್ಯಾನಿಗೆ ಜಾನುವಾರುಗಳನ್ನು ತುಂಬಿಸಿ ಭೋಪಾಲ್‌ಗೆ ಹಿಂತಿರುಗುತ್ತಿದ್ದೆವು. ಮೆಹ್‌ಗಾವ್ ಬಳಿಯ ವಿದಿಶಾ-ಕೌಡಿ ರಸ್ತೆಯಲ್ಲಿರುವ ಶಾಲೆಯನ್ನು ದಾಟುತ್ತಿದ್ದಾಗ, ಸುಮಾರು 10-15 ಜನರು ನಮ್ಮ ವಾಹನವನ್ನು ಹಿಂದಿಕ್ಕಿ ನಿಲ್ಲಿಸಿದರು ಎಂದು ಘಟನೆಯ ನಂತರ ಸಾಂಚಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಜುನೈದ್ ಹೇಳಿದ್ದರು.

ಈ ಜನರು ನಮ್ಮನ್ನು ನಿಂದಿಸಲು ಪ್ರಾರಂಭಿಸಿದರು. ಅವರಲ್ಲಿ ಕೆಲವರು ಅವರ ವಾಹನಗಳಲ್ಲಿ ದೊಣ್ಣೆಗಳನ್ನು ಸಹ ಇಟ್ಟುಕೊಂಡಿದ್ದರು. ಅವರು ಅರ್ಮಾನ್ ಮತ್ತು ನನ್ನನ್ನು ನಮ್ಮ ವಾಹನದಿಂದ ಹೊರಗೆ ಎಳೆದು, ಗೋವುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದೀರಿ ಎಂದು ಆರೋಪಿಸಿ, ಥಳಿಸಿದರು. ನಮ್ಮನ್ನು ಗುಂಪು ಥಳಿಸುತ್ತಲೇ ಘಟನೆಯನ್ನು ಚಿತ್ರೀಕರಿಸಿದೆ.  ಆ ನಂತರ ಗುಂಪು ನಮ್ಮನ್ನು ಅವರ ವ್ಯಾನಿನಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದರು ಎಂದು ಜುನೈದ್ ಹೇಳಿಕೆಯಲ್ಲಿ ತಿಳಿಸಿದ್ದರು.

ಈ ಘಟನೆಯ ವಿಡಿಯೋ ತುಣುಕುಗಳು ನಂತರ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ವಿಡಿಯೋ ತುಣುಕುಗಳಲ್ಲಿ ಜುನೈದ್ ಮತ್ತು ಅರ್ಮಾನ್ ಅವರನ್ನು ಗುಂಪೊಂದು ಥಳಿಸುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದ್ದರೂ ಮತ್ತು ಜುನೈದ್‌ನ ಹೇಳಿಕೆಯಲ್ಲಿ “ಜನರ ಗುಂಪು” ಎಂದು ಉಲ್ಲೇಖಿಸಿದ್ದರೂ ಕೇವಲ ಮೂವರು ಆರೋಪಿಗಳು ಮಾತ್ರ ಭಾಗಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇಸ್ರೇಲ್‌ನಲ್ಲಿರುವ ಭಾರತೀಯ ಕಾರ್ಮಿಕ ಕುಟುಂಬಗಳಿಗೆ ನಿದ್ದೆಯಿಲ್ಲದ ರಾತ್ರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...