ರೈತರನ್ನು ಹೇಡಿಗಳು ಎಂದಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಗೆ ವಿರೋಧ ಪಕ್ಷಗಳು ಭಾರಿ ಆಕ್ರೋಶ ವ್ಯಕ್ತಪಡಿಸಿವೆ. ರಾಜ್ಯ ಕಾಂಗ್ರೆಸ್ ಪಕ್ಷವು ತನ್ನ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿ, ಹೇಡಿಗಳು ರೈತರೋ ಅಥವಾ ನಿಮ್ಮ ಸರ್ಕಾರ, ಸಂಸದರೋ ಎಂದು ಪ್ರಶ್ನಿಸಿದ್ದಾರೆ.
ಕೊಡಗಿನ ಕೃಷಿ ಕಾಲೇಜಿನಲ್ಲಿ ಬಿದಿರು ಸಂಪನ್ಮೂಲ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ಸಾಲ ಮತ್ತಿತರ ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದಿದ್ದರು.
ಕೃಷಿ ಸಚಿವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಡ ಆಕ್ರೋಶ ವ್ಯಕ್ತಪಡಿಸಿದ್ದು, ಬಹಿರಂಗವಾಗಿ ರೈತ ಸಮುದಾಯದ ಕ್ಷಮೆ ಕೂರಲು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಪಕ್ಷ, ರೈತರ ಮೇಲೆ ಗುಂಡು ಹಾರಿಸಿ ಗೋಲಿಬಾರ್ ಮಾಡುವ, ಲಾಠಿ ಚಾರ್ಜ್ ಮಾಡುವ, ಕರಾಳ ಕಾಯ್ದೆಗಳ ಮೂಲಕ ರೈತರ ಬದುಕಿಗೆ ಕೊಳ್ಳಿ ಇಡುತ್ತಿರುವ ಬಿಜೆಪಿಗರು ದೊಡ್ಡ ಶೂರರೇ ಎಂದು ಬಿ.ಸಿ.ಪಾಟೀಲ್ ಅವರನ್ನು ಪ್ರಶ್ನಿಸಿದೆ.
ಇದನ್ನೂ ಓದಿ: ರೈತರನ್ನು ಹೇಡಿಗಳು ಎಂದ ಬಿ.ಸಿ.ಪಾಟೀಲ್: ಎಚ್.ಡಿ. ಕುಮಾರಸ್ವಾಮಿ ತಿರುಗೇಟು
ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎನ್ನುವ @bcpatilkourava ಅವರೇ..
ಇದೇ ರೈತರ ಮೇಲೆ ಗುಂಡು ಹಾರಿಸುವ,
ಲಾಠಿ ಚಾರ್ಜ್ ಮಾಡುವ,
ಕರಾಳ ಕಾಯ್ದೆ ಮೂಲಕ ಅವರ ಬದುಕಿಗೆ ಕೊಳ್ಳಿ ಇಡುತ್ತಿರುವ
ಬಿಜೆಪಿಗರು ದೊಡ್ಡ ಶೂರರೇ? pic.twitter.com/2lVYCIAitx— Karnataka Congress (@INCKarnataka) December 3, 2020
’ಪ್ರವಾಹದಿಂದ ನಷ್ಟಕ್ಕೆ ಒಳಗಾದ ರೈತರು, ಸಂಸದರನ್ನು ಪರಿಹಾರ ಕೇಳಿದ್ದಕ್ಕೆ ಪ್ರತಿಯಾಗಿ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ ವಿಚಾರಣೆ ಹೆಸರಲ್ಲಿ ಕಿರುಕುಳ ನೀಡಲಾಗುತ್ತಿದೆ. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೇ ಈಗ ಹೇಳಿ ಹೇಡಿಗಳು ರೈತರೋ? ಅಥವಾ ನಿಮ್ಮ ಸಂಸದ ಹಾಗು ಸರ್ಕಾರವೋ?’ ಎಂದು ಬಿಜೆಪಿ ಸರ್ಕಾರದ ಪಲಾಯನವಾದವನ್ನು, ಸುದ್ದಿ ಪತ್ರಿಕೆಯ ತುಣಿಕಿನೊಂದಿಗೆ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಹೇಡಿಗಳು ಯಾರು ಎಂದು ಉತ್ತರಿಸಿ ಎಂದು ಆರು ಪ್ರಶ್ನೆಗಳನ್ನು ಕೃಷಿ ಸಚಿವರ ಮುಂದಿಟ್ಟಿದೆ.
ಯಾರು ಹೇಡಿಗಳು ಉತ್ತರಿಸಿ @bcpatilkourava ಅವರೇ..? pic.twitter.com/LbhZIXimyd
— Karnataka Congress (@INCKarnataka) December 3, 2020
ಇದನ್ನೂ ಓದಿ: ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆಯುತ್ತಿದೆ: ಪದ್ಮವಿಭೂಷಣ ವಾಪಸ್ ಮಾಡಿದ ಪಂಜಾಬ್ ಮಾಜಿ ಸಿಎಂ
೧.ರಾತ್ರೋರಾತ್ರಿ ಮುಂಬೈಗೆ ಹಾರಿಹೋದವರು ಹೇಡಿಗಳೇ ಇಲ್ಲ ರೈತರೋ..?
