Homeಕರ್ನಾಟಕಮತ್ತೆ ಶುರುವಾಯಿತು ಗೋಹತ್ಯೆ ನಿಷೇಧ ಕಾನೂನು ಚರ್ಚೆ: ಗೋಹತ್ಯೆ ಅಪರಾಧವೆಂದ ಸಚಿವ ಸುಧಾಕರ್

ಮತ್ತೆ ಶುರುವಾಯಿತು ಗೋಹತ್ಯೆ ನಿಷೇಧ ಕಾನೂನು ಚರ್ಚೆ: ಗೋಹತ್ಯೆ ಅಪರಾಧವೆಂದ ಸಚಿವ ಸುಧಾಕರ್

ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾನೂನು ಸದ್ಯದಲ್ಲೇ ಜಾರಿಗೆ ತರಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡುವುದಾಗಿ ಕೆ.ಸುಧಾಕರ್‌ ತಿಳಿಸಿದ್ದಾರೆ.

- Advertisement -
- Advertisement -

ಇಂದು ಚಿಕ್ಕಬಳ್ಳಾಪುರದಲ್ಲಿ ಗೋಶಾಲೆ ಉದ್ಘಾಟನೆ ಮಾಡಿ ಮಾತನಾಡಿರುವ ಸಚಿವ ಸುಧಾಕರ್‌ ರಾಜ್ಯದಲ್ಲಿ ಮತ್ತೆ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರುವುದಾಗಿ ಘೋಷಿಸಿ, ಆ ಕುರಿತು ಚರ್ಚೆ ಹುಟ್ಟುಹಾಕಿದ್ದಾರೆ.

ಗೋವುಗಳು ನಮ್ಮ ಮನೆಯ ಸದಸ್ಯರಿದ್ದಂತೆ ಅವುಗಳನ್ನು ಹತ್ಯೆ ಮಾಡುವುದು ಅಪರಾಧ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್‌ ಹೇಳಿದ್ದಾರೆ. ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾನೂನು ಸದ್ಯದಲ್ಲೇ ಜಾರಿಗೆ ತರಲು ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಸರ್ಕಾರದ ಜೊತೆಗೆ ಜನರು ಸಹ ಗೋ ವಧೆ ತಡೆ ಬಗ್ಗೆ ಜಾಗೃತಿ ಮೂಡಿಸಬೇಕು. ಭಾರತೀಯರಾದ ನಾವು ಎಲ್ಲಾ ರಾಜ್ಯಗಳಲ್ಲೂ ಗೋಹತ್ಯೆ, ಗೋ ಮಾಂಸ ರಫ್ತು ನಿಲ್ಲಿಸಬೇಕು ಎಂದರು. ಎರಡು ಸದನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಚರ್ಚೆಯಾಗಬೇಕು. ನಮ್ಮ ಪಕ್ಷ ಈ ಬಗ್ಗೆ ಸದ್ಯದಲ್ಲೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪರೋಕ್ಷವಾಗಿ ಗೋಹತ್ಯೆ ನಿಷೇಧ ಕಾನೂನು ಜಾರಿಯಾಗುವ ಕುರಿತು ಸುಳಿವು ನೀಡಿದ್ದಾರೆ.

ಕಳೆದ ತಿಂಗಳು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಕೂಡ ಶೀಘ್ರವೇ ಕರ್ನಾಟಕ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರಲಿದೆ ಎಂದು ಹೇಳಿದ್ದರು. ಕೊರೋನಾ ಸೋಂಕು ಕಡಿಮೆಯಾದಾಗ ಅಧ್ಯಯನಕ್ಕಾಗಿ ದೇಶದಲ್ಲಿ ಈಗಾಗಲೇ ಕಾನೂನು ಜಾರಿಯಿರುವ ಗುಜರಾತ್, ಉತ್ತರಪ್ರದೇಶಗಳಿಗೆ ತಜ್ಞರ ಸಮಿತಿ ಕಳುಹಿಸಲಾಗುವುದು ಎಂದು ತಿಳಿಸಿದ್ದರು.

ಇನ್ನು, 2010ರಲ್ಲಿ ವಿಪಕ್ಷಗಳ ವಿರೋಧದ ನಡುವೆಯೂ ಸದನದಲ್ಲಿ ಯಡಿಯೂರಪ್ಪ ಗೋಹತ್ಯೆ ನಿಷೇಧ ಮಸೂದೆ ಮಂಡಿಸಿದ್ದರು.  ಆದರೆ ಕಾನೂನು ಜಾರಿಗೆ ಬರಲಿಲ್ಲ. 2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದು ಸಂವಿಧಾನ ವಿರೋಧಿ ಎಂದು ಕಾಯ್ದೆಯನ್ನು ಹಿಂಪಡೆದಿತ್ತು.

1964ರ ಜಾನುವಾರು ವಧೆ ಕಾಯ್ದೆಯನ್ನೇ ಕರ್ನಾಟಕದಲ್ಲಿ ಮುಂದುವರೆಸಲಾಗುತ್ತಿದೆ. ಈ ಕಾನೂನಿನ ಪ್ರಕಾರ 12 ವರ್ಷ ಮೇಲ್ಪಟ್ಟ ಮತ್ತು ಸಂತಾನೋತ್ಪತ್ತಿಗೆ ಅಶಕ್ತವಾಗಿರುವ, ಹಾಲು ನೀಡದ ಹಸು, ಎತ್ತು, ಎಮ್ಮೆ, ಕೋಣವನ್ನು ಮಾತ್ರ ವಧೆ ಮಾಡಬಹುದು.

2019ರಲ್ಲಿ ಮತ್ತೆ ಅಧಿಕಾರಕ್ಕೆ ಬಂದ ಬಿಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಮೇಲೆ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರುವ ಒತ್ತಡವಿದೆ. ಪಕ್ಷದ ಹಲವು ನಾಯಕರು ಮುಖ್ಯಮಂತ್ರಿಗೆ ಮನವಿ ಪತ್ರವನ್ನು ನೀಡಿದ್ದಾರೆ. ಸದ್ಯ ಸಚಿವರಾದ ಪ್ರಭು ಚೌಹಾಣ್ ಮತ್ತು ಸುಧಾಕರ್‌ ಗೋಹತ್ಯೆ ನಿಷೇಧ ಚರ್ಚೆಗೆ ಮತ್ತೆ ಜೀವ ತುಂಬುತ್ತಿದ್ದಾರೆ.

ಇನ್ನು ಗೋಮಾಂಸ ರಫ್ತಿನಲ್ಲಿ ಭಾರತಕ್ಕೆ ಸಾಕಷ್ಟು ಆದಾಯ ಬರುತ್ತಿದ್ದು, ಗೋಹತ್ಯೆ ನಿಷೇಧವಷ್ಟೇ ಮಾಡುತ್ತಾರೆ, ರಫ್ತು ಅಲ್ಲ ಎಂದು ಹಲವರು ವ್ಯಂಗ್ಯವಾಡಿದ್ದಾರೆ.


ಇದನ್ನೂ ಓದಿ: ಭಾರತದಲ್ಲಿ ಗೋಹತ್ಯೆ ಏಕೆ? ಕಲ್ಲಡ್ಕ ಪ್ರಭಾಕರ್‌ ಭಟ್ಟರು ಕೇಳಿದ್ದು ಯಾರಿಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...