೨. ಕೊರೊನಾ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಕಲ್ಪಿಸದ ಸರ್ಕಾರವೋ..?
೩.ನೆರೆ ಬಂದಾಗ ಸಂತ್ರಸ್ತರ ನೆರವಿಗೆ ನಿಲ್ಲದ ಬಿಜೆಪಿ ನಾಯಕರೋ..?
೪.ಪರಿಹಾರ ಕೇಳಿದ್ದಕ್ಕೆ ರೈತನ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವವರೋ?
೫. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಪಾಲು ಕೇಳದವರೋ?
೬. ರಾಜ್ಯದ ಸಮಸ್ಯೆ ಬಗ್ಗೆ ಕೇಂದ್ರದ ಮೇಲೆ ಒತ್ತಡ ಹಾಕದ ಬಿಜೆಪಿ ಸಂಸದರೋ? ಎಂದು ಪ್ರಶ್ನಿಸಿದ್ದಾರೆ.
‘ಕೃಷಿ ಸಚಿವರಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸದ ಬಿ.ಸಿ.ಪಾಟೀಲ್ ಅವರೇ, ರೈತರನ್ನು ಹೇಡಿ ಎಂದು ಕರೆಯುವ ನೈತಿಕತೆ ನಿಮಗೇನಿದೆ? ರೈತರ ಜೀವನ ಹಸನಾಗಿಸುವ ಒಂದೇ ಒಂದು ಯೋಜನೆಯನ್ನೂ ರೂಪಿಸದೆ ಇಂತಹ ಹೇಳಿಕೆ ನೀಡಿದ್ದಲ್ಲದೆ, ಅದನ್ನು ಸಮರ್ಥಿಸಿ ಅಹಂಕಾರವನ್ನು ತೋರುತ್ತಿದ್ದೀರಿ. ಕೃಷಿ ಸಚಿವ ಸ್ಥಾನಕ್ಕೆ ನೀವು ಅನರ್ಹರು. ಕೂಡಲೇ ರಾಜೀನಾಮೆ ಕೊಡಿ’ ಎಂದು ಕಾಂಗ್ರೆಸ್ ಆಗ್ರಹಿಸಿದೆ.
' @bcpatilkourava ಅವರೆ,
ನೆರೆಯಿಂದ ಬೆಳೆ ನೀರುಪಾಲಾದಾಗ,
ಲಾಕ್ ಡೌನ್ ನಿಂದ ಜಮೀನಿನಲ್ಲೇ ಕೊಳೆತಾಗ, ಬೆಲೆ ಇಲ್ಲದಾದಾಗ, ಸಾಲಗಾರರು ಮನೆ ಬಾಗಿಲಿಗೆ ಬಂದಾಗ ನೀವೆಲ್ಲಿದ್ದಿರಿ?ರೈತರ ಮೇಲೆ ಗುಂಡು ಹಾರಿಸಿ, ಲಾಠಿ ಚಾರ್ಜ್ ಮಾಡಿ, ಕರಾಳ ಕಾಯ್ದೆಗಳ ಮೂಲಕ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಸೃಷ್ಟಿಸಿರುವ ಬಿಜೆಪಿಗರು ದೊಡ್ಡ ಶೂರರೇ? pic.twitter.com/arLujidAUy
— Karnataka Congress (@INCKarnataka) December 3, 2020
’ನೆರೆಯಿಂದ ಬೆಳೆ ನೀರುಪಾಲಾದಾಗ, ಲಾಕ್‌ಡೌನ್‌ನಿಂದ ರೈತ ಬೆಳೆದ ಬೆಳೆ ಜಮೀನಿನಲ್ಲೇ ಕೊಳೆತಾಗ, ಬೆಲೆ ಇಲ್ಲದಾದಾಗ, ಸಾಲಗಾರರು ಮನೆ ಬಾಗಿಲಿಗೆ ಬಂದಾಗ ನೀವೆಲ್ಲಿದ್ದಿರಿ? ರೈತರ ಮೇಲೆ ಗುಂಡು ಹಾರಿಸಿ, ಲಾಠಿ ಚಾರ್ಜ್ ಮಾಡಿ, ಕರಾಳ ಕಾಯ್ದೆಗಳ ಮೂಲಕ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಸೃಷ್ಟಿಸಿರುವ ಬಿಜೆಪಿಗರು ದೊಡ್ಡ ಶೂರರೇ?’ ಎಂದು ಕೃಷಿ ಸಚಿವರು ಮತ್ತು ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಟೀಕಿಸಿದೆ.


